ರಾಜ್ಯ

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ!

ಜಲಕ್ಷಾಮ ಎದುರಿಸಲು ನೀರಿನ ಮಿತ ಬಳಕಗೆ ಸೂಚನೆ ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನಲ್ಲಿ ಕಾರು ತೊಳೆದರೆ ಬರೋಬ್ಬರಿ 5 ಸಾವಿರ ರೂ. ದಂಡ ಬೀಳಲಿದೆ. ಈ ಬಾರಿ ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವುದು ಸೇರಿದಂತೆ ಹಲವು ಮಹತ್ವದ ಸೂಚನೆಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶನ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು […]

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ! Read More »

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್‌

ಕೊಬ್ಬಿನಂಶ ಹೆಚ್ಚು ಇದೆ ಎಂಬ ಕಾರಣಕ್ಕೆ ವಿತರಣೆ ಸ್ಥಗಿತಗೊಳಿಸಲು ಸರಕಾರದ ಆದೇಶ ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್‌ Read More »

ಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ…

ಕೆಲವು ತಿಂಗಳಿಂದ ಸ್ಥಗಿತಗೊಂಡಿರುವ ಗ್ಯಾರಂಟಿಗಳು ಬೆಂಗಳೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ ಎರಡು ಮಹತ್ವಾಕಾಂಕ್ಷಿ ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಕೆಲ ತಿಂಗಳಿಂದ ಸ್ಥಗಿತಗೊಂಡಿದ್ದು, ಜನ ಗೊಂದಲದಲ್ಲಿದ್ದಾರೆ.ಅನ್ಯಭಾಗ್ಯದಡಿ ಬಿಪಿಎಲ್‌ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ನೀಡಲಾಗುತ್ತಿದ್ದ ಹಣ 5 ತಿಂಗಳಿನಿಂದ ಸ್ಥಗಿತಗೊಂಡಿದ್ದರೆ ಗೃಹಲಕ್ಷ್ಮಿ ಹಣ 3 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ.ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ

ಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ… Read More »

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಚೇತನ್ (45), ರೂಪಾಲಿ (43), ಪ್ರಿಯಂವದಾ ಮತ್ತು ಕುಶಾಲ್ (15) ಎಂದು ಗುರುತಿಸಲಾಗಿದೆ. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿವೆ. ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ Read More »

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು

ನೀರಿನಲ್ಲಿ ಯೋಗನಿದ್ರೆಯಲ್ಲಿರುವಾಗಲೇ ಬಂದ ಮೃತ್ಯು ಚಾಮರಾಜನಗರ: ನುರಿತ ಯೋಗಪಟುವೊಬ್ಬರು ನದಿಯಲ್ಲಿ ಯೋಗ ಮಾಡುತ್ತಿರುವಾಗಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಮೃತ ದುರ್ದೈವಿ. ತೀರ್ಥಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು Read More »

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ

ಅಲ್ಪಸಂಖ್ಯಾತರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂದು ಟೀಕೆ ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಪಾಕಿಸ್ಥಾನ್‌ ಜಿಂದಾಬಾದ್ ಎಂದು ಹೇಳುವವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮೈಸೂರು ಉದಯಗಿರಿ ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ Read More »

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಜನ ಮನೆ ಮಠ ಕಳೆದುಕೊಂಡು ಬೀದಿಗೆ ಭೀಳುವ, ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳ ಬಗ್ಗೆ ರಾಜ್ಯ ಸರಕಾರ ತೆಗೆದುಕೊಂಡ ಮಹತ್ವದ ನಿರ್ಣಯಗಳಂತೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ ೨೦೨೫ ರ ಮುಖ್ಯಾಂಶಗಳು:- ೧. ಸದರಿ ಆಧ್ಯಾದೇಶವು ದಿನಾಂಕ: ೧೨.೦೨.೨೦೨೫ ರಂದು ಜಾರಿಗೆ ಬಂದಿದೆ.

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ Read More »

ಅಪಾರ್ಟ್‌ಮೆಂಟ್‌ ನಿಂದ ಜಿಗಿದು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ SSLC ಪರೀಕ್ಷೆ ಹತ್ತಿರ ಬರುತ್ತಾ ಇದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ.

ಅಪಾರ್ಟ್‌ಮೆಂಟ್‌ ನಿಂದ ಜಿಗಿದು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

error: Content is protected !!
Scroll to Top