ರಾಜ್ಯ

ಪತಿಯಿಂದ ಪತ್ನಿಯ ಹತ್ಯೆ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ಮೈಸೂರು  ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್‌ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು […]

ಪತಿಯಿಂದ ಪತ್ನಿಯ ಹತ್ಯೆ Read More »

ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ತುರ್ತು ಭೂಸ್ಪರ್ಶ

ಬೆಂಗಳೂರು: ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್

ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ತುರ್ತು ಭೂಸ್ಪರ್ಶ Read More »

ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಕೊಲೆ ಭಾಗ್ಯ ಕಾಣುವಂತಾಗಿದೆ | ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ ಬಿ.ವೈ.ವಿಜಯೇಂದ್ರ

ಬೆಂಗಳೂರು : ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಮನೆಯಿಂದ ಆಚೆ ಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು, ಕೊಲೆ, ದಾಂಧಲೆ, ದರೋಡೆ ಪ್ರಕರಣಗಳು ವಿಪರೀತ ಪ್ರಮಾಣದಲ್ಲಿ ಏರಿಕೆ ಆಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ‘ಎಕ್ಸ್’ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಡದ ಕಾರಣ ನಾಗರಿಕ ಸಮಾಜದ

ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಕೊಲೆ ಭಾಗ್ಯ ಕಾಣುವಂತಾಗಿದೆ | ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ ಬಿ.ವೈ.ವಿಜಯೇಂದ್ರ Read More »

ಹೊಸ ಪಡಿತರ ಚೀಟಿ ಪಡೆಯುವವರಿಗೆ ಗುಡ್ ನ್ಯೂಸ್ | ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಿದೆ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವವರಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಉಚಿತವಾಗಿ ನೀಡುವ ಪಡಿತರವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ. ಇದರ ಜೊತೆಗೆ ಕರ್ನಾಟಕದ ರಾಜ್ಯ ಸರಕಾರ ನೀಡುತ್ತಿರುವ ಪಂಚ ಗ್ಯಾರಂಟಿಗಳಿಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿಯ ಅಗತ್ಯವಿದೆ. ಆದರೆ ಕಳೆದ ಹಲವಾರು ಸಮಯಗಳಿಂದ ಹೊಸ ರೇಷನ್ ಕಾರ್ಡ್ ನೀಡುತ್ತಿಲ್ಲವಾದ್ದರಿಂದ ಹಲವಾರು ಕುಟುಂಬ ಸರಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಹೊಸ ಪಡಿತರ ಚೀಟಿ ನೀಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕರ್ನಾಟಕ ಪಡಿತರ ಚೀಟಿಗೆ

ಹೊಸ ಪಡಿತರ ಚೀಟಿ ಪಡೆಯುವವರಿಗೆ ಗುಡ್ ನ್ಯೂಸ್ | ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಿದೆ Read More »

ರೋಣದ ವೀರಭದ್ರೇಶ್ವರ ಜಾತ್ರೆ : ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಮೃತ್ಯು

ಗದಗ: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವಿಗೀಡಾಗಿ, ಓರ್ವ ಗಾಯಗೊಂಡ ದುರ್ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ರೋಣದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಶನಿವಾರ ಸಂಜೆ ಮಹಾರಥೋತ್ಸವ ನಡೆಯಿತು. ಈ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿದೆ. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ಮಲ್ಲಪ್ಪ ಲಿಂಗನ ಗೌಡ್ರ(55) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಹೆಸರು ತಿಳಿದು ಬಂದಿಲ್ಲ. ಮುಖದ ಮೇಲೆ

ರೋಣದ ವೀರಭದ್ರೇಶ್ವರ ಜಾತ್ರೆ : ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಮೃತ್ಯು Read More »

ಗ್ಯಾರಂಟಿ ಯೋಜನೆಗಳಿಂದ ತತ್ತರಿಸಿದ ರಾಜ್ಯ ಸರಕಾರ | ಸರಿದೂಗಿಸಲು ಏರಿಕೆ ಮಾಡಲಿದೆ ಮದ್ಯದ ದರ

ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ರಾಜ್ಯ ಸರಕಾರಕ್ಕೆ ಸವಾಲಾಗಿದೆ. ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ, ಮತ್ತೆ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್‌ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ. ಹೀಗಾಗಿ ಸರ್ಕಾರ ಮದ್ಯದ

ಗ್ಯಾರಂಟಿ ಯೋಜನೆಗಳಿಂದ ತತ್ತರಿಸಿದ ರಾಜ್ಯ ಸರಕಾರ | ಸರಿದೂಗಿಸಲು ಏರಿಕೆ ಮಾಡಲಿದೆ ಮದ್ಯದ ದರ Read More »

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್‌ ಮಾರ್ಕ್‌ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್‌ ಮಾರ್ಕ್‌ ನೀಡಲಾಗಿದ. ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್‌ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ Read More »

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಹಾಸನ : ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತ ಬಾಲಕರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು ಮುಳುಗಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು Read More »

ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ

ಬೆಂಗಳೂರು: ಯುವತಿಯೊಬ್ಬಳು  ಮನೆಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ Read More »

ಮೇ.17 ರಿಂದ 25 ರವರೆಗೆ ಥಿಯೇಟರ್‌ ಬಂದ್

ಇತ್ತೀಚೆಗೆ ಮಾಲಿವುಡ್ ನಲ್ಲಿ ಮಾತ್ರ ಸಿನಿಮಾಗಳು ರಿಲೀಸ್ ಆಗುತ್ತಿದ್ದು, ಅದು ಬಿಟ್ಟರೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲೂ ಕೈಲೆಕ್ಕದಷ್ಟು ಸಿನಿಮಾ ರಿಲೀಸ್‌ ಆಗುತ್ತಿವೆ. ಓಟಿಟಿ, ಪ್ಯಾನ್ ಇಂಡಿಯಾ ಬಂದ ಬಳಿಕ ಈಗೀಗ ಮೊದಲಿನ ಹಾಗೆ ಸ್ಟಾರ್ ನಟರ ಸಿನಿಮಾಗಳು ತಿಂಗಳಿಗೊಮ್ಮೆ ಅಥವಾ ವಾರದಲ್ಲಿ ಒಂದಾದರೂ ಬರುವುದಿಲ್ಲ. ಸ್ಟಾರ್ ನಟರು ಪ್ಯಾನ್ ಇಂಡಿಯಾ ರಿಲೀಸ್ ಗಾಗಿ ವರ್ಷದಲ್ಲಿ ಅಥವಾ ಎರಡು ವರ್ಷಕ್ಕೊಂದು ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ಆ ಸಿನಿಮಾಗಳು ರಿಲೀಸ್ ಆದ ವೇಳೆ ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳೇ

ಮೇ.17 ರಿಂದ 25 ರವರೆಗೆ ಥಿಯೇಟರ್‌ ಬಂದ್ Read More »

error: Content is protected !!
Scroll to Top