ರಾಜ್ಯ

ಪತಿ ನಿಧನದಿಂದ ಪತ್ನಿಗೆ ವಿಮೆಯ ಲಕ್ಷಾಂತರ ಹಣ | ಹಣಕ್ಕಾಗಿ ಸಂಬಂಧಿಕರಿಂದಲೇ ಮಹಿಳೆಯ ಕೊಲೆ

ಮೈಸೂರು : ಪತಿ ತೀರಿಹೋದ ಬಳಿಕ ಆಕೆಗೆ ಪತಿಯ ವಿಮೆಯಿಂದ ಲಕ್ಷಾಂತರ ರೂಪಾಯಿ ಹಣ ಬಂದಿತ್ತು. ಮಾರಕಾಸ್ತ್ರಗಳಿಂದ ಮಹಿಳೆಯನ್ನು ಭೀಕರವಾಗಿ ಸಂಬಂಧಿಕರೇ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಚೌಥಿ ಗ್ರಾಮದಲ್ಲಿ ನಡೆದಿದೆ.  ಚೌಥಿ ಗ್ರಾಮದ ಬಸವರಾಜು ಹಾಗೂ ಯಶೋಧಮ್ಮ ದಂಪತಿ ಪುತ್ರಿಯಾದ ಭಾಗ್ಯವತಿ(32) ಮೃತ ಮಹಿಳೆ.  ಇವರಿಗೆ ಸಂಪತ್ ಕುಮಾ‌ರ್ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು. ಇಬ್ಬರು ಗಂಡು ಮಕ್ಕಳು ಕೂಡ ಇದ್ದರು. ಆದರೆ 5 ವರ್ಷದ ಹಿಂದೆ ಪತಿ ಸಂಪತ್ ರಸ್ತೆ […]

ಪತಿ ನಿಧನದಿಂದ ಪತ್ನಿಗೆ ವಿಮೆಯ ಲಕ್ಷಾಂತರ ಹಣ | ಹಣಕ್ಕಾಗಿ ಸಂಬಂಧಿಕರಿಂದಲೇ ಮಹಿಳೆಯ ಕೊಲೆ Read More »

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ | ಜಿಲ್ಲಾಡಳಿತದಿಂದ ಎಚ್ಚರಿಕೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಇದೀಗ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ. ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ಈ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಿತ್ತೋ ಅಲ್ಲೆಲ್ಲ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಭೆ ನಡೆಸಿದ್ದು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಎಸ್‌ಪಿ ವಿಕ್ರಂ

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ | ಜಿಲ್ಲಾಡಳಿತದಿಂದ ಎಚ್ಚರಿಕೆ Read More »

ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ

ಬೆಂಗಳೂರು : ಕೆಲವು  ದಿನಗಳಿಂದ  ಕರ್ನಾಟಕದಲ್ಲಿ ಸೈಬ‌ರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬ‌ರ್ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಇದೀಗ ಸೈಬರ್ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ 1930 ಎಂಬ ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ರಾಜ್ಯ ಪೊಲೀಸ್ ಇಲಾಖೆ, ಆತ್ಮೀಯ ಆನ್‌ಲೈನ್ ಬಳಕೆದಾರರೇ ಸೈಬರ್ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್ ಬಲೆಯಲ್ಲಿ ಸಿಲುಕಿದ್ದರೆ

ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ Read More »

ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ

ಮಡಿಕೇರಿ : ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಈ ಘಟನೆ ನಡೆದಿದೆ.   ಶಿಲ್ಪ (36) ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.  ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತಿಯನ್ನು ಹತ್ಯೆಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ

ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ Read More »

ಜು.25-26 : ಬೆಂಗಳೂರಿನ ಜೈನ್ ಲರ್ನಿಂಗ್ ರಿಸೋರ್ಸ್‍ ಸೆಂಟರ್ ನಿಂದ ಅಂತರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ಬೆಂಗಳೂರಿನ ಜೈನ್ ಲರ್ನಿಂಗ್ ರಿಸೋರ್ಸ್‍ ಸೆಂಟರ್ ವತಿಯಿಂದ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಜು.25 ಹಾಗೂ 26 ರಂದು ಬೆಂಗಳೂರು ಜಯನಗರದಲ್ಲಿರುವ ಜೈನ್ ನಾಲೆಡ್ಜ್ ಕ್ಯಾಂಪಸ್ ನ ಎರಡನೇ ಮಹಡಿಯಲ್ಲಿರುವ ಕಾನ್ಫರೆನ್ಸ್‍ ಹಾಲ್‍ ನಲ್ಲಿ ನಡೆಯಲಿದೆ. ಬೆಂಗಳೂರು ಕರ್ನಾಟಕ ರಾಜ್ಯ ಲೈಬ್ರೇರಿ ಅಸೋಸಿಯೇಶನ್‍ (ಕೆಎಎಲ್‍ ಎ) ಸಹಯೋಗದೊಂದಿಗೆ ನಡೆಯುವ ಸಮ್ಮೇಳನದಲ್ಲಿ  ಲಿಂಕಿಂಗ್‍, ಇನ್‍ ಫಾರ್ಮಿಂಗ್ ಮತ್ತು ಶೇರಿಂಗ್‍, ಬಿಲ್ಡಿಂಗ್‍ ರಿಸೀಲಿಯಂಟ್ ಎಜ್ಯುಕೇಶನ್‍ ಮತ್ತು ಲೈಬ್ರೇರಿ ಸಿಸ್ಟಮ್ಸ್‍ ಕುರಿತು ವಿಷಯ ಮಂಡನೆಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಂಥಪಾಲಕಿ ಡಾ.ಮೀರಮಣಿ

ಜು.25-26 : ಬೆಂಗಳೂರಿನ ಜೈನ್ ಲರ್ನಿಂಗ್ ರಿಸೋರ್ಸ್‍ ಸೆಂಟರ್ ನಿಂದ ಅಂತರಾಷ್ಟ್ರೀಯ ಸಮ್ಮೇಳನ Read More »

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ

ಶೃಂಗೇರಿ: ಶ್ರೀ ಕ್ಷೇತ್ರ ಶೃಂಗೇರಿಯ ಶಾರದಾಂಬೆಯ ದರ್ಶನಕ್ಕೆ ಬರುವ ಭಕ್ತಾದಿಗಳು ಆ.15 ರಿಂದ ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ತೊಡಬೇಕೆಂದು ಆದೇಶಿಸಿದೆ. ಈ ಕುರಿತು  ಶೃಂಗೇರಿ ಶಾರದಾಂಬೆ ಆಡಳಿತ ಮಂಡಳಿ  ನಿರ್ಧರಿಸಿದೆ. ಸಾಂಪ್ರದಾಯಿಕವಲ್ಲದ ಉಡುಗೆ ತೊಟ್ಟು ಬಂದವರಿಗೆ ಅರ್ಧಮಂಟಪದ ಒಳಗೆ ಪ್ರವೇಶವಿರುವುದಿಲ್ಲ, ಬದಲಾಗಿ ಹೊರಗಿನಿಂದಲೇ ದೇವರ ದರ್ಶನ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಸಾಂಪ್ರದಾಯಿ ಉಡುಗೆ ಹೀಗಿದೆ ಪುರುಷರು ಧೋತಿ ಅಥವಾ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜೊತೆಗೆ ದುಪ್ಪಟ ಅಥವಾ ಲಂಗ

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ Read More »

ರೈಲ್ವೆ ಹಳಿಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ಹರಿದ ರೈಲು | ಮೂವರೂ ಮೃತ್ಯು

ಗಂಗಾವತಿ: ರೈಲು ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಸಂದರ್ಭ ಮೂವರು ಯುವಕರ ಮೇಲೆ ರೈಲು ಹರಿದು ಮೂವರೂ ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಗಾವತಿಯ ಮೌನೇಶ (23), ಸುನೀಲ್ ಕುಮಾರ(23), ವೆಂಕಟ್ (20) ಮೃತಪಟ್ಟವರು.  ಮೂವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲ್ವೇ ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ ಈ ಸಂದರ್ಭದಲ್ಲಿ ಹುಬ್ಬಳ್ಳಿ ಕಡೆಯಿಂದ ಆಗಮಿಸಿದ ರೈಲು

ರೈಲ್ವೆ ಹಳಿಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ಹರಿದ ರೈಲು | ಮೂವರೂ ಮೃತ್ಯು Read More »

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ | ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರಕ್ಕೆ ಬದಲಿ ರಸ್ತೆ ಸೂಚನೆ

ಮಾಣಿ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ | ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರಕ್ಕೆ ಬದಲಿ ರಸ್ತೆ ಸೂಚನೆ Read More »

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ಇವರ ಸಹಯೋಗದಲ್ಲಿ ಜು. 28 ರಂದು ಈಶ್ವರಮಂಗಲ ಮರಕ್ಕಡ  ಗದ್ದೆಯಲ್ಲಿ ನಡೆಯಲಿದೆ. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾಕೂಟದೊಂದಿಗೆ “ಕಂಡಡೊಂಜಿ ದಿನ” ಕಾರ್ಯಕ್ರಮ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು. 16 ರಂದು ನಡೆಯಿತು.  ಈ ಸಂದರ್ಭದಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಈಶ್ವರಮಂಗಲ

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಗುಡ್ಡ ಕುಸಿತ : ಮಣ್ಣಿನಡಿ ಸಿಲುಕಿದ  ಕಾರು

ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಪು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಗುಡ್ಡ ಕುಸಿದ ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ

ಗುಡ್ಡ ಕುಸಿತ : ಮಣ್ಣಿನಡಿ ಸಿಲುಕಿದ  ಕಾರು Read More »

error: Content is protected !!
Scroll to Top