ರಾಜ್ಯ

ಬಿಜೆಪಿಯಲ್ಲೀಗ ರಾಮುಲು-ರೆಡ್ಡಿ ಕಲಹ

ಒಂದು ಕಾಲದ ಗೆಳೆಯರ ನಡುವೆ ತೀವ್ರ ಕಚ್ಚಾಟ ಬೆಂಗಳೂರು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ಬಿಜೆಪಿಯಲ್ಲಿ ಈಗ ನಡೆಯುತ್ತಿರುವ ಶ್ರೀ ರಾಮುಲು ಮತ್ತು ಜನಾರ್ದನ ರೆಡ್ಡಿ ಕಲಹವೇ ಸಾಕ್ಷಿ. ಬಳ್ಳಾರಿಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಶ್ರೀರಾಮುಲು ಮತ್ತು ರೆಡ್ಡಿ ಒಂದು ಕಾಲದಲ್ಲಿ ರಾಮ-ಲಕ್ಷ್ಮಣರಂತೆ ಪಕ್ಷಕ್ಕಾಗಿ ದುಡಿದವರು. ಆದರೆ ಈಗ ಪರಸ್ಪರರ ವಿರುದ್ಧ ಕತ್ತಿ ಮಸೆಯುವ ಹಂತಕ್ಕೆ ಅವರ ದ್ವೇಷ ಬಂದಿದೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮಧ್ಯೆ ಕಿಡಿ ಹಚ್ಚಿದ್ದು ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಬಂಗಾರು […]

ಬಿಜೆಪಿಯಲ್ಲೀಗ ರಾಮುಲು-ರೆಡ್ಡಿ ಕಲಹ Read More »

ವಾಹನಗಳ ಮೇಲೆ ವಿವಾದಾತ್ಮಕ ಸ್ಟಿಕ್ಕರ್‌ ಹಾಕಿದರೆ ದಂಡ

ಭಾವನೆ ಕೆರಳಿಸುವ ಸ್ಟಿಕ್ಕರ್‌, ಪೋಸ್ಟರ್‌ಗಳ ವಿರುದ್ಧ ಕ್ರಮ ಬೆಂಗಳೂರು: ವಾಹನಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ ವಾಹನ ಸೀಜ್ ಆಗುವ ಸಾಧ್ಯತೆಯೂ ಇದೆ. ಆಟೋ, ಟ್ಯಾಕ್ಸಿ ಮತ್ತಿತರ ವಾಹನಗಳ ಮೇಲೆ ವಿವಾದಾತ್ಮಕ ಫೋಟೊ ಅಥವಾ ಬರಹಗಳ ಸ್ಟಿಕ್ಕರ್‌ ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಮಚ್ಚು, ಲಾಂಗ್‌ನಂಥ ಆಯುಧಗಳನ್ನು ಹಿಡಿದು ರಕ್ತ

ವಾಹನಗಳ ಮೇಲೆ ವಿವಾದಾತ್ಮಕ ಸ್ಟಿಕ್ಕರ್‌ ಹಾಕಿದರೆ ದಂಡ Read More »

4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ

ಬೆಳಗಾವಿ : ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿದ ಘಟನೆ ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ನಡೆದಿದೆ. ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್​ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳು ಎನ್ನಲಾಗಿದೆ. ಶಿವಬಸಪ್ಪ

4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ Read More »

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತವಾಗಿ ನೀಡಲು ಸರಕಾರ ನಿರ್ಧರಿಸಿದೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ ಅಸ್ಥಿಮಜ್ಜೆ (bone marrow transplant (BMT) ಕಸಿ ಅಗತ್ಯವಿದೆ. ಪ್ರಸ್ತುತ ಈ ಚಿಕಿತ್ಸೆ ಬಹಳ ದುಬಾರಿಯಾಗಿದ್ದು, ಬಡವರ ಕೈಗೆಟುಕುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20-40 ಲಕ್ಷ

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ Read More »

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಮುಂಜಾನೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ

ಪಿಎಫ್ಐ ಸೀಕ್ರೆಟ್‌ ಸರ್ವಿಸ್ ಟೀಮ್ ಸದಸ್ಯ ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಕೊಲೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ Read More »

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್‍ ಬೆಂಗಳೂರಿಗೆ | ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್‍, ಹರೀಶ್‍ ಪೂಂಜಾ, ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್‍ ಬೆಂಗಳೂರಿಗೆ | ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ

ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ

ಸ್ಥಳೀಯರು ನೆರವಾಗಿರುವ ಅನುಮಾನ ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆಯ ಸೂತ್ರಧಾರ ಮುರುಗಂಡಿ ಥೇವರ್ ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದು ತಲಪಾಡಿ ಸಮೀಪ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರು ಸಹಕಾರಿ ಬ್ಯಾಂಕಿನ ಪರಿಸರವನ್ನು ಅಧ್ಯಯನ ಮಾಡಿ ಹೋಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ.ಕೋಟೆಕಾರು ಪರಿಸರದಲ್ಲಿ ಓಡಾಡಿ ಎಲ್ಲ ವಿಚಾರ ತಿಳಿದುಕೊಂಡು ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ Read More »

ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌ ಆದೇಶ

ಏನೇ ದೂರು ಇದ್ದರೂ ಕಾನೂನಿನಡಿ ಪರಿಹಾರ ಕಂಡುಕೊಳ್ಳಲು ಮಹೇಶ್‌ ಶೆಟ್ಟಿ ತಿಮರೋಡಿಗೆ ನಿರ್ದೇಶನ ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಸಹಚರರಿಗೆ ಹೈಕೋರ್ಟ್ ನಿರ್ದೇಶಿಸಿದೆ.ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಾನೂನು ಕ್ರಮ

ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌ ಆದೇಶ Read More »

error: Content is protected !!
Scroll to Top