ರಾಜ್ಯ

ಇಂದು ಮದ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

ಸಂಪುಟ ಸಹೋದ್ಯೋಗಿಗಳ ಜೊತೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಭಾವುಕರಾಗಿ ನಿರ್ಧಾರ ಪ್ರಕಟಿಸಿದ ಸಿಎಂ ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ. ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು […]

ಇಂದು ಮದ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ Read More »

ಪುತ್ರನಿಗೆ ಯಾವುದೇ ಸ್ಥಾನಮಾನ ಬೇಡ ಎಂದು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

ಸಚಿವ ಸಂಪುಟಕ್ಕೆ ಡಾ.ಯತೀಂದ್ರ ಸೇರ್ಪಡೆಗೆ ಒಪ್ಪದ ಸಿಎಂ ನವದೆಹಲಿ: ಸಿದ್ದರಾಮಯ್ಯನವರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದು ಇದಕ್ಕೆ ಪ್ರಾಯಶ್ಚಿತ್ತವಾಗಿ ಅವರ ಪುತ್ರ ಎಂಎಲ್‌ಸಿ ಡಾ.ಯತೀಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ತೀರಾ ಒತ್ತಡ ಬಿದ್ದರೆ ಅವರನ್ನು ಉಪಮುಖ್ಯಮಂತ್ರಿಯೂ ಮಾಡಿಬಿಡುವುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ಹಾಕಿತ್ತು. ಆದರೆ ಸಿದ್ದರಾಮಯ್ಯ ಹೈಕಮಾಂಡ್‌ನ ಈ ಪ್ರಸ್ತಾಪವನ್ನು ಸಾರಾಸಗಟು ತಿರಸ್ಕರಿಸಿದ್ದಾರೆ. ಹೀಗಾಗಿ ಹೈಕಮಾಂಡ್‌ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದೆ ಎಂದು ಮೂಲವೊಂದು ತಿಳಿಸಿದೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ

ಪುತ್ರನಿಗೆ ಯಾವುದೇ ಸ್ಥಾನಮಾನ ಬೇಡ ಎಂದು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ Read More »

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ ಗವರ್ನರ್‌ ನಡೆ ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ತಡರಾತ್ರಿ 11.45ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ Read More »

ಹೌಸ್‌ಪಾರ್ಟಿ ಮದ್ಯದ ಪರ್ಮಿಟ್‌ ಶುಲ್ಕ ಏರಿಕೆ

ಮೆಹಂದಿ, ಬರ್ತ್‌ಡೇಯಂಥ ಹೌಸ್‌ ಪಾರ್ಟಿಗಳ ಮದ್ಯದ ಪರ್ಮಿಟ್‌ ಶುಲ್ಕ ದುಪ್ಪಟ್ಟು ಬೆಂಗಳೂರು : ಬರ್ತ್​ ಡೇ, ಮೆಹಂದಿ, ಮದುವೆ, ಗೆಟ್-ಟು-ಗೆದರ್ ಎಂದು ಮನೆಯಲ್ಲಿ ಪಾರ್ಟಿಗಳಲ್ಲಿ ಮದ್ಯ ಸರಬರಾಜು ಮಾಡಲು ನೀಡಲಾಗುವ ತಾತ್ಕಾಲಿಕ ಮದ್ಯದ ಪರ್ಮಿಟ್ (CL-5 ಲೈಸೆನ್ಸ್) ಶುಲ್ಕವನ್ನು ಸರ್ಕಾರ ಬಹುತೇಕ ದುಪ್ಪಟ್ಟು ಮಾಡಿದೆ. ಆರ್ಥಿಕ ಇಲಾಖೆ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ ವಾಣಿಜ್ಯೇತರ ಮತ್ತು ವಾಣಿಜ್ಯ ಉದ್ದೇಶದ ಪಾರ್ಟಿಗಳ ಮದ್ಯದ ಪರ್ಮಿಟ್ ದರಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಹೌಸ್ ಪಾರ್ಟಿಗಳಲ್ಲಿ ಇದುವರೆಗೆ ಪ್ರತಿದಿನಕ್ಕೆ 11,500 ರೂ.

ಹೌಸ್‌ಪಾರ್ಟಿ ಮದ್ಯದ ಪರ್ಮಿಟ್‌ ಶುಲ್ಕ ಏರಿಕೆ Read More »

ಮಧ್ಯರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರ ಸಭೆ

ಕ್ಷಣಕ್ಷಣಕ್ಕೆ ಕುತೂಹಲ ಕೆರಳಿಸುತ್ತಿರುವ ರಾಜಕೀಯ ವಿದ್ಯಮಾನ ಬೆಂಗಳೂರು: ದೆಹಲಿಯಿಂದ ವಿಶೇಷ ವಿಮಾನದಲ್ಲಿ ನಿನ್ನೆ ರಾತ್ರಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಶಾಸಕ ಪೊನ್ನಣ್ಣ ಅವರು ಸಿಎಂ ನಿವಾಸಕ್ಕೆ ಆಗಮಿಸಿದರು. ಸಿಎಂ ಮನೆಗೆ ಬಂದ ನಂತರ ಗೃಹ

ಮಧ್ಯರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರ ಸಭೆ Read More »

ಚಿಪ್ಸ್‌, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ!

ಬೇಕರಿ ತಿನಿಸುಗಳಲ್ಲಿ ವ್ಯಾಪಕವಾಗಿ ರಾಸಾಯನಿಕ ಬಳಸುತ್ತಿರುವುದು ಪತ್ತೆ ಬೆಂಗಳೂರು : ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಕರ್ಷಣೆಗಾಗಿ ಸಿಹಿತಿಂಡಿಗಳು, ಪಫ್ಸ್‌, ಚಿಪ್ಸ್‌ಮುಂತಾದ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್‌ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಇಲಾಖೆಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯದ ಮೂಲೆ ಮೂಲೆಗಳ ಬೇಕರಿಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು

ಚಿಪ್ಸ್‌, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ! Read More »

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ?

ಕೊನೆಗೂ ಪಟ್ಟ ಬಿಡಲು ಸಿದ್ದರಾಮಯ್ಯ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್‌ ಬೆಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ ತಲುಪಿದ್ದು, ಕೊನೆಗೂ ಕಾಂಗ್ರೆಸ್‌ ಹೈಕಮಾಂಡ್‌ ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಗುರುವಾರ ರಾಜೀನಾಮೆ ಬಳಿಕ

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ? Read More »

108 ಆಂಬುಲೆನ್ಸ್‌ ಸೇವೆ ನಿರ್ವಹಣೆಗೆ ಕಮಾಂಡ್‌ ಕಂಟ್ರೋಲ್‌ ಸೆಂಟರ್‌

ಸರ್ಕಾರದಿಂದಲೇ ಇನ್ನು ಆಂಬುಲೆನ್ಸ್‌ ಸೇವೆ ನಿರ್ವಹಣೆ ಬೆಂಗಳೂರು: ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ ಎಂಬ ಘೋಷವಾಕ್ಯದಡಿಯಲ್ಲಿ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ.

108 ಆಂಬುಲೆನ್ಸ್‌ ಸೇವೆ ನಿರ್ವಹಣೆಗೆ ಕಮಾಂಡ್‌ ಕಂಟ್ರೋಲ್‌ ಸೆಂಟರ್‌ Read More »

ರಾಜ್ಯಸಭೆ ಚುನಾವಣೆ : ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಕಾಂಕ್ಷಿ

ಪಕ್ಷ ಜವಾಬ್ದಾರಿ ಕೊಟ್ಟರೆ ನಿರ್ವಹಿಸಲು ರೆಡಿ ಎಂದ ಸದಾನಂದ ಗೌಡ ಬೆಂಗಳೂರು: ರಾಜ್ಯಸಭೆಗೆ ನಾನು ಕೂಡ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರಿಗೆ ಈಗಾಗಲೇ ತಿಳಿಸಿದ್ದೇನೆ. ನಾನು ಈಗಾಗಲೇ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿದ್ದೇನೆ. ಆದರೆ ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ರಾಜ್ಯಸಭೆಗೆ ಹೋಗುವ ಆಸೆ ಇದೆ ಎಂಬುದನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ

ರಾಜ್ಯಸಭೆ ಚುನಾವಣೆ : ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಕಾಂಕ್ಷಿ Read More »

ಮೂರಿನಕಟ್ಟೆ ಧ್ವಂಸ ವಿವಾದ : ಭಟ್ಕಳ ಬೂದಿ ಮುಚ್ಚಿದ ಕೆಂಡ

ನಿಷೇಧಾಜ್ಞೆ, ಪೊಲೀಸರ ಸರ್ಪಗಾವಲಿನ ಮಧ್ಯೆ ಜನಜೀವನ ಕಾರವಾರ: ಕೋಮು ಹಿಂಸಾಚಾರದ ಕರಾಳ ಇತಿಹಾಸ ಹೊಂದಿರುವ ಭಟ್ಕಳ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಹಿಂದುಗಳ ಪವಿತ್ರ ಮೂರಿನಕಟ್ಟೆ ಧ್ವಂಸ ಮಾಡಿದ ಹಿನ್ನೆಲೆ ಹಿಂದೂ ಮತ್ತು ಮುಸ್ಲಿಮರ ನಡುವೆ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ಬೂದಿಮುಚ್ಚಿದ ಕೆಂಡಂದಂತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ಶಹರ ಹಾಗೂ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಮದ್ಯದಂಗಡಿಗಳನ್ನು ಬಂದ್ ಮಾಡಲುಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಗಲಾಟೆ ತಣ್ಣಗಾಗದ ಕಾರಣ 3 ದಿನಗಳ ಕಾಲ ಅಂದರೆ ಮೇ

ಮೂರಿನಕಟ್ಟೆ ಧ್ವಂಸ ವಿವಾದ : ಭಟ್ಕಳ ಬೂದಿ ಮುಚ್ಚಿದ ಕೆಂಡ Read More »

error: Content is protected !!
Scroll to Top