ರಾಜ್ಯ

ಏ. 24 : ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ

ಕೊಡಗು : ಏ.24 ರಂದು ಉತ್ತರಪ್ರದೇಶದ ಮುಖ್ಯಮಂತ್ರಿ, ಬಿಜೆಪಿ ಪ್ರಚಾರಕರಾದ ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ ನೀಡಲಿದ್ದಾರೆ. ಮಡಿಕೇರಿಯ ಗಾಂಧಿಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಅಭ್ಯರ್ಥಿ ಯದುವೀರ್ ಒಡೆಯರ್ ಪರ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ನಡಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾಹಿತಿ ನೀಡಿದ್ದಾರೆ.

ಏ. 24 : ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ Read More »

ದುಷ್ಕರ್ಮಿಗಳಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ !

ಗದಗ: ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಮಲಗಿದಲ್ಲೇ ಭೀಕರವಾಗಿ ಕೊಲೆ ಮಾಡಿದ ಘಟನೆ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಏ.17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಗುರುವಾರ ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು

ದುಷ್ಕರ್ಮಿಗಳಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ ! Read More »

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಭಾಗಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಯುತ್ತಿದೆ. ಈ ಬೃಹತ್ ರೋಡ್ ಶೋ ದಲ್ಲಿ ಅಭ್ಯರ್ಥಿ ರಾಘವೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ,  ಬಸವರಾಜ್ ಬೊಮ್ಮಾಯಿ, ಸಿಟಿ ರವಿ, ಕುಮಾರ್ ಬಂಗಾರಪ್ಪ,  ಅರಗ ಜ್ಞಾನೇಂದ್ರ, ಮುನಿಸ್ವಾಮಿ, ಗುರುರಾಜ್ ಗಂಟಿಹೊಳೆ, ಅರುಣ್ ಕುಮಾರ್ ಪುತ್ತಿಲ, ಭಾರತಿ ಶೆಟ್ಟಿ, ಮಾಳವೀಕ ಅವಿನಾಶ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ರೋಡ್ ಶೋ ತೆರೆದ ವಾಹನದಲ್ಲಿ ಪಾಲ್ಗೊಂಡರು.  ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಡಿಸಿ ಕಚೇರಿಯವರೆಗೆ ಸಾಗುತ್ತಿದೆ. ಸಾವಿರಾರು

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಭಾಗಿ Read More »

ಕನ್ನಡದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ವಿಧಿವಶ

ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ದ್ವಾರಕೀಶ್ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಪ್ರೌಢಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ

ಕನ್ನಡದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ವಿಧಿವಶ Read More »

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ

ಬೆಂಗಳೂರು: ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಅವರು  ಕನ್ನಡದ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ದಿನಗಳಿಂದ ಸೌಂದರ್ಯ ಜಗದೀಶ್ ಅವರು ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ. ಹಾಗೆಯೇ ಅವರು ಹಣಕಾಸಿನ ವಿಚಾರವಾಗಿ ಹೆಚ್ಚು ಚಿಂತೆಗೀಡಾಗಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ‌. ಸೌಂದರ್ಯ ಜಗದೀಶ್ ಅವರು ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಇತರೆ ಉದ್ಯಮಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದರು. ಆದರೆ ಇಂದು ಹಣಕಾಸಿನ ವಿಚಾರವಾಗಿ

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ Read More »

ಮಾನವ ಹಕ್ಕು ಆಯೋಗಕ್ಕೆ ಹಂಗಾಮಿ ಅಧ್ಯಕ್ಷ  ನೇಮಕ: ಡಾ. ಟಿ. ಶ್ಯಾಮ್ ಭಟ್

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹಂಗಾಮಿ ಅಧ್ಯಕ್ಷರನ್ನಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರು ಡಾ. ಟಿ. ಶ್ಯಾಮ್ ಭಟ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಮುಂದಿನ ಆದೇಶದವರೆಗೆ  ಶ್ಯಾಮ್ ಭಟ್ ಅಧ್ಯಕ್ಷ ಹುದ್ದೆಯಲ್ಲಿರಲಿದ್ದಾರೆ ಎಂದು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಎಸ್ ಸಂಗ್ರೇಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಎಸ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ

ಮಾನವ ಹಕ್ಕು ಆಯೋಗಕ್ಕೆ ಹಂಗಾಮಿ ಅಧ್ಯಕ್ಷ  ನೇಮಕ: ಡಾ. ಟಿ. ಶ್ಯಾಮ್ ಭಟ್ Read More »

ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಏ.12 ನಾಮಪತ್ರ ಸಲ್ಲಿಸಿದರು.ಬೃಹತ್ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು.ಪುತ್ರ ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಕೆಎಸ್ ಈಶ್ವರಪ್ಪ ಅವರು ಹೇಳಿಕೊಂಡತೆ “ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣ ವಿರೋಧಿಸಿ

ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ Read More »

ಕೇರಳ – ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024

ಕಾಸರಗೋಡು: ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ “ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಾಣ ಪ್ರಸಿದ್ಧ ಶತಶೃಂಗ ಪರ್ವತ ಶ್ರೇಣಿಗಳಿರುವ ಚಿನ್ನದ ನಾಡು ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ನವರು ಪ್ರತೀ ವರ್ಷ ಕೊಡಮಾಡುವ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿಯನ್ನು ಈ ಬಾರಿ ಕೇರಳದ ನಾಲ್ವರು ಹಾಗೂ ಕರ್ನಾಟಕದ ಇಬ್ಬರಿಗೆ ನೀಡಿ

ಕೇರಳ – ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 Read More »

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ

ಬೆಂಗಳೂರು : ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಉಗ್ರನ ಬಂಧನವಾಗಿದೆ. ಎನ್.ಐ.ಎ ತನಿಖೆಯಿಂದ ಬಾಂಬ್ ಇಟ್ಟಿದ್ದ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಮುಸಾಫೀರ್ ಶಾಜೀನ್ ಹುಸೇನ್ ಎಂಬ ಉಗ್ರ ಬಾಂಬ್ ಇಟ್ಟವನು ಎಂದು ತಿಳಿದುಬಂದಿದೆ. ಮುಸಾಫಿ‌ರ್ ಶಾಜೀನ್ ಹುಸೇನ್‌ನನ್ನು ಉತ್ತರ ಭಾರತದ ರಾಜ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಎನ್ ಐಎ ತಂಡದಿಂದ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಮುಸಾಫೀ‌ರ್ ಶಾಜೀನ್ ಹುಸೇನ್ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡಿದ್ದನು. ಕೊನೆಗೂ ಆತನನ್ನು

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ Read More »

ಕೆಲವು ಶ್ವಾನಗಳ ಸಾಕುವಿಕೆ ನಿಷೇಧ ಆದೇಶ: ಹೈ ಕೋರ್ಟ್ ತಡೆ

ಬೆಂಗಳೂರು : ಕೇಂದ್ರ ಸರ್ಕಾರ ಕೆಲವು ಶ್ವಾನಗಳ ಸಾಕುವಿಕೆಯನ್ನು ನಿಷೇಧಿಸಿದೆ. ಶ್ವಾನ ತಳಿಗಳ ನಿಷೇಧ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.23 ಭೀಷಣ ಶ್ವಾನ ತಳಿಗಳ ಸಾಕುವಿಕೆಗೆ ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಕೇಂದ್ರ ಸರ್ಕಾರ ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ 23 ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿತ್ತು. ಇದನ್ನು ಆಕ್ಷೇಪಿಸಿ ಶ್ವಾನ ಹ್ಯಾಂಡ್ಲ‌ರ್ & ರಾಟ್‌ವೈಲ‌ರ್ ಮಾಲೀಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತಜ್ಞರು ನಿಷೇಧಿಸುವ ಸಂಬಂಧ ಯಾರನ್ನೂ ಸಂಪರ್ಕಿಸಿಲ್ಲ ಎಂದು

ಕೆಲವು ಶ್ವಾನಗಳ ಸಾಕುವಿಕೆ ನಿಷೇಧ ಆದೇಶ: ಹೈ ಕೋರ್ಟ್ ತಡೆ Read More »

error: Content is protected !!
Scroll to Top