ರಾಜ್ಯ

ಕಾಂಗ್ರೆಸ್‌ ನಕಲಿ ವೆಬ್‌ಸೈಟ್‌ : ದೂರು ದಾಖಲು

ಪಕ್ಷ, ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳು ಬೆಂಗಳೂರು: ಕಾಂಗ್ರೆಸ್‌ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ನಕಲಿ ವೆಬ್‌ಸೈಟ್ ರಚಿಸಿರುವ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.ನಕಲಿ ವೆಬ್‌ಸೈಟ್‌ನಲ್ಲಿ ಕಾಂಗ್ರೆಸ್‌ ಹಾಗೂ ಅದರ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಫೋಸ್ಟ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಸೈಬರ್ ಕ್ರೈಮ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.ನಕಲಿ ವೆಬ್‌ಸೈಟ್ ತೆರೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪೊಲೀಸರು […]

ಕಾಂಗ್ರೆಸ್‌ ನಕಲಿ ವೆಬ್‌ಸೈಟ್‌ : ದೂರು ದಾಖಲು Read More »

ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ : ಪ್ರಭಾರ ತಹಶೀಲ್ದಾರ್ ಆಗಿ ರಮೇಶ್ ಬಾಬು

ಪುತ್ತೂರು : 2023 ರ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಸರ್ಗಪ್ರಿಯ ಜೆ. ಅವರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರು ತಹಶೀಲ್ದಾರ್ ಆಗಿ ಪ್ರಸ್ತುತ ಕಡಬ ತಹಶೀಲ್ದಾರ್ ಆಗಿರುವ ರಮೇಶ್ ಬಾಬು ಅವರು ಪುತ್ತೂರು ಪ್ರಭಾರ ತಹಶೀಲ್ದಾರ್ ಆಗಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸಲಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ಅವರಿಗೆ ಜ.30 ರಂದೇ ವರ್ಗಾವಣೆ ಆದೇಶ ಬಂದಿತ್ತಾದರೂ ಆದೇಶದಲ್ಲಿ ಗ್ರೇಡ್-2 ಕೊಟ್ಟೂರು ತಾಲೂಕು ವಿಜಯನಗರ ಜಿಲ್ಲೆ ಎಂದು

ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ : ಪ್ರಭಾರ ತಹಶೀಲ್ದಾರ್ ಆಗಿ ರಮೇಶ್ ಬಾಬು Read More »

ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ

ಆಯೋಗಕ್ಕೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್‌ರಿಂದ ಒತ್ತಾಯ ಪುತ್ತೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಸಲ್ಲಿಸಿರುವ ಮನವಿಗಳ ಕುರಿತ ಬಹಿರಂಗ ವಿಚಾರಣೆಯಲ್ಲಿ ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡುವಂತೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ಎ. ಆಯೋಗವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನ ದಿ.ದೇವರಾಜು ಅರಸು ಅಡಿಟೋರಿಯಮ್‌ನಲ್ಲಿ ನಡೆದ ವಿಚಾರಣೆ ವೇಳೆ ಕರ್ನಾಟಕ ರಾಜ್ಯದ ಏಳು

ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ Read More »

ಡಿಕೆಶಿ ಸಿಡಿ ಎಕ್ಸ್‌ಪರ್ಟ್‌ : ಸಚಿವ ಅಶ್ವತ್ಥ ನಾರಾಯಣ

ಕಾಂಗ್ರೆಸ್‌ ಸಿಡಿ ಬ್ಲಾಕ್‌ಮೇಲರ್‌ಗಳ ಪಕ್ಷ ಬೆಂಗಳೂರು : ಸಿಡಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುವುದು ಕೆಟ್ಟ ಬೆಳವಣಿಗೆ. ರಾಜಕಾರಣಿಗಳನ್ನು ಟ್ರ್ಯಾಪ್, ಫ್ಯಾಬ್ರಿಕೇಟ್ ಮಾಡಲಾಗುತ್ತಿದೆ. ಇಂತಹದ್ದೊಂದು ವ್ಯವಸ್ಥಿತ ನೆಟ್‌ವರ್ಕ್ ಬೆಳೆದಿದೆ. ಸಮಾಜದಲ್ಲಿ ಗೊಂದಲ ಸೃಷ್ಟಿಮಾಡಿ, ಚುನಾಯಿತ ಪ್ರತಿನಿಧಿಗಳ ಬದುಕು ಹಾಳು‌ಮಾಡ್ತಿದ್ದಾರೆ. ಇಂತಹ ಜಾಲಗಳನ್ನು ನಡೆಸುವ ನಾಯಕರ ಬಂಡವಾಳ ಬಯಲಾಗಬೇಕು. ಈ ಬಗ್ಗೆ ತನಿಖೆ ಅಗತ್ಯ ಇದೆ. ರಮೇಶ್ ಜಾರಕಿಹೋಳಿ ಧೈರ್ಯ ತೋರಿ ಈ ಬಗ್ಗೆ ದೂರು ನೀಡಿದ್ದಾರೆ. ಈಗ ಕಾಂಗ್ರೆಸ್ ನಾಯಕರಿಗೆ ಆತಂಕ ಸೃಷ್ಟಿಯಾಗ್ತಿದೆ. ಈ ಬಗ್ಗೆ ತನಿಖೆ ಆಗಲಿ

ಡಿಕೆಶಿ ಸಿಡಿ ಎಕ್ಸ್‌ಪರ್ಟ್‌ : ಸಚಿವ ಅಶ್ವತ್ಥ ನಾರಾಯಣ Read More »

ಕಾಂಗ್ರೆಸ್‌ಗೆ ಈಗ ಲೆಟರ್‌ ಬಾಂಬ್‌ ಸಂಕಷ್ಟ

ಡಿಕೆಶಿಗೆ ವಿರುದ್ಧ ಸಿದ್ದರಾಮಯ್ಯ ಹೈಕಮಾಂಡ್‌ಗೆ ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್‌ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೋನಿಯಾ ಗಾಂಧಿಗೆ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ವೈರಲ್ ಆಗಿದ್ದು, ಇದು ಕಾಂಗ್ರೆಸಿನ ಒಳ ಬೇಗುದಿಯನ್ನು ಇನ್ನಷ್ಟು ಹೆಚ್ಚಿಸಿದೆ.ಈ ಪತ್ರಕ್ಕೆ ಸ್ಪಷ್ಟೀಕರಣ ನೀಡಿರುವ ಸಿದ್ದರಾಮಯ್ಯ, ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಬಿರುಕು ಮೂಡಿಸಲು ನಕಲಿ ಪತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಹೇಳಿದ್ದಾರೆ. ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ

ಕಾಂಗ್ರೆಸ್‌ಗೆ ಈಗ ಲೆಟರ್‌ ಬಾಂಬ್‌ ಸಂಕಷ್ಟ Read More »

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಬಳ್ಳಾರಿಯಲ್ಲಿ ಸಹೋದರರ ಸವಾಲು

ಸೋಮಶೇಖರ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆ ಫೈನಲ್‌ ಬಳ್ಳಾರಿ: ಕಳೆದ ಕೆಲವು ವರ್ಷಗಳಿಂದ ರೆಡ್ಡಿ ಕುಟುಂಬದ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲೀಗ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿಯಿಂದ ಹೊರಹೋಗಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ಸ್ವಂತ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ಪತ್ನಿ ಲಕ್ಷ್ಮೀ ಅರುಣಾ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.ಪ್ರಸ್ತುತ ಜನಾರ್ದನ ರೆಡ್ಡಿಯವರ ಸಹೋದರ ಸೋಮಶೇಖರ ರೆಡ್ಡಿಯವರು ಇಲ್ಲಿಯ ಬಿಜೆಪಿ ಶಾಸಕ. ತಾನು ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿ ಸೋಮಶೇಖರ ರೆಡ್ಡಿ ಹೇಳುವುದರೋಮದಿಗೆ ಬಳ್ಳಾರಿ

ಬಳ್ಳಾರಿಯಲ್ಲಿ ಸಹೋದರರ ಸವಾಲು Read More »

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು

ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳು ಮತದಾರರನ್ನು ಮರಳು ಮಾಡಲು ನೀಡುತ್ತಿರುವ ಉಚಿತ ಕೊಡುಗೆಗಳ ಭರವಸೆಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ನಿಯಮಗಳಂತೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದಲ್ಲಿ ಬುಧವಾರ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಮಟ್ಟದ

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು Read More »

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌

ಕಾಂತಾರ-2 ಓಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್‌ ಪ್ರಶಸ್ತೆಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌ Read More »

ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ ಕೊಡದ ಸರಕಾರಕ್ಕೆ ಹೈಕೋರ್ಟ್‌ ಛೀಮಾರಿ

ಉತ್ಸವಗಳನ್ನು ನಡೆಸಲು ದುಡ್ಡಿದೆ, ಮಕ್ಕಳಿಗೆ ಸಮವಸ್ತ್ರ ಕೊಡಲು ಬರಗಾಲವೇ ಎಂದು ಪ್ರಶ್ನೆ ಬೆಂಗಳೂರು: ಸರ್ಕಾರಿ ಶಾಲೆಗಳ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂಬ ಆದೇಶ ಪಾಲಿಸದ ರಾಜ್ಯ ಸರ್ಕಾರವನ್ನು ಹೈಕೋರ್ಟ್‌ತೀಕ್ಷ್ಣವಾಗಿ ತರಾಟೆಗೆಗ ತೆಗೆದುಕೊಂಡಿದೆ. ಸರ್ಕಾರಕ್ಕೆ ಉತ್ಸವಗಳನ್ನು ನಡೆಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಲು ಮನಸ್ಸಿದೆ. ಆದರೆ, ಮಕ್ಕಳ ಹಕ್ಕು, ಶಿಕ್ಷಣಗಳ ವಿಚಾರದಲ್ಲಿ ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ನಿರ್ವಹಿಸಲು ಮಾತ್ರ ಆಗುತ್ತಿಲ್ಲ. ಅಧಿಕಾರಿಗಳಿಗಂತೂ ಮಾನ ಮರ್ಯಾದೆ,

ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ ಕೊಡದ ಸರಕಾರಕ್ಕೆ ಹೈಕೋರ್ಟ್‌ ಛೀಮಾರಿ Read More »

error: Content is protected !!
Scroll to Top