ಕೇಂದ್ರ ನೂತನ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾನಿರ್ಮಲಾನಂದನಾಥ ಸ್ವಾಮೀಜಿ
ನೂತನ ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಇಂದು ಭೇಟಿ ನೀಡಿದರು. ಕ್ಷೇತ್ರಾದಿ ದೇವತೆಗಳ ಹಾಗೂ ಯುಗಯೋಗಿ ‘ಪದ್ಮಭೂಷಣ’ ಪುರಸ್ಕೃತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ […]










