ರಾಜ್ಯ

ಕನ್ನಡಿಗರನ್ನು ಕೆಣಕಿದ ರೀಲ್ಸ್‌ ರಾಣಿ ನೌಕರಿಯಿಂದ ವಜಾ

ಉತ್ತರ ಭಾರತೀಯರು ಬೆಂಗಳೂರು ಬಿಟ್ಟು ಹೋದರೆ ಕನ್ನಡಿಗರು ಕಂಗಾಲು ಎಂದು ಹೇಳಿದ್ದ ಯುವತಿ ಬೆಂಗಳೂರು: ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಈ ನಗರ ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಮ್‌ ರೀಲ್ಸ್ ಮಾಡಿ ದುರಹಂಕಾರ ಪ್ರದರ್ಶಿಸಿದ್ದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಯನ್ನು ಆಕೆಯ ಕಂಪನಿ ನೌಕರಿಯಿಂದ ಕಿತ್ತುಹಾಕಿದೆ.ರೀಲ್ಸ್‌ ಹುಚ್ಚಾಟದ ಸುಗಂಧಾ ಶರ್ಮ ಕೆಲದಿನಗಳ ಹಿಂದೆ ಕನ್ನಡಿಗರನ್ನು ನಾನಾ ರೀತಿಯಲ್ಲಿ ನಿಂದಿಸಿದ ವಿಡಿಯೋವನ್ನು ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಭಾರಿ ವೈರಲ್‌ ಆಗಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿತ್ತು. […]

ಕನ್ನಡಿಗರನ್ನು ಕೆಣಕಿದ ರೀಲ್ಸ್‌ ರಾಣಿ ನೌಕರಿಯಿಂದ ವಜಾ Read More »

ಮತ್ತೆ ಭುಗಿಲೆದ್ದ ಮಹಿಷ ದಸರಾ ವಿವಾದ

ಆಚರಣೆಗೆ ಅವಕಾಶ ಕೊಡಲ್ಲ ಎಂದು ಪ್ರತಾಪ್‌ ಸಿಂಹ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬದ ಸಂಭ್ರಮಕ್ಕೆ ಸಿದ್ಧವಾಗುತ್ತಿರುವಂತೆಯೇ ಮತ್ತೆ ಮಹಿಷ ದಸರಾದ ಕಿರಿಕ್‌ ಶುರುವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಿಷ ದಸರಾ ಆಚರಿಸಲು ಕೆಲವರು ಮುಂದಾಗಿದ್ದು, ಇದಕ್ಕೆ ಇನ್ನೊಂದೆಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಮೈಸೂರಿನಲ್ಲಿ ದಸರಾ ಸಂಭ್ರಮ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿ ಇರುವಾಗ ಮಹಿಷ ದಸರಾ ವಿಚಾರವೂ ಮುನ್ನೆಲೆಗೆ ಬಂದಿದೆ. ಸೆಪ್ಟೆಂಬರ್ 29ರಂದು ಮಹಿಷ ದಸರಾ ಮಾಡುತ್ತೇವೆ ಅಂತ ಮಹಿಷ ದಸರಾ

ಮತ್ತೆ ಭುಗಿಲೆದ್ದ ಮಹಿಷ ದಸರಾ ವಿವಾದ Read More »

ಮುಡಾ ಹಗರಣ : ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದರೆ ಸಿಎಂಗೆ ಶುರುವಾಗಲಿದೆ ಸಂಕಷ್ಟಗಳ ಸರಮಾಲೆ ಬೆಂಗಳೂರು: ಮುಡಾ ಹಗರಣದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೇಸ್‌ ಇಂದು ಹೈಕೋರ್ಟ್‌ನಲ್ಲಿ ಇತ್ಯರ್ಥವಾಗುವ ಸಾಧ್ಯತೆಯಿದೆ. ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಇಂದು ಪ್ರಕಟವಾಗಲಿದ್ದು, ಸಿದ್ದರಾಮಯ್ಯನವರ ಭವಿಷ್ಯದ ನಿಟ್ಟಿನಲ್ಲಿ ಇದು ನಿರ್ಣಾಯಕ ತೀರ್ಪು ಆಗಲಿದೆ. ಹೀಗಾಗಿ ಈ ಪ್ರಕರಣ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಕುತೂಹಲ ಕೆರಳಿಸಿದೆ.ಪತ್ನಿಯ ಹೆಸರಿನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ

ಮುಡಾ ಹಗರಣ : ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ Read More »

ಮೃತದೇಹ ಕಟ್‌ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ : ಅನ್ಯಕೋಮಿನ ವ್ಯಕ್ತಿಯ ಮೇಲೆ ಅನುಮಾನ

ವಿವಾಹಿತ ಮಹಿಳೆಯನ್ನು ಮತಾಂತರ ಮಾಡುವ ಯತ್ನ ನಡೆದ ಆರೋಪ ಬೆಂಗಳೂರು: ವಿವಾಹಿತ ಮಹಿಳೆಯನ್ನು ಕೊಂದು ಮೃತದೇಹವನ್ನು ಕತ್ತರಿಸಿ ಫ್ರಿಜ್‌ನಲ್ಲಿ ತುಂಬಿಸಿಟ್ಟ ಪ್ರಕರಣದಲ್ಲಿ ಅನ್ಯಕೋಮಿನ ವ್ಯಕ್ತಯೊಬ್ಬನ ಹೆಸರನ್ನು ಕೊಲೆಯಾದ ಮಹಿಳೆಯ ಸಹೋದರಿ ಶಹೀದಾ ಎಂಬಾಕೆ ಉಲ್ಲೇಖಿಸಿದ್ದಾರೆ. ಉತ್ತರಖಂಡ ಮೂಲದ ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದ ಆಶ್ರಫ್‌ ಎಂಬ ಯುವಕನ ಜೊತೆ ಕೊಲೆಯಾದ ಮಹಾಲಕ್ಷ್ಮೀ ಓಡಾಡಿಕೊಂಡಿದ್ದಳು ಎಂದು ಸಹೋದರಿ ಹೇಳಿದ್ದಾರೆ. ಈಗ ಆಶ್ರಫ್‌ನ ಫೋನ್‌ ಕೂಡ ಸ್ವಿಚ್‌ ಆಫ್‌ ಆಗಿರುವುದು ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ. ಕೊಲೆ ಪ್ರಕರಣದ ತನಿಖೆ ಮುಂದಿವರಿದಂತೆಲ್ಲ ಆಘಾತಕಾರಿಯಾದ

ಮೃತದೇಹ ಕಟ್‌ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ : ಅನ್ಯಕೋಮಿನ ವ್ಯಕ್ತಿಯ ಮೇಲೆ ಅನುಮಾನ Read More »

ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ

ಕೊಪ್ಪಳ: ರಾಷ್ಟ್ರಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಬರೆದು ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಅವನ ಸಹೋದರ ಮಹ್ಮದ್ ಆದಿನಾನ್ ಖಾಜಿ ಬಂಧಿತ ಯುವಕರು.ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಧ್ವಜವನ್ನು ವಿರೂಪಗೊಳಿಸಿದ್ದ ಫೋಟೋ

ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ Read More »

ಕೊಡುಗು ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | ಕಾರ್ಯಕಾರಿಣಿ ಸಭೆ

ಕೊಡಗು : ಜಿಲ್ಲೆಯ ಸೋಮವಾರಪೇಟೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ  ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮತ್ತು ಕಾರ್ಯಕಾರಿಣಿ ಸಭೆ ಸೋಮವಾರಪೇಟೆ ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸೋಮವಾರಪೇಟೆ ಮಂಡಲ ಅಧ್ಯಕ್ಷ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ಬಳಿಕ ಸದಸ್ಯತ್ವ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಓಬಿಸಿ ಉಪಾಧ್ಯಕ್ಷವಿಠಲ ಪೂಜಾರಿ, ಒಬಿಸಿ ರಾಜ್ಯದ ಕಾರ್ಯದರ್ಶಿ, ಮಂಗಳೂರು ವಿಭಾಗ ಪ್ರಭಾರಿ ಆರ್ ಸಿ ನಾರಾಯಣ್, ಮಾಜಿ ವಿಧಾನ ಪರಿಷತ್ ಸದಸ್ಯ

ಕೊಡುಗು ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | ಕಾರ್ಯಕಾರಿಣಿ ಸಭೆ Read More »

ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು

ಅರ್ಕಾವತಿ ಡಿನೋಟಿಫಿಕೇಶನ್‌ನಲ್ಲಿ 8 ಸಾವಿರ ಕೋ. ರೂ. ಹಗರಣದ ಆರೋಪ ಬೆಂಗಳೂರು: ರಾಜ್ಯದಲ್ಲೀಗ ದಿನಕ್ಕೊಂದರಂತೆ ಹಗರಣ ಸುದ್ದಿ ಮಾಡುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಕಿತ್ತಾಟ ಶುರುಮಾಡಿರುವ ಸರಕಾರಕ್ಕೆ ರಾಜ್ಯಪಾಲರೂ ವಿವಿಧ ಪಟ್ಟುಗಳನ್ನು ಹಾಕಿ ಕಾಟ ಕೊಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಡೆದಿದೆ ಎನ್ನಲಾದ ಅರ್ಕಾವತಿ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋಟ್ ಪತ್ರ ಬರೆದಿದ್ದಾರೆ.ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ

ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು Read More »

ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ | ಅರ್ಜುನನ ಲಾರಿ ಪತ್ತೆ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಕೇರಳದ ಅರ್ಜುನನ ಲಾರಿ ಪತ್ತೆಯಾಗಿದೆ. ಮೂರನೇ ಹಂತದ ಕಾರ್ಯಾಚರಣೆ ಇದಾಗಿದ್ದು, ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ. ಜುಲೈ 16ರಂದು ನಡೆದಿದ್ದ ಗುಡ್ಡ ಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು.

ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ | ಅರ್ಜುನನ ಲಾರಿ ಪತ್ತೆ Read More »

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತಿತರ ಪ್ರಾಣಿಜನ್ಯ ಅಂಶಗಳಿರುವುದು ಬಹಿರಂಗವಾಗುತ್ತಿದ್ದಂತೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಆದೇಶ ಹೊರಡಿಸಿದೆ. ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ Read More »

error: Content is protected !!
Scroll to Top