ರಾಜ್ಯ

ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯ

ತಿರುಪತಿ ಲಡ್ಡು ಕಲಬೆರಕೆ ಹಿನ್ನೆಲೆಯಲ್ಲಿ ಸರಕಾರ ಆದೇಶ ಬೆಂಗಳೂರು : ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಮತ್ತು ದನದ ಕೊಬ್ಬು ಬಳಸಿರುವುದು ಬೆಳಕಿಗೆ ಬಂದು ಭಾರಿ ವಿವಾದ ಸೃಷ್ಟಿಯಾದ ಬಳಿಕ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಹಲವು ಮುನ್ನೆಚ್ಚರಿಕೆಗಳನ್ನು ಪಾಲಿಸಲು ಸರಕಾರ ಸೂಚನೆ ನೀಡಿದೆ. ಈಗ ರಾಜ್ಯದ ಎಲ್ಲ ವರ್ಗದ ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣ ಮತ್ತು ಪ್ರಸಾದ ವಿತರಣೆ ಜಾಗದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಆದೇಶ ಹೊರಡಿಸಲಾಗಿದೆ.ಇತ್ತೀಚೆಗೆ ಮುಜರಾಯಿ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಬರುವ […]

ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯ Read More »

ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಆಕ್ರೋಶ

ಹಗರಣದ ತನಿಖಾಧಿಕಾರಿಯೇ ಕಡುಭ್ರಷ್ಟ ಎಂದ ಬಿಜೆಪಿ- ಜೆಡಿಎಸ್‌ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿರುವ ಮುಡಾ ಅಕ್ರಮದ ಆರೋಪ ಈಗ ಈ ಹಗರಣವನ್ನು ತನಿಖೆ ಮಾಡುವ ಲೋಕಾಯುಕ್ತದ ಮೇಲೂ ತಿರುಗಿರುವುದು ವಿಪರ್ಯಾಸ. ಲೋಕಾಯುಕ್ತ ಎಸ್​ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರನ್ನು ಹಂದಿಗೆ ಹೋಲಿಕೆ ಮಾಡಿ ಹೇಳಿಕೆ ನೀಡಿರುವುದು ಜೆಡಿಎಸ್‌ ಮತ್ತು ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಈ ಅಧಿಕಾರಿಯ ವಿರುದ್ಧವೇ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ.ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ

ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಆಕ್ರೋಶ Read More »

ಚುನಾವಣಾ ಬಾಂಡ್‌ : ನಿರ್ಮಲಾ ಸೀತಾರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌

ಮುಡಾ ಹಗರಣದ ವಿರುದ್ಧ ಕಾಂಗ್ರೆಸ್‌ ಹೂಡಿದ ಬಾಣ ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾದ ಬೆನ್ನಿಗೆ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.ಚುನಾವಣಾ ಬಾಂಡ್​ ಮೂಲಕ ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು

ಚುನಾವಣಾ ಬಾಂಡ್‌ : ನಿರ್ಮಲಾ ಸೀತಾರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ Read More »

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು ಲೋಕಾಯುಕ್ತದಲ್ಲಿ ಕೇಸ್‌; ಪತ್ನಿ ಪಾರ್ವತಿ ಎ2 ಆರೋಪಿ ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಈಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.ಜನಪ್ರತಿನಿಧಿಗಳ ವಿಶೇಷ ಕೋರ್ಟ್​

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಕಸ್ತೂರಿ ರಂಗನ್‌ ವರದಿ ಆತಂಕ ಸದ್ಯ ದೂರ

ವರದಿ ಜಾರಿಗೊಳಿಸದಿರಲು ಸಂಪುಟ ಸಭೆ ತೀರ್ಮಾನ ಬೆಂಗಳೂರು : ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ವಾಸವಾಗಿರುವ ಜನರ ಆತಂಕಕ್ಕೆ ಕಾರಣವಾಗಿದ್ದ ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸದಿರಲು ಸರಕಾರ ನಿರ್ಧರಿಸಿದೆ. ಈ ಮಳೆಗಾಲದಲ್ಲಿ ಹಲವೆಡೆ ಭುಕುಸಿತ ಸಂಭವಿಸಿ ಅಪಾರ ಹಾನಿ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಪ್ರದೇಶ ಸಂರಕ್ಷಿಸುವ ಸಲುವಾಗಿ ಕಸ್ತೂರಿ ರಂಗನ್‌ ವರದಿ ಕಟ್ಟುನಿಟ್ಟಾಗಿ ಜಾರಿಯಾಗಬೇಕೆಂಬ ಕೂಗು ಒಂದೆಡೆಯಿಂದ ಕೇಳಿಬಂದಿತ್ತು. ಅದರಲ್ಲೂ ವಯನಾಡಿನ ಭೀಕರ ಭೂಕುಸಿತ ದುರಂತ ಬಳಿಕ ಪಶ್ಚಿಮ ಘಟ್ಟದ ಸುರಕ್ಷತೆ ಕುರಿತು ವ್ಯಾಪಕ ಕಳವಳ

ಕಸ್ತೂರಿ ರಂಗನ್‌ ವರದಿ ಆತಂಕ ಸದ್ಯ ದೂರ Read More »

ಮುಡಾ ಹಗರಣ : ರಾಜೀನಾಮೆ ಕೇಳಬೇಡಿ ಎಂದು ಹೈಕಮಾಂಡನ್ನು ವಿನಂತಿಸಿದ ಸಿದ್ದರಾಮಯ್ಯ

ಬೆಂಬಲ ಕೊಡಿ, ನನ್ನದೇನೂ ತಪ್ಪಿಲ್ಲ ಎಂದು ಪ್ರತಿಪಾದನೆ ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿರುವುದು ಬಯಲಾದ ಬಳಿಕ ಹೇಗಾದರೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿದ್ದರಾಮಯ್ಯ ನಿನ್ನೆ ಕೋರ್ಟ್‌ ತೀರ್ಪು ಹೊರಬಿದ್ದ ಬೆನ್ನಿಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಇನ್ನೊಂದು ವರದಿ ರವಾನಿಸಿದ್ದಾರೆ. ತನಿಖೆ ಆಗಲಿ, ನಾನು ತನಿಖೆ ಎದುರಿಸುತ್ತೇನೆ. ನನಗೆ ಯಾವುದೇ ಭಯವಿಲ್ಲ. ರಾಜೀನಾಮೆ ಕೊಡದೆ ನಾನು ತನಿಖೆ ಎದುರಿಸುತ್ತೇನೆ. ನಿಮ್ಮ ಸಹಕಾರ ಬೇಕು ಎಂದು ವರದಿಯಲ್ಲಿ ಹೈಕಮಾಂಡ್‌ನ ಸಹಕಾರ ಕೇಳಿದ್ದಾರೆ.ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ

ಮುಡಾ ಹಗರಣ : ರಾಜೀನಾಮೆ ಕೇಳಬೇಡಿ ಎಂದು ಹೈಕಮಾಂಡನ್ನು ವಿನಂತಿಸಿದ ಸಿದ್ದರಾಮಯ್ಯ Read More »

ಮಹಾಲಕ್ಷ್ಮಿಕೊಲೆ ಪ್ರಕರಣ : ಡೆತ್‌ನೋಟ್‌ನಲ್ಲಿದೆ ಅಸಲಿ ಕಾರಣ

ಮೃತದೇಹವನ್ನು 50 ತುಂಡು ಮಾಡಿ ಫ್ರಿಜ್‌ನಲ್ಲಿಟ್ಟಿದ್ದ ಪ್ರಕರಣ ಬೆಂಗಳೂರು : ನಗರದ ವೈಯಾಲಿಕಾವಲ್‌ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬ ವಿವಾಹಿತ ಮಹಿಳೆಯನ್ನು ಕೊಂದು ಮೃತದೇಹವನ್ನು 50ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್‌ನಲ್ಲಿ ತುಂಬಿಸಿಟ್ಟು ಹೋಗಿದ್ದ ಹಂತಕ ತನ್ನ ಹುಟ್ಟೂರಾದ ಒಡಿಶಾಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನು ಬರೆದಿಟ್ಟಿರುವ ಡೆತ್‌ನೋಟ್‌ ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಕೊಲೆಯ ರಹಸ್ಯ ಬಹಿರಂಗವಾಗಿದೆ.ಕಳೆದ ಸೆ.21ರಂದು ಬೆಳಕಿಗೆ ಬಂದ ಈ ಕೊಲೆ ನಗರವನ್ನು ಬೆಚ್ಚಿಬೀಳಿಸಿತ್ತು. ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ಕೊಲೆಗಾರನ ಬೆನ್ನತ್ತಿದಾಗ

ಮಹಾಲಕ್ಷ್ಮಿಕೊಲೆ ಪ್ರಕರಣ : ಡೆತ್‌ನೋಟ್‌ನಲ್ಲಿದೆ ಅಸಲಿ ಕಾರಣ Read More »

ಕೆಎಸ್‌ಆರ್‌ಟಿಸಿಯಿಂದ ದಸರಾ ಟೂರ್‌ ಪ್ಯಾಕೇಜ್‌

ಮಂಗಳೂರಿನಿಂದ ದೇವಸ್ಥಾನಗಳ ದರ್ಶನಕ್ಕೆ ನಿತ್ಯ ಬಸ್‌ಗಳು ಮಂಗಳೂರು: ಈ ವರ್ಷವೂ ಕೆಎಸ್‌ಆರ್‌ಟಿಸಿ ದಸರಾ ಹಬ್ಬದ ಪ್ರಯುಕ್ತ ವಿಶೇಷ ಟೂರ್‌ ಪ್ಯಾಕೇಜ್‌ ಆಯೋಜಿಸಿದೆ. ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ. ಮಂಗಳೂರು ಟೂರ್‌ ಪ್ಯಾಕೇಜ್‌ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು

ಕೆಎಸ್‌ಆರ್‌ಟಿಸಿಯಿಂದ ದಸರಾ ಟೂರ್‌ ಪ್ಯಾಕೇಜ್‌ Read More »

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ

ಒಂದು ಕೋಮಿನವರಿಗೆ ಮಾತ್ರ ಉದ್ಯೋಗ ಸಿಗಬೇಕೆಂಬ ಕುಟಿಲ ನೀತಿ ಎಂಬ ಆರೋಪ ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ಆದೇಶ ವಿವಾದವನ್ನು ಸೃಷ್ಟಿಸಿದೆ. ಸರ್ಕಾರದ ನಡೆಗೆ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು.

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ Read More »

ಸಿದ್ದರಾಮಯ್ಯ ಅರ್ಜಿ ವಜಾ : ಮುಡಾ ಕೇಸಿನಲ್ಲಿ ಸಿಎಂಗೆ ಭಾರಿ ಹಿನ್ನಡೆ

ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಸರಿ ಇದೆ ಎಂದ ಹೈಕೋರ್ಟ್‌ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಪೀಠ ಮಂಗಳವಾರ ಪ್ರಕಟಿಸಿದೆ.ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.ಸಿಎಂ ವಿರುದ್ಧ ಖಾಸಗಿ ದೂರುದಾರರುಅನುಮತಿ ಕೋರಬಹುದು. ಸಂವಿಧಾನದ ವಿಧಿ 17ಎ

ಸಿದ್ದರಾಮಯ್ಯ ಅರ್ಜಿ ವಜಾ : ಮುಡಾ ಕೇಸಿನಲ್ಲಿ ಸಿಎಂಗೆ ಭಾರಿ ಹಿನ್ನಡೆ Read More »

error: Content is protected !!
Scroll to Top