ರಾಜ್ಯ

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1 […]

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ

ಜಿಲ್ಲಾಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆಗೆ ವಿಪಕ್ಷ ಸಿಡಿಮಿಡಿ ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಗದರಿಸಿ ಕೆಳಗಿಳಿಯಲು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ವಿಪಕ್ಷಗಳು ತೀಕ್ಷ್ಣವಾಗಿ ಟೀಕಿಸಿವೆ. ಈ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ದಲಿತರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದು ಎಂದು ಅನೇಕರು ಟೀಕಿಸಿದ್ದಾರೆ. ಜಿಲ್ಲಾಧಿಕಾರಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಘಟನೆ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಜಿಲ್ಲಾಧಿಕಾರಿ ಮೇಲೆ

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವೆ ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ Read More »

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ

ಪಾಲುದಾರಿಕೆ ವ್ಯವಹಾರದಲ್ಲಿ ಬೆನ್ನಿಗಿರಿದ ಪರಂಗಿಪೇಟೆಯ ಸ್ನೇಹಿತರು ಉಡುಪಿ : ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸುವ ಭರವಸೆ ನೀಡಿ ಉದ್ಯಮಿಯೋರ್ವರಿಗೆ 2 ಕೋಟಿ ರೂ. ವಂಚಿಸಿದ ಪ್ರಕರಣ ಕಾರ್ಕಳದಲ್ಲಿ ಸಂಭವಿಸಿದೆ. ಈ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಮಹಾಲಕ್ಷ್ಮೀ ಪ್ರಭಾ ಕಾಂಪ್ಲೆಕ್ಸ್‌ನಲ್ಲಿ ಮೊಬೈಲ್‌ ಅಂಗಡಿ ಹೊಂದಿರುವ ಮರ್ಣೆಯ ದಾವುದುಲ್‌ ಹಕೀಂ ಎಂಬವರಿಗೆ ಕಳೆದ 20 ವರ್ಷಗಳಿಂದ ಪರಿಚಯಸ್ಥರಾಗಿರುವ ಫರಂಗಿಪೇಟೆಯ ಅಬ್ದುಲ್‌ ರಹಿಮಾನ್‌, ಹಫೀಜ್ ಟಿ.ಎ., ಅಯ್ಯೂಬ್‌, ಸದಕತ್ತುಲ್ಲಾ, ಮೊಹಮ್ಮದ್‌ ಎಂಬವರು ವಂಚನೆ

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ Read More »

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ

ಬಾಕಿಯಿರುವ 30 ಸಾವಿರ ಕೋ.ರೂ. 7 ದಿನಗಳಲ್ಲಿ ಬಿಡುಗಡೆ ಮಾಡಲು ಒತ್ತಾಯ ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿಯಿಟ್ಟಿರುವ ಸುಮಾರು 30 ಸಾವಿರ ಕೋಟಿ ರೂಪಾಯಿ ಕೂಡಲೇ ಬಿಡುಗಡೆಗೊಳಿಸದಿದ್ದರೆ ಭಾರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ ರಾಜ್ಯ ಗುತ್ತಿಗೆದಾರರ ಸಂಘ ಆರು ಸಚಿವರಿಗೆ ಬರೆದಿರುವ ಪತ್ರ ಸರಕಾರಕ್ಕೆ ಮತ್ತೊಮ್ಮೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್‌ ಸರಕಾರದಲ್ಲಿ ಶೇ. 60 ಕಮಿಷನ್‌ ಇಲ್ಲದೆ ಕೆಲಸವಾಗುವುದಿಲ್ಲ ಎಂದು ವಿಪಕ್ಷ ಆರೋಪಿಸಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದವರು ನೀಡಿರುವ ಎಚ್ಚರಿಕೆ ವಿಪಕ್ಷಕ್ಕೆ ಹೋರಾಟ ಮಾಡಲು ಇನ್ನೊಂದು ಅಸ್ತ್ರವಾಗಿ

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ Read More »

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ

ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ದುರುಳರ ವಿಕೃತಿ ಬೆಂಗಳೂರು: ಚಾಮರಾಜಪೇಟೆಯ ಓಲ್ಡ್​ ಪೆನ್ಶನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿ ಸ್ಥಳ ಮಹಜರು ನಡೆಸಿದ್ದಾರೆ. ನಿನ್ನೆ ತಡರಾತ್ರಿಯಿಂದಲೇ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದರು. ಕರ್ಣ ನೀಡಿದ ​ದೂರು ಆಧರಿಸಿ

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ Read More »

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

ರಸ್ತೆಯಲ್ಲಿ ಮೇಲೆ ಮಲಗಿದ್ದ ದನಗಳ ಮೇಲೆ ಕ್ರೌರ್ಯ ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಚಾಮರಾಜಪೇಚೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಕೆಚ್ಚಲನ್ನು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಅವರ ಬಳಿ 8 ಹಸುಗಳಿದ್ದು, ಈ

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು Read More »

ಮತ್ತೆ ಮೇಲೆದ್ದು ಬಂದ ವಕ್ಫ್‌ ವಿವಾದ : ಜ.20ರಂದು ಮಂಡ್ಯದಲ್ಲಿ ಬಂದ್‌

ಪುರಾತನ ಸ್ಮಾರಕಗಳು, ಶಾಲೆ ಸೇರಿ 70ಕ್ಕೂ ಹೆಚ್ಚು ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ಮಂಡ್ಯ: ರಾಜ್ಯದಲ್ಲಿ ವಕ್ಫ್​​ ಮಂಡಳಿ ​ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪುರಾತನ ಮಂಟಪಗಳು, ಸ್ಮಾರಕಗಳು ಹಾಗೂ ಪುರಾತತ್ವ ಇಲಾಖೆಯ ಆಸ್ತಿ ಮತ್ತು ರೈತರ ಜಮೀನೂ ಸೇರಿದಂತೆ 70ಕ್ಕೂ ಹೆಚ್ಚು ಭೂಮಿ ಪಹಣಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್​ ಮಂಡಳಿ ಎಂದು ನಮೂದು ಆಗಿದೆ. ಕಿರಂಗೂರ, ಕೆ.ಶೆಟ್ಟಹಳ್ಳಿ, ಬಾಬಾರಾಯನಕೊಪ್ಪಲು, ದರಸಕುಪ್ಪೆ ಗ್ರಾಮಗಳ 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​

ಮತ್ತೆ ಮೇಲೆದ್ದು ಬಂದ ವಕ್ಫ್‌ ವಿವಾದ : ಜ.20ರಂದು ಮಂಡ್ಯದಲ್ಲಿ ಬಂದ್‌ Read More »

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ

ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಒಡ್ಡಿ ಬಂದಿರುವ ಪತ್ರ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇನ್ನೊಂದು ಸಮರಕ್ಕೆ ಕಾರಣವಾಗಿದೆ. ಬೆದರಿಕೆ ಒಡ್ಡುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.ಈ ಕುರಿತು ಟ್ವೀಟ್‌ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ Read More »

error: Content is protected !!
Scroll to Top