ರಾಜ್ಯ

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ Read More »

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಯರಗಟ್ಟಿ ಬೆಳಗಾವಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವ‌ರ್ (23) ಕೊಲೆಯಾದ ಯುವಕ. ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಯುವಕ ಹೋಗಿದ್ದನು. ಆದರೆ ಬರ್ತ್‌ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆ ಆದ ವೇಳೆ ಮಾತಿಗೆ ಮಾತು ಬೆಳೆದು ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ Read More »

ಕೇರಳದಲ್ಲಿ ಖಾತೆ ತೆರೆದ ಬಿಜೆಪಿ | ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ

ಕೇರಳ :ಲೋಕಸಭಾ  ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ  ರಾಜ್ಯಸಭಾ ಮಾಜಿ ಸದಸ್ಯ ಸುರೇಶ್ ಗೋಪಿ ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ಗೆಲುವು ಖಾತ್ರಿ ಪಡಿಸಿದ್ದಾರೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಪರಾಭವಗೊಂಡಿದ್ದಾರೆ.

ಕೇರಳದಲ್ಲಿ ಖಾತೆ ತೆರೆದ ಬಿಜೆಪಿ | ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ Read More »

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ| ಎರ್ನಾಕುಲಂ ಜಿಲ್ಲೆ ಆರೆಂಜ್ ಅಲರ್ಟ್

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ . ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.  ಪಟ್ಟಣಂತಿಟ್ಟ, ಆಲಪ್ಪುಳ, ಇಡುಕ್ಕಿ, ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೂಕುಸಿತ ಸಂಭವಿಸುವ ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇರುವ ಕಾರಣ ಗುಡ್ಡಗಾಡು ಪ್ರದೇಶದಲ್ಲಿ

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ| ಎರ್ನಾಕುಲಂ ಜಿಲ್ಲೆ ಆರೆಂಜ್ ಅಲರ್ಟ್ Read More »

ಮನೆ ಬಾಗಿಲಿಗೇ ಆರೋಗ್ಯ ಸೇವೆ | ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ

ಹುಬ್ಬಳ್ಳಿ : ಮನೆ ಬಾಗಿಲಿಗೇ ಆರೋಗ್ಯ ಸೇವೆ ಪೂರೈಸುವ ಕುರಿತು ರಾಜ್ಯ ಸರಕಾರ ಜನತೆಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ. ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಜಾಗೃತಿ ಜೊತೆ ಆರಂಭದಲ್ಲಿಯೇ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಪ್ರಮುಖ

ಮನೆ ಬಾಗಿಲಿಗೇ ಆರೋಗ್ಯ ಸೇವೆ | ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ Read More »

ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು

ಚಿಕ್ಕಬಳ್ಳಾಪು: ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14) ಮೃತಪಟ್ಟವರು. ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಹೊರಡಲಿದ್ದು, ದಂಡಿಗಾನಹಳ್ಳಿ ಜಲಾಶಯವನ್ನು ಕಣ್ಣುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್‌ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದ್ದೇ ಆದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ Read More »

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 4.05ಕ್ಕೆ ಮ್ಯೂನಿಕ್ ನಿಂದ ಹೊರಟ ಲುಫ್ತಾನ್ನಾ ಏರ್ ಲೈನ್ಸ್ ವಿಮಾನ ತಡರಾತ್ರಿ 12.50 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯ್ತು. ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಲಿಕ್ಕಾಗಿ ಏರ್ ಪೋರ್ಟ್ ನಲ್ಲಿ ಎಸ್ಐಟಿ ಅಧಿಕಾರಿಗಳ ಟೀಂ ಕಾದು ಕುಳಿತಿತ್ತು.

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ Read More »

ಜೂ.3 :ವಿಧಾನಪರಿಷತ್ ಚುನಾವಣೆ : ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ. ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಿಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಹೆಚ್.ಬಿ. ಅಧಿಸೂಚನೆ ಹೊರಡಿಸಿದ್ದಾರೆ.

ಜೂ.3 :ವಿಧಾನಪರಿಷತ್ ಚುನಾವಣೆ : ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ Read More »

2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ

ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ  ಸಾಲಿನ ವಿವಿಧ  ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕವನ್ನು ಜೂನ್ 15ಕ್ಕೆ ವಿಸ್ತರಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದ್ದು, 2023ರ ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಿಕೊಡಬಹುದಾಗಿದೆ ಎಂದು ಈ ಹಿಂದಿನ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿ ಮೇ

2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ Read More »

error: Content is protected !!
Scroll to Top