ರಾಜ್ಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ !

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೆಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ […]

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ! Read More »

ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ಇನ್ನಿಲ್ಲ

ಹೈದರಾಬಾದ್ ​:ಇತ್ತೀಚೆಗಷ್ಟೇ ಆರೋಗ್ಯ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದ ,ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಮೋಜಿ ರಾವ್ (87) ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಇದೇ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಶ್ರೀ ರಾವ್ ಅವರು ಶನಿವಾರ ಬೆಳಗಿನ ಜಾವ 4:50ಕ್ಕೆ ನಿಧನರಾದರು. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ಕುಟುಂಬ, ಸ್ನೇಹಿತರು

ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ಇನ್ನಿಲ್ಲ Read More »

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣರಿಗೆ ಮಧ್ಯಂತರ ಜಾಮೀನು

ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆ‌ರ್ ದಾಖಲಿಸಲಾಗಿದೆ.  ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣರಿಗೆ ಮಧ್ಯಂತರ ಜಾಮೀನು Read More »

ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂಪೂರ್ಣ | ನೈಋತ್ಯದಿಂದ ಭೋಜೇಗೌಡ, ದಕ್ಷಿಣದಿಂದ ಕೆ.ವಿವೇಕಾನಂದ ಗೆಲುವು

ಪುತ್ತೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರೀ ತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತು ಭೋಜೇಗೌಡ ಹಾಗೂ ವಿವೇಕಾನಂದ ಅವರ ಆಪ್ತ ವಲಯದಲ್ಲಿ ಹರ್ಷ ಮುಗಿಲುಮುಟ್ಟಿದೆ.

ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂಪೂರ್ಣ | ನೈಋತ್ಯದಿಂದ ಭೋಜೇಗೌಡ, ದಕ್ಷಿಣದಿಂದ ಕೆ.ವಿವೇಕಾನಂದ ಗೆಲುವು Read More »

ಜೂ.16 : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ | ಜೂ.10 ನೋಂದಾಯಿಸಲು ಕೊನೆಯ ದಿನಾಂಕ

ಪುತ್ತೂರು : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ ಜೂ.16 ಭಾನುವಾರ ಬೆಂಗಳೂರು ಚೌಡೇಶ್ವರಿ ನಗರದ ನಮ್ಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಲಿದೆ. ಹತ್ತು ಕುಟುಂಬ ಹದಿನೆಂಟು ಗೋತ್ರದ ಕುಲಬಾಂಧವರಿಗೆ ಭಾವಿ ವಧು-ವರರ ಮುಖಾಮುಖಿ ಭೇಟಿ ಕಾರ್ಯಕ್ರಮ ಇದಾಗಿದೆ. ಆನ್‍ ಲೈನ್‍ ನಲ್ಲಿ ನೋಂದಾಯಿಸಲು ಜೂ.10 ಕೊನೆಯ ದಿನಾಂಕವಾಗಿದೆ. www.kdkgowdasamaja.com ನಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ ಅಧ್ಯಕ್ಷೆ ಶಶಿಪ್ರಭಾ ಮಡ್ತಿಲ- 9008949543, ಉಪಾಧ್ಯಕ್ಷೆ – ಗಂಗಮ್ಮ ಸುರೇಶ್‍

ಜೂ.16 : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ | ಜೂ.10 ನೋಂದಾಯಿಸಲು ಕೊನೆಯ ದಿನಾಂಕ Read More »

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ Read More »

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಯರಗಟ್ಟಿ ಬೆಳಗಾವಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವ‌ರ್ (23) ಕೊಲೆಯಾದ ಯುವಕ. ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಯುವಕ ಹೋಗಿದ್ದನು. ಆದರೆ ಬರ್ತ್‌ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆ ಆದ ವೇಳೆ ಮಾತಿಗೆ ಮಾತು ಬೆಳೆದು ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ Read More »

ಕೇರಳದಲ್ಲಿ ಖಾತೆ ತೆರೆದ ಬಿಜೆಪಿ | ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ

ಕೇರಳ :ಲೋಕಸಭಾ  ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ  ರಾಜ್ಯಸಭಾ ಮಾಜಿ ಸದಸ್ಯ ಸುರೇಶ್ ಗೋಪಿ ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ಗೆಲುವು ಖಾತ್ರಿ ಪಡಿಸಿದ್ದಾರೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಪರಾಭವಗೊಂಡಿದ್ದಾರೆ.

ಕೇರಳದಲ್ಲಿ ಖಾತೆ ತೆರೆದ ಬಿಜೆಪಿ | ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ Read More »

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ| ಎರ್ನಾಕುಲಂ ಜಿಲ್ಲೆ ಆರೆಂಜ್ ಅಲರ್ಟ್

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ . ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.  ಪಟ್ಟಣಂತಿಟ್ಟ, ಆಲಪ್ಪುಳ, ಇಡುಕ್ಕಿ, ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೂಕುಸಿತ ಸಂಭವಿಸುವ ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇರುವ ಕಾರಣ ಗುಡ್ಡಗಾಡು ಪ್ರದೇಶದಲ್ಲಿ

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ| ಎರ್ನಾಕುಲಂ ಜಿಲ್ಲೆ ಆರೆಂಜ್ ಅಲರ್ಟ್ Read More »

ಮನೆ ಬಾಗಿಲಿಗೇ ಆರೋಗ್ಯ ಸೇವೆ | ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ

ಹುಬ್ಬಳ್ಳಿ : ಮನೆ ಬಾಗಿಲಿಗೇ ಆರೋಗ್ಯ ಸೇವೆ ಪೂರೈಸುವ ಕುರಿತು ರಾಜ್ಯ ಸರಕಾರ ಜನತೆಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ. ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಜಾಗೃತಿ ಜೊತೆ ಆರಂಭದಲ್ಲಿಯೇ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಪ್ರಮುಖ

ಮನೆ ಬಾಗಿಲಿಗೇ ಆರೋಗ್ಯ ಸೇವೆ | ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ Read More »

error: Content is protected !!
Scroll to Top