ದ.ಕ., ಕೊಡಗು ಗೌಡ ಸಮಾಜದಿಂದ ಸ್ನೇಹ ಮಿಲನ, ಷಷ್ಟ್ಯಾಬ್ದಿ ಸಂಭ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ | ಬೆಂಗಳೂರು ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮ
ಕೊಡಗು: ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ ಷಷ್ಟ್ಯಾಬ್ಧಿ ಸಂಭ್ರಮ, ಪ್ರತಿಭಾ ಪುರಸ್ಕಾರ, ಸಮಾಜದ ಮಾಜಿ ಅಧ್ಯಕ್ಷರು, ಮಹಿಳಾ ಹಾಗೂ ಯುವ ಘಟಕದ ಮಾಜಿ ಅಧ್ಯಕ್ಷರು ಗಳಿಗೆ, ಕಾರ್ಯದರ್ಶಿಗಳಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮವರು ಸಂಘಟಿತರಾಗಬೇಕು, ಅರೆಭಾಷೆ ಮಾತಾಡುತ್ತಾ ಭಾಷೆಯನ್ನು ಬೆಳೆಸಬೇಕು. […]









