ರಾಜ್ಯ

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು : 2023-24 ನೇ ಶೈಕ್ಷಣಿಕ ವರ್ಷದ  ಎಸ್‌ ಎಸ್‌ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್.ಮಂಜುಶ್ರೀ ತಿಳಿಸಿದ್ದಾರೆ. ಮೇ.9ರಂದು ಬೆಳಿಗ್ಗೆ 10.30 ಕ್ಕೆ ಆನ್ ಲೈನ್ ನಲ್ಲಿ ಫಲಿತಾಂಶ ಘೋಷಣೆಯಾಗಲಿದೆ ಎಂದು ಇಲಾಖೆ ಘೋಷಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಈ […]

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ Read More »

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ

ಚಾರ್ಮಾಡಿ :  ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಆತಂಕಗೊಂಡ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲಿ ಅತ್ತಿದಿಂತ್ತ ತಿರುಗಾಡುತ್ತಿದ್ದರಿಂದ ವಾಹನ ಸಂಚಾರರು ಗಲಿಬಿಲಿಗೊಂಡು ಆತಂಕಕ್ಕೊಳಗಾದರು. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದವು ಎನ್ನಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ Read More »

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ. ಹೀಗೆಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದಂತೆ ಕಾಣ್ಣಿಲ್ಲ. ಕಾರು ಚಾಲಕ ಕಾರ್ತಿಕ್ ಹೇಗೆ ಹೊರಗೆ ಹೋದ್ರು ಅವರನ್ನು ಯಾಕೆ ವಶಕ್ಕೆ ಪಡೆದಿಲ್ಲ? ಚುನಾವಣೆ ಕೊನೆಯಲ್ಲಿ ಏನೋ ಪ್ರಯತ್ನ ಮಾಡಿದ್ರು. ಈ ಎಲ್ಲದರ ಸೂತ್ರದಾರ ಡಿಕೆ ಶಿವಕುಮಾರ ಎಂದು ಆರೋಪಿಸಿದರು. ಕಾಂಗ್ರೆಸ್ ವಿಧಾನಸಭಾ ಚುನಾವಣೆ

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ Read More »

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ

ಬೆಂಗಳೂರು : 2024ನೇ ಸಾಲಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಕ್ರಿಯೆ ಪ್ರಗತಿಯಲ್ಲಿ ಸಾಗಿದೆ. ಬೆಳಗ್ಗೆ ಗಂಟೆ 7 ರಿಂದ ಮತದಾನ ಶುರುವಾಗಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ದೇಶದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ದೇಶದಲ್ಲಿ ಶೇಕಡಾ 40ರಷ್ಟು ಮತ್ತು ಕರ್ನಾಟಕದಲ್ಲಿ ಶೇ. 41.59ರಷ್ಟು ಮತದಾನವಾಗಿದೆ. ಚಿಕ್ಕೋಡಿಯಲ್ಲಿ ಶೇ 45 ರಷ್ಟು, ಉತ್ತರ ಕನ್ನಡದಲ್ಲಿ ಶೇ 44.22 ರಷ್ಟು, ಶಿವಮೊಗ್ಗದಲ್ಲಿ ಶೇ 44.98 ರಷ್ಟು, ಬೆಳಗಾವಿಯಲ್ಲಿ ಶೇ.40.57 ರಷ್ಟು, ಬಳ್ಳಾರಿಯಲ್ಲಿ ಶೇ 44.36ರಷ್ಟು,

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ Read More »

ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ಸಾಧ್ಯತೆಯಿದೆ. ಎರಡನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿರುವುದರಿಂದ ಪರೀಕ್ಷಾ ಫಲಿತಾಂಶ ಪ್ರಕಟ ವಿಳಂಬವಾಗುತ್ತಿದೆ.   ಇದೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ

ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ Read More »

ಮೇ 7 ರಿಂದ 12 ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ! ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಮೇ7 ರಿಂದ 12 ತನಕ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದ‌ರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದ‌ರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 7 ರಿಂದ 12 ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ! ಹವಾಮಾನ ಇಲಾಖೆ ಮುನ್ಸೂಚನೆ Read More »

ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್

ಬೆಂಗಳೂರು: ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದು ,ಇಂದು ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ ಆಗಲಿದೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಸಿಬ್ಬಂದಿಗಳು ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಂದೆಡೆ ಮೂರು ತಿಂಗಳಿಂದ ಸಂಬಳವಿಲ್ಲ, ಮತ್ತೊಂದೆಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ. ಈ ಎಲ್ಲ ಕಾರಣಗಳಿಗೆ ಸೋಮವಾರ

ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ Read More »

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಎನ್ನಲಾಗಿದೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್‌ಐಟಿ ವಶಕ್ಕೆ

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ Read More »

ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ

ಬಳ್ಳಾರಿ : ಬಳ್ಳಾರಿ ನಗರದ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಎಸಿ ಸ್ಪೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 6 ಮಂದಿ ಗಾಯಗೊಂಡು ಓರ್ವ ಸ್ಥಿತಿ ಗಂಭೀರವಾಗಿದೆ. ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಪೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ Read More »

ರಾಜ್ಯದಲ್ಲಿ ಬಿಸಿ ಗಾಳಿ ಹೆಚ್ಚಳ | ರೆಡ್, ಆರೆಂಜ್ ಅಲರ್ಟ್ ಘೋಷಣೆ | ಏಲ್ಲೆಲ್ಲಿ?

ಬೆಂಗಳೂರು: ರಾಜ್ಯದಲ್ಲಿ ಬಿಸಿ ಗಾಳಿ ತೀವ್ರ ಹೆಚ್ಚಳ ಆಗಿದ್ದು, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಯಾದಗಿರಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ದೀರ್ಘಾವಧಿ ವರೆಗೆ ಸೂರ್ಯ ನಿಗೆ ಒಡ್ಡಿಕೊಳ್ಳುವ ಅಥವಾ ಕಷ್ಟಕರವಾದ ಕೆಲಸ ಮಾಡುವವರಲ್ಲಿ ಹೆಚ್ಚಿನ

ರಾಜ್ಯದಲ್ಲಿ ಬಿಸಿ ಗಾಳಿ ಹೆಚ್ಚಳ | ರೆಡ್, ಆರೆಂಜ್ ಅಲರ್ಟ್ ಘೋಷಣೆ | ಏಲ್ಲೆಲ್ಲಿ? Read More »

error: Content is protected !!
Scroll to Top