ರಾಜ್ಯ

ಘನವಾಹನ ನಿಷೇಧವಿದ್ದರೂ 12 ಚಕ್ರದ ಲಾರಿ ಚಲಾಯಿಸಿ ದಂಡ ವಿಧಿಸಿಕೊಂಡ ಚಾಲಕ

ಚಾರ್ಮಾಡಿ: 12 ಚಕ್ರದ ಲಾರಿಯೊಂದು ತಿರುವಿನಲ್ಲಿ ಚಲಿಸಿ ಟರ್ನ್ ಮಾಡಲಾಗದೇ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ನಡೆದಿದೆ. ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ಭಾರಿ ವಾಹನಗಳ ನಿಷೇದವಿದ್ದರೂ ಘಾಟ್ ನಲ್ಲಿ ಸಂಚಾರ ಮಾಡುತ್ತಿದ್ದಾಗ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿಲ್ಲಿಸಲು  ಸೂಚನೆ ನೀಡಿದರೂ ಚಾಲಕ ಲಾರಿಯನ್ನು ನಿಲ್ಲಿಸದೇ ಚಲಾಯಿಸಿದ್ದ. ತಕ್ಷಣ ವಿಷಯ ತಿಳಿದ ಬಣಕಲ್ ಸಬ್ ಇನ್ಸ್ಪೆಕ್ಟರ್ ಲಾರಿ ಚಾಲಕನನ್ನು […]

ಘನವಾಹನ ನಿಷೇಧವಿದ್ದರೂ 12 ಚಕ್ರದ ಲಾರಿ ಚಲಾಯಿಸಿ ದಂಡ ವಿಧಿಸಿಕೊಂಡ ಚಾಲಕ Read More »

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ

ಮಂಡ್ಯ: ನಾನು ಈ ಬಾರಿ ಪಕ್ಷೇತರಳಾಗಿ ಸ್ಪರ್ಧೆ‍ ಮಾಡುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನಾನು ಬೆಂಬಲ ನೀಡುತ್ತೇನೆ. ಆದರೆ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ, ರಾಜಕೀಯ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮೋದಿ ಅವರು ದೇಶದ ಬಗ್ಗೆ ಹೊಂದಿರುವ ಕನಸಿಗೆ ನಾವು ಬೆಂಬಲವಾಗಿ ನಿಲ್ಲಬೇಕು. ನನ್ನ ಎಂಪಿ ಸ್ಥಾನವನ್ನು ಬಿಟ್ಟು ಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೀನಿ ಎಂದು ಘೋಷಿಸಿದರು.

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ Read More »

ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸ್ತುತ ಬಿಸಿಲ ಧಗೆಯಿಂದ ಬಳಲುತ್ತಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಯಪುರದಲ್ಲಿ ಭಾರೀ ಮಳೆಯಾಗಲಿದ್ದು, ಎಲ್ಲೋ ಅಲರ್ಟ್‍ ಘೋಷಿಸಲಾಗಿದೆ. ದ.ಕ., ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರುಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಇಂದು ಮೈಸೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮಿತ್ ಶಾ ರೋಡ್ ಶೋ | ಉಪಮುಖ್ಯಮಂತ್ರಿ ಭದ್ರಕೋಟೆಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಭದ್ರಕೋಟೆಯಾದ ಹಳೆ ಮೈಸೂರು ಭಾಗದಲ್ಲೆ ಅಮಿತ್‍ ಶಾ ಇಂದು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಅಮಿತ್ ಶಾ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ದಿಲ್ಲಿಯಿಂದ ಸೋಮವಾರ ರಾತ್ರಿ ಅಮಿತ್ ಶಾ ಅವರು ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದ್ದು, ಮಧ್ಯರಾತ್ರಿ 2.30 ಕ್ಕೆ ಎಚ್‍ ಎ ಎಲ್‍ ಏರ್‍

ಇಂದು ಮೈಸೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮಿತ್ ಶಾ ರೋಡ್ ಶೋ | ಉಪಮುಖ್ಯಮಂತ್ರಿ ಭದ್ರಕೋಟೆಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ Read More »

ಕರ್ನಾಟಕ ಫ್ಯಾಷನ್ ಸ್ಪರ್ಧೆ : ಗೂನಡ್ಕದ ಸಮೃದ್ಧಿಗೆ ರನ್ನರ್ ಆಫ್‍ ಪ್ರಶಸ್ತಿ

ಮೈಸೂರು: ಮೈಸೂರಿನ ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಮೊದಲನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕರ್ನಾಟಕ ಫ್ಯಾಷನ್ ಸ್ಪರ್ಧೆಯ 4 ರಿಂದ 9 ವರ್ಷದ ಮಕ್ಕಳ ವಿಭಾಗದಲ್ಲಿ ಕು. ಸಮೃದ್ಧಿ ಮೊದಲ ರನ್ನರ್ ಆಫ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾಳೆ. ಈಕೆ ಗೂನಡ್ಕ ಬೀಜದಕಟ್ಟೆ ನಿವಾಸಿ ಸದಾನಂದ ಮತ್ತು ಸುಳ್ಯ ನಗರ ಪಂಚಾಯತ್ ಉದ್ಯೋಗಿ ಆಶಾ ಬಿ.ಆರ್. ದಂಪತಿ ಪುತ್ರಿ. ಮಾರುತಿ ಐಪಿಎಸ್ ನಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಕರ್ನಾಟಕ ಫ್ಯಾಷನ್ ಸ್ಪರ್ಧೆ : ಗೂನಡ್ಕದ ಸಮೃದ್ಧಿಗೆ ರನ್ನರ್ ಆಫ್‍ ಪ್ರಶಸ್ತಿ Read More »

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ !

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ ಇದ್ದು, ಈ ಕುರಿತು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.1 ರಿಂದ 22 ರ ತನಕ ರಾಜ್ಯದ 1120 ಕ್ಕೂ ಅಧಿಕ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಮಾ.25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದೆ. ಬಹುತೇಕ ಮೌಲ್ಯಮಾಪನ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ ! Read More »

ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ?

ಬೆಂಗಳೂರು: ತಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಮಾತುಗಳು ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿ ಸಂಚಲನ ಸೃಷ್ಟಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬೇಕು. ಅಷ್ಟು ಲೀಡ್ ಬಂದದ್ದೇ ಆದರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ಇರಬೇಕೋ, ಬೇಡೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವರುಣ ಕ್ಷೇತ್ರದಲ್ಲಿ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ ಮತಯಾಚಿಸಿದ್ದಾರೆ. ಆದರೆ ಅದು ಅವರಿಗೇ

ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ? Read More »

ಏರಿದ ತಾಪಮಾನ : ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆ ಏರಿಕೆ | ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಾದ ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವರುಣನ ಆಗಮನಕ್ಕೆ ತಡವಾದ ಕಾರಣ ನೆಲದ ಕಾವು ಏರುತ್ತಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಉಷ್ಣಾಂಶ ಮಿತಿಮೀರಿದೆ. ಆದರಿಂದ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಉಷ್ಣಾಂಶ ಇನ್ನೂ

ಏರಿದ ತಾಪಮಾನ : ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆ ಏರಿಕೆ | ಹವಾಮಾನ ಇಲಾಖೆ ಎಚ್ಚರಿಕೆ Read More »

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ಆರೋಪಿ. ಎನ್ ಐ ಎ ಅಧಿಕಾರಿಗಳು ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5, ಉತ್ತರಪ್ರದೇಶದ 1 ಕಡೆ ಸೇರಿದಂತೆ 18 ಕಡೆಗಳಲ್ಲಿ ಎನ್ ಐ ಎ ತಂಡಗಳು ದಾಳಿ ನಡೆಸಿತ್ತು. ಈ ಹಿಂದೆ

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ Read More »

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ |

ಬೆಂಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು. ಚುನಾವಣಾಧಿಕಾರಿಯ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಚುನಾವಣಾಧಿಕಾರಿ ಮೂಲಕ ನಾಮಪತ್ರ ಸಲ್ಲಿಸಬಹುದು. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ | Read More »

error: Content is protected !!
Scroll to Top