ರಾಜ್ಯ

ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು

ಚಿಕ್ಕಬಳ್ಳಾಪು: ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14) ಮೃತಪಟ್ಟವರು. ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಹೊರಡಲಿದ್ದು, ದಂಡಿಗಾನಹಳ್ಳಿ ಜಲಾಶಯವನ್ನು ಕಣ್ಣುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. […]

ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್‌ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದ್ದೇ ಆದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ Read More »

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 4.05ಕ್ಕೆ ಮ್ಯೂನಿಕ್ ನಿಂದ ಹೊರಟ ಲುಫ್ತಾನ್ನಾ ಏರ್ ಲೈನ್ಸ್ ವಿಮಾನ ತಡರಾತ್ರಿ 12.50 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯ್ತು. ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಲಿಕ್ಕಾಗಿ ಏರ್ ಪೋರ್ಟ್ ನಲ್ಲಿ ಎಸ್ಐಟಿ ಅಧಿಕಾರಿಗಳ ಟೀಂ ಕಾದು ಕುಳಿತಿತ್ತು.

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ Read More »

ಜೂ.3 :ವಿಧಾನಪರಿಷತ್ ಚುನಾವಣೆ : ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ. ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಿಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಹೆಚ್.ಬಿ. ಅಧಿಸೂಚನೆ ಹೊರಡಿಸಿದ್ದಾರೆ.

ಜೂ.3 :ವಿಧಾನಪರಿಷತ್ ಚುನಾವಣೆ : ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ Read More »

2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ

ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ  ಸಾಲಿನ ವಿವಿಧ  ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕವನ್ನು ಜೂನ್ 15ಕ್ಕೆ ವಿಸ್ತರಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದ್ದು, 2023ರ ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಿಕೊಡಬಹುದಾಗಿದೆ ಎಂದು ಈ ಹಿಂದಿನ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿ ಮೇ

2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ Read More »

ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದೇ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಿಷಯ ಒಂದು ದುರ್ದೈವದ ವಿಷಯ. ಹಲವಾರು ಅಧಿಕಾರಿಗಳ ಬಗ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಆದರೆ ಅವರೇ ತಿಳಿದು ರಾಜೀನಾಮೆ ಕೊಡುವುದು ಸೂಕ್ತ

ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ Read More »

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು

ಹಾಸನ: ಕೆಲದಿನಗಳ ಹಿಂದೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ. ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು Read More »

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ

ಕೊಪ್ಪಳ: ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಲಿಂಗಾಪುರದ ರಾಜೇಶ್ವರಿ (50), ವಸಂತಾ (28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್ (5) ಮೃತಪಟ್ಟವರೆಂದು ಗುರುತಿಸಲಾಗಿದೆ. ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ Read More »

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ

ಬೆಂಗಳೂರು: 2023-24 ರಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಿದ ವಿಚಾರ ವಿವಾದ ಶುರು ಮಾಡಿತ್ತು. ಆದರೂ ಈ ಬಾರಿ ಕೂಡಾ ಅಂದರೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ-1, ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ -2 ಮಾಡಲಾಗುವುದು. ನಂತರ ಎಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳುವುದು ಎಂದು ಹೇಳಲಾಗಿದೆ. 2023-24 ರ 5,8

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ Read More »

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ

ಮಂಡ್ಯ : ಓವ‌ರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್‌ ಠಾಣೆ ಎದುರು

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ Read More »

error: Content is protected !!
Scroll to Top