ರಾಜ್ಯ

ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ತಪ್ಪು ಎಂದ ಸಿದ್ದರಾಮಯ್ಯ

ಅನರ್ಹ ಕಾರ್ಡ್‌ಗಳು ಮಾತ್ರ ರದ್ದು ಎಂದು ಸ್ಪಷ್ಟನೆ ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ.ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುತ್ತಿರುವ ಕುರಿತು ಸ್ಪಷ್ಟನೆ ನೀಡಿದ್ದಾರೆ. […]

ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ತಪ್ಪು ಎಂದ ಸಿದ್ದರಾಮಯ್ಯ Read More »

ಸುಳ್ಳು ದೂರುಗಳ ಮೂಲಕ ಹೋರಾಟ ದಮನ : ವಿಜಯೇಂದ್ರ ಆರೋಪ

ಹೋರಾಟಗಾರರ ವಿರುದ್ಧ ಛೇಲಾಗಳನ್ನು ಛೂ ಬಿಡುತ್ತಿರುವ ಸಿದ್ದರಾಮಯ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ದೂರುಗಳನ್ನು ದಾಖಲಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆದರಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಜಯೇಂದ್ರ ತೀವ್ರವಾಗಿ ಕಿಡಿಕಾರಿದ್ದಾರೆ.ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ

ಸುಳ್ಳು ದೂರುಗಳ ಮೂಲಕ ಹೋರಾಟ ದಮನ : ವಿಜಯೇಂದ್ರ ಆರೋಪ Read More »

ಕಸ್ತೂರಿ ರಂಗನ್‌ ವರದಿ ಆತಂಕ ಬೇಡ : ಸಂಸದ ಕೋಟ ಭರವಸೆ

ವರದಿ ತಿರಸ್ಕರಿಸಲು ಸರಕಾರ ನಿರ್ಧಾರ ಉಡುಪಿ : ಕಸ್ತೂರಿ ರಂಗನ್‌ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಹೀಗಾಗಿ ಕಾಡಿನಂಚಿನ ಜನರು ಕಸ್ತೂರಿ ರಂಗನ್‌ ವರದಿ ಬಗ್ಗೆ ವಿನಾ ಕಾರಣ ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಡಾ.ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಸ್ತೂರಿ ರಂಗನ್‌ ವರದಿ ಆತಂಕ ಬೇಡ : ಸಂಸದ ಕೋಟ ಭರವಸೆ Read More »

ರೇಶನ್‌ ಕಾರ್ಡ್‌ ರದ್ದು : ಸುನಿಲ್‌-ಮುನಿಯಪ್ಪ ಜಟಾಪಟಿ

ಸದ್ದಿಲ್ಲದೆ 11 ಲಕ್ಷ ಕಾರ್ಡ್‌ ರದ್ದು ಎಂದು ಸುನಿಲ್‌ ಆರೋಪ ಬೆಂಗಳೂರು: ಮಹಿಳೆಯರ ಖಾತೆಗೆ ನೇರವಾಗಿ ತಿಂಗಳಿಗೆ 2 ಸಾವಿರ ರೂ. ಹಣ ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯಿಂದ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಸರ್ಕಾರ ಬಿಪಿಎಲ್ ಕಾರ್ಡ್​ಗಳನ್ನೇ ಕಡಿಮೆ ಮಾಡಲು ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 11 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂದು ಬಿಜೆಪಿ ನಾಯಕ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರೇಶನ್‌ ಕಾರ್ಡ್‌ ರದ್ದು : ಸುನಿಲ್‌-ಮುನಿಯಪ್ಪ ಜಟಾಪಟಿ Read More »

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮಾಡಿದ್ದ ಆರೋಪದಲ್ಲಿ ಹುರುಳಿಲ್ಲ ಎಂದು ವರದಿ ಸಲ್ಲಿಸಿದ ಲೋಕಾಯುಕ್ತ ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಮಾಡಿದ್ದ 40 ಪರೆಂಟ್‌ ಕಮಿಷನ್‌ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್‌ ವಿಚಾರಣೆ

ಖುದ್ದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ತನಿಖಾಧಿಕಾರಿಯಿಂದ ನೋಟಿಸ್‌ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿ.3ರಂದು ವಿಚಾರಣೆಗೆ ಖುದ್ದು ಹಾಜರಾಗಲು ಸಚಿವ ಜಮೀರ್‌ ಅಹ್ಮದ್‌ ಖಾನ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದೆ. ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಜಮೀರ್‌ ಮನೆಗೆ ಹೋಗಿ ಲೋಕಾಯುಕ್ತ ಇನ್‌ಸ್ಪೆಕ್ಟ‌ರ್ ಸಚಿವರಿಗೆ ನೋಟಿಸ್‌ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಎಸಿಬಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್‌ ವಿಚಾರಣೆ Read More »

ವಕ್ಫ್‌ ವಿರುದ್ಧ ಬಿಜೆಪಿ ಒಂದು ತಿಂಗಳು ಅಭಿಯಾನ

ಸಂತ್ರಸ್ತರ ನೆರವಿಗೆ ವಾಟ್ಸಪ್‌ ಸಹಾಯವಾಣಿ, ವಾರ್‌ ರೂಂ ಸ್ಥಾಪನೆ ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳ ರೈತರಿಗೆ ವಕ್ಫ್​​ ಬೋರ್ಡ್ ನೋಟಿಸ್​ ನೀಡಿರುವ ವಿಚಾರವಾಗಿ ನವೆಂಬರ್​​ 25ರಿಂದ ಡಿಸೆಂಬರ್​ 25ರವರೆಗೆ ರಾಜ್ಯಾದ್ಯಂತ ಜನ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.ವಕ್ಫ್‌ ಸಮಸ್ಯೆ ಎದುರಾಗಿರುವವರಿಗೆ ಮಾಹಿತಿ ನೀಡಲು ವಾರ್ ರೂಂ ಸ್ಥಾಪನೆ ಮಾಡುತ್ತಿದ್ದೇವೆ.

ವಕ್ಫ್‌ ವಿರುದ್ಧ ಬಿಜೆಪಿ ಒಂದು ತಿಂಗಳು ಅಭಿಯಾನ Read More »

ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ

ಸೋಮವಾರದಿಂದ ಮೇಲ್ಮನವಿ ಸಲ್ಲಿಕೆ ಪ್ರಕ್ರಿಯೆ ಆರಂಭ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ.ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ

ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ Read More »

ಗಂಡಸರಿಗೂ ಸಿಗಲಿದೆಯೇ ಉಚಿತ ಪ್ರಯಾಣ ಭಾಗ್ಯ?

ಡಿ.ಕೆ. ಶಿವಕುಮಾರ್‌ ಹೇಳಿಕೆ ಹಿನ್ನೆಲೆಯಲ್ಲಿ ಗರಿಗೆದರಿದ ನಿರೀಕ್ಷೆ ಬೆಂಗಳೂರು: ಸರಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ಪುರುಷರಿಗೂ ಸಿಗಲಿದೆಯೇ? ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯೊಂದು ಈ ನಿಟ್ಟಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಳಿಕ ಗಂಡಸರಿಗೂ ಫ್ರೀ ಬಸ್‌ ಪ್ರಯಾಣ ಸೌಲಭ್ಯ ಸಿಗುವ ಸಾಧ್ಯತೆ ಇದೆ ಎಂಬ ಆಶಾಭಾವನೆ ಗರಿಗೆದರಿದೆ.ವಿಧಾನಸೌಧದಲ್ಲಿ ನಿನ್ನೆ ಔಪಚಾರಿಕವಾಗಿ

ಗಂಡಸರಿಗೂ ಸಿಗಲಿದೆಯೇ ಉಚಿತ ಪ್ರಯಾಣ ಭಾಗ್ಯ? Read More »

ಪೀಠ ಪತನಗೊಳ್ಳುವ ಭೀತಿಯಲ್ಲಿ ಬೆಚ್ಚಿಬೀಳುತ್ತಿರುವ ಸಿದ್ದರಾಮಯ್ಯ : ಸುನಿಲ್‌ ಕುಮಾರ್‌ ಲೇವಡಿ

ಉಪಚುನಾವಣೆ ಸೋಲಿನ ವಾಸನೆ ಬಡಿದು ಬಡಬಡಿಕೆ ಎಂದು ಟೀಕೆ ಕಾರ್ಕಳ : ಉಪಚುನಾವಣೆ ಫಲಿತಾಂಶ ಬರುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೀತಿಗೊಂಡಿದ್ದಾರೆ. ಪೀಠದಿಂದ ಪತನಗೊಳ್ಳುವ ಕನಸು ಬೀಳುತ್ತಿರುವುದರಿಂದ ಪದೇಪದೆ ಬೆಚ್ಚಿ ಬೀಳುತ್ತಿದ್ದಾರೆ. ನಿರಾಯಾಸವಾಗಿ ಸಿಕ್ಕಿದ ಮುಖ್ಯಮಂತ್ರಿ ಗಾದಿಯನ್ನು ತಮ್ಮದೇ ಪಕ್ಷದವರು ಇನ್ನು ಕೆಲವೇ ದಿನಗಳಲ್ಲಿ ಕಸಿದುಕೊಳ್ಳುತ್ತಾರೆ ಎಂಬ ವಾಸನೆ ಬಡಿಯುತ್ತಿದ್ದಂತೆ ಪ್ರತಿಪಕ್ಷದ ಹೆಗಲ ಮೇಲೆ ಬಂದೂಕು ಇಟ್ಟು ಸ್ವಪಕ್ಷೀಯರನ್ನು ಬೆದರಿಸಲು ಹೊರಟಿದ್ದಾರೆ ಎಂದು ಶಾಸಕ ಸುನೀಲ್‌ ಕುಮಾರ್‌ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ ತಲಾ

ಪೀಠ ಪತನಗೊಳ್ಳುವ ಭೀತಿಯಲ್ಲಿ ಬೆಚ್ಚಿಬೀಳುತ್ತಿರುವ ಸಿದ್ದರಾಮಯ್ಯ : ಸುನಿಲ್‌ ಕುಮಾರ್‌ ಲೇವಡಿ Read More »

error: Content is protected !!
Scroll to Top