ರಾಜ್ಯ

ವಿಕ್ರಂ ಗೌಡ ಸಹಚರರಿಗಾಗಿ ವ್ಯಾಪಕ ಶೋಧ

ಗಡಿಭಾಗಗಳಲ್ಲಿ ನಾಕಾಬಂಧಿ ಹಾಕಿ ವಾಹನ ತಪಾಸಣೆ ಕಾರ್ಕಳ : ಎನ್‌ಕೌಂಟರ್‌ಗೆ ಬಲಿಯಾಗಿರುವ ನಕ್ಸಲ್ ನಾಯಕ ವಿಕ್ರಂ ಗೌಡನ ಸಹಚರರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹೆಬ್ರಿಯ ಪೀತಬೈಲಿನಲ್ಲಿ ಎನ್‌ಕೌಂಟರ್‌ ನಡೆಯುವ ಸಂದರ್ಭದಲ್ಲಿ ವಿಕ್ರಂ ಗೌಡನ ಜೊತೆಗೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಇದ್ದ. ಅವರು ಕಾಡಿನೊಳಗೆ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ ಎಂದು ಎಎನ್‌ಎಫ್‌ ಅಧಿಕಾರಿಗಳು ಹೇಳುತ್ತಿದ್ದಾರೆ. ಇವರಲ್ಲದೆ ನಕ್ಸಲ್‌ ತಂಡದಲ್ಲಿ ಇನ್ನೂ ಕೆಲವರಿದ್ದು, ಒಟ್ಟು ಆರು ಮಂದಿ ಬಂದಿರುವ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್‌ […]

ವಿಕ್ರಂ ಗೌಡ ಸಹಚರರಿಗಾಗಿ ವ್ಯಾಪಕ ಶೋಧ Read More »

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ

ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುಧಾರಿತ ನಕ್ಸಲರು ಬೆಂಗಳೂರು: ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ ಎಂಬ ದಟ್ಟ ಅನುಮಾನಗಳಿರುವ ಹಿನ್ನೆಲೆಯಲ್ಲಿ ಎನ್‌ಕೌಂಟರ್‌ನ ಸಾಚಾತನ ತಿಳಿಯಲು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕೆಂದು ಸುಧಾರಿತ ನಕ್ಸಲೀಯರು ಒತ್ತಾಯಿಸಿದ್ದಾರೆ. ವಿಕ್ರಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲುವನ್ನು ಸೋಮವಾರ ರಾತ್ರಿ ಹೆಬ್ರಿಯ ಪೀತಬೈಲಿನಲ್ಲಿ ನಕ್ಸಲ್‌ ನಿಗ್ರಹ ಪಡೆಯವರು ಎನ್‌ಕೌಂಟರ್‌ ಮಾಡಿದ್ದಾರೆ. ಈ ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸುಧಾರಿತ ನಕ್ಸಲೀಯರು ಎನ್‌ಕೌಂಟರ್ ನಿಜವೋ ನಕಲಿಯೋ ಎಂದು ತಿಳಿಯಲು ನಿವೃತ್ತ

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ Read More »

ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಬಂಗಾರಪ್ಪ ಕೆಂಡಾಮಂಡಲ

ಆನ್‌ಲೈನ್‌ ಅಭಿಪ್ರಾಯ ಸಂಗ್ರಹ ವೇಳೆ ಸಚಿವರನ್ನು ಕೆಣಕಿದ ವಿದ್ಯಾರ್ಥಿ ಬೆಂಗಳೂರು : ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಓರ್ವ ವಿದ್ಯಾರ್ಥಿ ಸಚಿವ ಮಧು ಬಂಗಾರಪ್ಪ ಎದುರೇ ಹೇಳಿದ್ದು, ಇದರಿಂದ ಕೆಂಡಾಮಂಡಲವಾದ ಮಧು ಬಂಗಾರಪ್ಪ ಆ ವಿದ್ಯಾರ್ಥಿಯನ್ನು ಹುಡುಕಿ ಕ್ರಮ ಕೈಗೊಳ್ಳಬೇಖೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ ಘಟನೆ ನಡೆದಿದೆ.ಬುಧವಾರ ವಿಧಾನಸೌಧದಲ್ಲಿ ನೀಟ್​ ಕೋಚಿಂಗ್​ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಉದ್ಘಾಟನೆ ಮುಗಿದು ಆನ್‌ಲೈನ್‌ನಲ್ಲಿ ಸಂವಾದ ನಡೆಸುವಾಗ ಓರ್ವ ವಿದ್ಯಾರ್ಥಿ ಶಿಕ್ಷಣ ಸಚಿವ

ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಬಂಗಾರಪ್ಪ ಕೆಂಡಾಮಂಡಲ Read More »

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌

ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆಯಾಗಿದ್ದ ಬಂದಿದ್ದ ಅಧಿಕಾರಿಯ ಮನೆಗೆ ದಾಳಿ ಮಂಗಳೂರು: ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಅದರಂತೆ ಮಂಗಳೂರಿನಲ್ಲಿ ಓರ್ವ ಅಧಿಕಾರಿಯ ಮನೆ ಮೇಲೂ ದಾಳಿಯಾಗಿದೆ.ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿ ಶಾಕ್‌ ನೀಡಲಾಗಿದ್ದು, ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ಅಧಿಕಾರಿಗಳ ತಂಡ ಮಂಗಳೂರಿನ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ Read More »

ಅಬಕಾರಿ ಹಗರಣ : ಸಚಿವ ತಿಮ್ಮಾಪುರ ತಲೆದಂಡ?

ಅಧಿವೇಶನದಲ್ಲಿ ಮುಜುಗರದಿಂದ ಪಾರಾಗಲು ಸಚಿವರನ್ನು ಕೈಬಿಡುವ ಕುರಿತು ಚಿಂತನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವ ಕುರಿತು ಚಿಂತನೆ ನಡೆಯುತ್ತಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರ ಇತ್ತೀಚೆಗೆ ಬಹಳ ಸದ್ದು ಮಾಡಿದೆ. ಮದ್ಯ ವ್ಯಾಪಾರಿಗಳು ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಿಗೆ ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ

ಅಬಕಾರಿ ಹಗರಣ : ಸಚಿವ ತಿಮ್ಮಾಪುರ ತಲೆದಂಡ? Read More »

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌

ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್‌ ಕೊಡಿಸಲು ಪ್ರಯತ್ನ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೀಟ್ ಕೋಚಿಂಗ್ ಪಡೆಯಲು ಟ್ಯೂಷನ್ ಸೆಂಟರ್​​ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡಬೇಕಿಲ್ಲ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಪೂರ್ತಿ ಮಾಡಲು ಸರ್ಕಾರವೇ ನೀಟ್‌ ಕೋಚಿಂಗ್‌ ನೀಡಲಿದೆ. ಪಿಯುಸಿಯ 25 ಸಾವಿರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಉಚಿತ CET, NEET, JEE, ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಶಿಕ್ಷಣ ಸಚಿವ

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌ Read More »

ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿದ್ದರಾಮಯ್ಯ ಆದೇಶ

ಈಗಾಗಲೇ ರದ್ದಾಗಿರುವ ಕಾರ್ಡ್‌ಗಳನ್ನು ಸರಿಮಾಡಿಕೊಡಲು ಸೂಚನೆ ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ಎಚ್ಚೆತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು ಎಂದು ಆದೇಶ ಹೊರಡಿಸಿದ್ದಾರೆ.ಸುಮಾರು 11 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿರುವ ಸರಕಾರದ ಕ್ರಮದ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ

ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿದ್ದರಾಮಯ್ಯ ಆದೇಶ Read More »

ಹೇರ್‌ ಡ್ರೈರ್‌ ಸ್ಫೋಟಗೊಂಡು ಮಹಿಳೆಯ ಎರಡೂ ಕೈ ಛಿದ್ರ

ಆರ್ಡರ್‌ ಮಾಡದಿದ್ದರೂ ಕೊರಿಯರ್‌ನಲ್ಲಿ ಬಂದ ಹೇರ್‌ ಡ್ರೈಯರ್‌ ಬಗ್ಗೆ ಅನುಮಾನ ಬೆಂಗಳೂರು: ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಕೇಯಲ್ಲೇ ಸ್ಫೋಟಗೊಂಡು ಮೃತ ಯೋಧರೊಬ್ಬರ ಪತ್ನಿಯ ಎರಡೂ ಕೈಗಳು ತುಂಡಾಗಿರುವ ದಾರುಣ ಘಟನೆ ಬಾಗಲಕೋಟೆಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಯೋಧ ದಿ.ಪಾಪಣ್ಣ ಎಂಬವರ ಪತ್ನಿ ಬಸಮ್ಮ ಯರನಾಳ ಅವರ ಎರಡೂ ಕೈಗಳು ತುಂಡಾಗಿವೆ. 2017ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪಾಪಣ್ಣ ಮೃತಪಟ್ಟಿದ್ದರು. ಬಸಮ್ಮ ಅವರ ಸ್ನೇಹಿತೆ ಶಶಿಕಲಾ ಎಂಬವರ ಹೆಸರು, ನಂಬರ್ ಇದ್ದ ಪಾರ್ಸಲ್ ಕೊರಿಯರ್‌ನಲ್ಲಿ

ಹೇರ್‌ ಡ್ರೈರ್‌ ಸ್ಫೋಟಗೊಂಡು ಮಹಿಳೆಯ ಎರಡೂ ಕೈ ಛಿದ್ರ Read More »

ಪಡಿತರ ಪಡೆಯಲು ಬಂದು ಖೆಡ್ಡಾಕ್ಕೆ ಬಿದ್ದ ವಿಕ್ರಮ್‌ ಗೌಡ

ಮೂರುದಿನಗಳಿಂದ ಹೊಂಚು ಹಾಕಿ ಕುಳಿತಿದ್ದ ಎನ್‌ಎನ್‌ಎಫ್‌ ಪಡೆ ಕಾರ್ಕಳ : ಹೆಬ್ರಿಯ ಕಬ್ಬಿನಾಲೆ ಸಮೀಪ ಪೀತಬೈಲು ಎಂಬಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ (44) ಹತನಾಗಿದ್ದಾನೆ. ಈ ಕಾರ್ಯಾಚರಣೆಯ ಒಂದೊಂದೇ ಮಾಹಿತಿ ಈಗ ಬಹಿರಂಗವಾಗುತ್ತಿದೆ. ನಕ್ಸಲರು ಪೀತಬೈಲಿನಲ್ಲಿರುವ ಮನೆಗಳಿಗೆ ಪಡಿತರ ಮತ್ತು ಹಣ ಪಡೆಯಲು ಬಂದು ಪೊಲೀಸರು ರಚಿಸಿದ್ದ ಖೆಡ್ಡಾಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಈ ಭಾಗದಲ್ಲಿ ನಕ್ಸಲರ ಓಡಾಟ ಮರಳಿ ಶುರುವಾಗಿರುವ ಕುರಿತು ನಕ್ಸಲ್‌ ನಿಗ್ರಹ ಪಡೆಗೆ ಖಚಿತ ಸುಳಿವು

ಪಡಿತರ ಪಡೆಯಲು ಬಂದು ಖೆಡ್ಡಾಕ್ಕೆ ಬಿದ್ದ ವಿಕ್ರಮ್‌ ಗೌಡ Read More »

ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ

ನೋಟಿಸ್‌ ಇಲ್ಲದೆ ಲೋಕಾಯುಕ್ತ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಹಲವು ಅನುಮಾನ ಮೈಸೂರು: ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ನಿನ್ನೆ ರಾತ್ರಿ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಯನ್ನು ನೋಟಿಸ್‌ ಇಲ್ಲದೆ ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಂಚಿಕೆ ಅಕ್ರಮದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರನ್ನು ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ರಾತ್ರೋರಾತ್ರಿ ಭೇಟಿ ಮಾಡಿದ್ದಾರೆ. ಅವರನ್ನು ಲೋಕಾಯುಕ್ತರು ಭೇಟಿಗೆ ಕರೆದಿರಲಿಲ್ಲ ಎನ್ನಲಾಗಿದೆ.ಮಂಗಳವಾರ ಮುಡಾದ

ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ Read More »

error: Content is protected !!
Scroll to Top