ರಾಜ್ಯ

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ

ಚುನಾವಣಾ ತಂತ್ರಗಾರಿಕೆಗೆ ನಾಯಕರ ಜತೆ ಸಮಾಲೋಚನೆ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ರಾಜ್ಯದಲ್ಲಿ ಮೂರು ದಿನಗಳ ಪ್ರವಾಸ ಮಾಡಿದ ಬೆನ್ನಲ್ಲೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುರುವಾರ ಋಾಜ್ಯಕ್ಕೆ ಬರಲಿರುವ ಶಾ ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಲಿದ್ದಾರೆ. ಗುರುವಾರ ಅಮಿತ್‌ ಶಾ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಸಲ […]

ಅಮಿತಾ ಶಾ ನಾಳೆ ಮತ್ತೆ ರಾಜ್ಯಕ್ಕೆ Read More »

ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ

ಪ್ರಧಾನಿ ಮೋದಿಯ ಕಟ್ಟಾ ಅಭಿಮಾನಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಹಿರಿಯ ನಟ ಅನಂತ್‌ ನಾಗ್‌ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿ

ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ Read More »

ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ

ಪುತ್ತೂರು : ಪುತ್ತೂರಿನ ಡಿಸಿಆರ್ ಕೇಂದ್ರದಲ್ಲಿ ಫೆ.13 ರಂದು ಆರಂಭಗೊಂಡ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ “ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ” ಕುರಿತ ರಾಷ್ಟ್ರಮಟ್ಟದ ತರಭೇತಿ ಕಾರ್ಯಕ್ರಮದ ಸಮಾಪನಾ ಸಮಾರಂಭವು ಸೋಮವಾರ ನಡೆಯಿತು. ರೋಗಶಾಸ್ತ್ರ ವಿಜ್ಞಾನಿ ಡಾ. ರಾಜಶೇಖರ ಎಂಟು ದಿನಗಳ ಕಾಲ ನಡೆದಂತ ತರಬೇತಿ ಕಾರ್ಯಕ್ರಮದ ಕುರಿತಂತೆ ಸಂಕ್ಷಿಪ್ತ ವಿವರಣೆಯನ್ನು ಸಭೆಗೆ ನೀಡಿದರು. ಕೀಟಶಾಸ್ತ್ರದ ಪ್ರಧಾನ ವಿಜ್ಞಾನಿ ಡಾ. ಟಿ.ಎನ್.ರವಿಪ್ರಸಾದ್ ಅಭ್ಯರ್ಥಿಗಳಿಗೆ ತರಬೇತಿಯ ಸೂಕ್ತ ಅಳವಡಿಕೆಯ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಗೇರು ಮತ್ತು ಕೊಕ್ಕೊ

ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ Read More »

ಫೆ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ

ಪರಿಷ್ಕೃತ ವೇಳಾಪಟ್ಟಿ, ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಈ ಹಿಂದೆ ಫೆ.23ರಿಂದ ಮಾರ್ಚ್ 1 ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು, ನಂತರ ಅದನ್ನು ಪರಿಷ್ಕರಿಸಲಾಯಿತು. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಈ ಪರೀಕ್ಷೆಗಳು ಫೆ.27 ರಿಂದ ಮಾರ್ಚ್ 4ರ ತನಕ ನಡೆಯಲಿವೆ.ಪ್ರಶ್ನೆ ಪತ್ರಿಕೆಗಳನ್ನು ಸಂಬಂಧಿತ ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ ನೀಡಲಾಗುತ್ತದೆ, ಅವರು ಪ್ರಶ್ನೆ ಪತ್ರಿಕೆಗಳನ್ನು ಬಿಗಿ ಭದ್ರತೆಯಲ್ಲಿ ಇರಿಸುವಂತೆ ಹಾಗೂ

ಫೆ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ Read More »

ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ. ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ

ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ Read More »

ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ವಿಟ್ಲದ ಮಾಧವ ಮತ್ತು ರೋಹಿತ್ ಎಸ್ ಎನ್  ಅವರಿಂದ ಕರಾಟೆ

ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ Read More »

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಬೂಡೋಕಾನ್ ರಾಜ್ಯಮಟ್ಟದ ಕರಾಟೆ ಚಾಪಿಂಯನ್ ಶಿಪ್ ನಲ್ಲಿ ವಿಜೇತರಾದ ವಿದ್ಯಾರ್ಥಿಗಳು

ಪುತ್ತೂರು : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಫೆ.18 ರಂದು ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ವಿಧ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ,. ವಿಟ್ಲ ಜೇಸೀಸ್ ಸ್ಕೂಲ್ : ಧ್ರುವ ಕಟಾ:1st ಕುಮಿಟೆ:1st, ಸಾನ್ವಿ ಕಟಾ:3rd ಕುಮಿಟೆ : 3rd, .ಮನಸ್ವಿ ಬಿ ಕುಮಿಟೆ : 3rd,

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಬೂಡೋಕಾನ್ ರಾಜ್ಯಮಟ್ಟದ ಕರಾಟೆ ಚಾಪಿಂಯನ್ ಶಿಪ್ ನಲ್ಲಿ ವಿಜೇತರಾದ ವಿದ್ಯಾರ್ಥಿಗಳು Read More »

ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

ಪುತ್ತೂರು: ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ ಅವರು ಇಂದು ನಿಧನರಾದರು. ಅವರಿಗೆ 85 ವರ್ಷವಾಗಿತ್ತು. ವಯೋ ಸಹಜ ಅಸೌಖ್ಯದಿಂದ ಇದ್ದ ಇವರು ಇಂದು ಬೆಳಿಗ್ಗೆ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಬಹುಮುಖ ಪ್ರತಿಭೆಯ ಮುದ್ರಾಡಿ ಅವರು ಕೈಯಾಡಿಸದ ಕ್ಷೇತ್ರವಿಲ್ಲ. ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ಅವರು ಸಾಹಿತ್ಯ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಕೈಯಾಡಿಸಿದರೂ ಕಾವ್ಯ ಅವರಿಗೆ ವಿಶೇಷವಾಗಿ

ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ Read More »

ಮಿತಿ ಮೀರಿದ ರೂಪಾ-ರೋಹಿಣಿ ಜಗಳ | ಇಬ್ಬರಿಗೂ ನೊಟೀಸ್ ಜಾರಿ ಮಾಡುವಂತೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಈ ನಿಟ್ಟಿನಲ್ಲಿ ಇಬ್ಬರಿಗೂ ನೊಟೀಸ್ ನೀಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರಿಬ್ಬರ ಜಗಳ ನಿನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದ್ದು ಹಲವು ವಿಷಯಗಳು ಪ್ರಸ್ತಾಪವಾಗಿದೆ. ವೈಯಕ್ತಿಕವಾಗಿ ಇವರಿಬ್ಬರಿಗೆ ಭಿನ್ನಾಭಿಪ್ರಾಯಗಳಿದ್ದರೆ ಏನಾದರೂ ಮಾಡಿಕೊಳ್ಳಲಿ, ಅಥವಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ

ಮಿತಿ ಮೀರಿದ ರೂಪಾ-ರೋಹಿಣಿ ಜಗಳ | ಇಬ್ಬರಿಗೂ ನೊಟೀಸ್ ಜಾರಿ ಮಾಡುವಂತೆ ಸಿಎಂ ಬೊಮ್ಮಾಯಿ ಸೂಚನೆ Read More »

ಎನ್‍ಎಸ್‍ ಯುಐ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ

ಪುತ್ತೂರು : ಬೆಂಗಳೂರಿನ ಶಿರೂರ್ ಪಾರ್ಕಿನಲ್ಲಿ ನಡೆದ ರಾಜ್ಯ ಎನ್ಎಸ್‍ಯುಐ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಎನ್ಎಸ್ ಯುಐ  ಸಮಿತಿ ಉಪಾಧ್ಯಕ್ಷರಾದ ಫಾರೂಕ್ ಬಾಯಂಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ ಮಾಡಿದರು. 2014ರಿಂದ ನಗರ ಹಾಗೂ ತಾಲೂಕು ಮಟ್ಟದಲ್ಲಿ ಎನ್‍ಎಸ್ ಯುಐ ಸಂಘಟನೆಯಲ್ಲಿ ಸಕ್ರಿಯರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿರುವ ಫಾರೂಕ್ ಅವರು ರಾಜ್ಯ ಮಟ್ಟದ ಇಂದಿರಾ ಕಾರ್ಯಗಾರ, ಪ್ರೇರಣಾ ಜಿಲ್ಲಾ ಕಾರ್ಯಾಗಾರ ಆಯೋಜಿಸುವ ಮೂಲಕ ಎನ್. ಎಸ್.ಯು.ಐಗೆ ಹೊಸ ಹುರುಪು ನೀಡಿದ್ದರು.ಇವರ

ಎನ್‍ಎಸ್‍ ಯುಐ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ Read More »

error: Content is protected !!
Scroll to Top