ರಾಜ್ಯ

ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ

ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನು ಮುಂದೆ ಭಾನುವಾರವೂ ಉಪ ನೋಂದಣಾ ಕಚೇರಿ ತೆರೆಯಲಿದೆ. ಸಾರ್ವಜನಿಕರಿಗೆ ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಜಾರಿ ಮಾಡಲಾಗುವುದು. ಬಳಿಕ ಮಹಾನಗರಗಳಲ್ಲಿ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೆಲಸಕ್ಕೆ ರಜೆ ಹಾಕಿ ಬರಬೇಕಾದ ಪರಿಸ್ಥಿತಿ ಇರುವುದರಿಂದ ಜನರ ಅನುಕೂಲಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲೂ ಉಪನೋಂದಣಾ ಕಚೇರಿಯನ್ನು ಭಾನುವಾರವೂ ತೆರೆಯಲು ನಿರ್ಧಾರ […]

ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ Read More »

ಹಾಸ್ಟೇಲ್ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು !

ಬೆಂಗಳೂರು: ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿಯೋರ್ವರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇರಳದ ಎಲ್ಲಂಪ್ಲಾಕಲ್ ನ ಅನಿಲ (19) ಮೃತಪಟ್ಟ ವಿದ್ಯಾರ್ಥಿನಿ. ಬಿಜು ಹಾಗೂ ಉಡುಂಬಂಜೋಳ ಪಂಚಾಯತ್‍ ಉಪಾಧ್ಯಕ್ಷೆ ಬೀನಾ ಅವರ ಪುತ್ರಿಯಾಗಿರುವ ಅನಿಲ ಹಾಸ್ಟೇಲ್ ಕಟ್ಟಡದಿಂದ ಬಿದ್ದು ಶವವಾಗಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನಲ್ಲಿ ಫಿಸಿಯೋಥೆರಪಿ ವಿದ್ಯಾರ್ಥಿನಿಯಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಹಾಸ್ಟೇಲ್ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು ! Read More »

ಇಂದು ಅಂತಿಮಗೊಳ್ಳಲಿದೆ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ |  28 ರಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಗ್ಯಾರಂಟಿ : ಬಿ.ಎಸ್.ಯಡಿಯೂರಪ್ಪ

ದೆಹಲಿ: ಇಂದು ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮಾಜಿ ಸಿಎಂ ಬಿ.ಎಸ್‍.ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೆಹಲಿಯಲ್ಲಿದ್ದು, ಈ ಕುರಿತು ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದಾರೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಈ ಬಾರಿ ಗೆಲುವು ಗ್ಯಾರಂಟಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ಲೋಕಸಭಾ ಅಭ್ಯರ್ಥಿ ವಿಚಾರದ ಕುರಿತು ಯದುವೀರ್‍ ಅವರಲ್ಲಿ ಚರ್ಚೆ ಮಾಡಿರುವ ಕುರಿತು ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ. ಹಾಲಿ ಎಂಪಿಗಳಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ

ಇಂದು ಅಂತಿಮಗೊಳ್ಳಲಿದೆ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ |  28 ರಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಗ್ಯಾರಂಟಿ : ಬಿ.ಎಸ್.ಯಡಿಯೂರಪ್ಪ Read More »

ನಾಳೆ ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ | ಸಂಜೆಯೊಳಗೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ | ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಪರ ನಿಂತ ಬಿ.ಎಸ್‍.ವೈ.

ಬೆಂಗಳೂರು: ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಲೋಕಸಭೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ಫೈನಲ್ ಆಗಿದೆ.  ಹೀಗೊಂದು ಸುದ್ದಿ ಕಳೆದ ಒಂದು ವಾರದಿಂದ ಹರಿದಾಡುತ್ತಿದೆ. ಇದು ಗಾಸಿಪ್ ಸುದ್ದಿ ಎಂದು ಬಿಜೆಪಿ ಹೈ ಕಮಾಂಡ್ ನ ಆಪ್ತ ಮೂಲವೊಂದು ಇದೀಗ ತಿಳಿಸಿದೆ. ಈ ಪ್ರಕಾರ ಬಿ.ಎಸ್. ವೈ ಅವರು ಟಿಕೆಟ್ ಕೈ ತಪ್ಪುವವರ ಬೆಂಬಲಕ್ಕೆ ನಿಂತಿದ್ದಾರೆ. ಟಿಕೆಟ್ ಕೊಡಬಾರದೆಂದು ವಿರೋಧವಿರುವ ಬಿಜೆಪಿಯ 7 ಮಂದಿ ಹಾಲಿ ಸಂಸದರ ಪರ ನಿಂತು

ನಾಳೆ ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ | ಸಂಜೆಯೊಳಗೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ | ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಪರ ನಿಂತ ಬಿ.ಎಸ್‍.ವೈ. Read More »

ಕಾವೇರಿ ನದಿಗೆ ಈಜಲು ತೆರಳಿದ ಮೂವರು ಯುವಕರು ಮೃತ್ಯು !

ಕುಶಾಲನಗರ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮೃತಪಟ್ಟ ಘಟನೆ ಕುಶಾಲನಗರದ ಕೂಡಿಗೆಯಲ್ಲಿ ನಡೆದಿದೆ. ವಿನೋದ್, ಸಚಿನ್ ಹಾಗೂ ಶ್ರೀನಿವಾಸ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಬಾರೆಯ ರ್ಯಾಪ್ಟಿಂಗ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದವರು ನೀರಿನಲ್ಲಿ ಮುಳುಗಿದ ಯುವಕರ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಾವೇರಿ ನದಿಗೆ ಈಜಲು ತೆರಳಿದ ಮೂವರು ಯುವಕರು ಮೃತ್ಯು ! Read More »

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ ಸುಧಾ ಮೂರ್ತಿ

ಬೆಂಗಳೂರು: ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ, ಸಮಾಜ ಸೇವಕಿ ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿಯಾಗಿರುವ ಸುಧಾ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಭಾರತದ ರಾಷ್ಟ್ರಪತಿಗಳು ಈ ನಿರ್ಧಾರ ಕೈಗೊಂಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಯವರ ಕೊಡುಗೆ ಅಪಾರ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ ಸುಧಾ ಮೂರ್ತಿ Read More »

ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟ | ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎನ್‍ ಐ ಎ ವಶ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು, ಓರ್ವನನ್ನು ಎನ್‍ ಐ ಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್‍ ಎಂಬಾತನನ್ನು ಎನ್‍ ಐ ಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಸ್ಪೋಟದ ನಂತರ ಬಾಂಬರ್ ಬೆಂಗಳೂರಿನಿಂದ ಬೀದರ್ ಬಸ್ಸಿನಲ್ಲಿ ತೆರಳಿ ಭಟ್ಕಳ ಕಡೆಗೆ ಹೋಗಿದ್ದಾನೆ ಎಂಬ ಶಂಕೆ ಸಿಸಿಟಿವಿ ಪೂಟೇಜ್‍ ಮೂಲಕ ವ್ಯಕ್ತವಾಗಿದ್ದು, ಉಗ್ರನ ಪತ್ತೆಗೆ ತನಿಖೆಗೆ ತೀವ್ರಗೊಳಿಸಲಾಗಿದೆ. ಮಿನಾಜ್

ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟ | ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎನ್‍ ಐ ಎ ವಶ Read More »

ರಾಮೇಶ್ವರಂ ಕೆಫೆ ಬ್ಲಾಸ್ಟ್ ಶಂಕಿತನ ರೇಖಾಚಿತ್ರ ಬಿಡುಗಡೆ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಶಂಕಿತ ಉಗ್ರನ ಸುಳಿವಿಗೆ 10 ಲಕ್ಷ ನಗದು ಬಹುಮಾನ ಘೋಷಣೆ ಬೆನ್ನಲ್ಲೇ ಬಾಂಬರ್‍ ನ ರೇಖಾಚಿತ್ರವನ್ನು ಸಿಸಿಬಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬಾಂಬರ್‍ ನ ಸಿಸಿಟಿವಿ ಫೋಟೋವನ್ನು ಬುಧವಾರ ಎನ್‌ಐಎ ಬಿಡುಗಡೆ ಮಾಡಿತ್ತು. ಆದರೆ ಬಾಂಬರ್‍ ನ ಚಹರೆ ದೃಶ್ಯ ಸಮರ್ಪಕವಾಗಿ ಸ್ಪಷ್ಟವಾಗದ ಹಿನ್ನಲೆಯಲ್ಲಿ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ. ಸಿಸಿ ಟಿವಿ ದೃಶ್ಯ ಬಿಡುಗಡೆಗೊಂಡಾಗ ಆರೋಪಿಯನ್ನು ನೋಡಿದ್ದಾಗಿ ಸಾರ್ವಜನಿಕರಿಂದ ಸಾಕಷ್ಟು ಕರೆಗಳು ಬಂದಿವೆ ಈ ಹಿನ್ನಲೆಯಲ್ಲಿ ರೇಖಾಚಿತ್ರ ಬಿಡುಗಡೆ ಮಾಡಲು

ರಾಮೇಶ್ವರಂ ಕೆಫೆ ಬ್ಲಾಸ್ಟ್ ಶಂಕಿತನ ರೇಖಾಚಿತ್ರ ಬಿಡುಗಡೆ Read More »

2024-25ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣೆ | ಪಠ್ಯ ಕ್ರಮದಲ್ಲಿ ಬದಲಾವಣೆ

ಬೆಂಗಳೂರು: ಸರಕಾರ 2024-25ನೇ ಸಾಲಿನ ಪಠ್ಯಪುಸ್ತಕಗಳನ್ನು ಕೊನೆಗೂ ಪರಿಷ್ಕರಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಕುರಿತು ಶಾಲಾ ಶಿಕ್ಷಣ ಇಲಾಖೆ ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಈ ಹಿಂದೆಯೇ ಕಾಂಗ್ರೆಸ್ ಸರ್ಕಾರ ತಿಳಿಸಿತ್ತು. 2023-24 ಸಾಲಿನಲ್ಲೂ ಹಲವು ತಿದ್ದುಪಡಿ ಮಾಡಿತ್ತು. ಇದರಂತೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿದೆ. 1 ರಿಂದ 10 ನೇ ತರಗತಿವರೆಗಿನ

2024-25ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣೆ | ಪಠ್ಯ ಕ್ರಮದಲ್ಲಿ ಬದಲಾವಣೆ Read More »

ಇಂದು ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮಹತ್ವದ ಸಭೆ | ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಸುತ್ತಿನ ಪಟ್ಟಿ ಬಿಡುಗಡೆ ಹಿನ್ನಲೆಯಲ್ಲಿ ದಿಲ್ಲಿಯಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಈಗಾಗಲೇ 195 ಮಂದಿ ಪ್ರಥಮ ಪಟ್ಟಿ ಬಿಡುಗಡೆಗೊಂಡಿದ್ದು, ಇಂದಿನ ಸಭೆಯಲ್ಲಿ ಕರ್ನಾಟಕದ 28 ಅಭ್ಯರ್ಥಿಗಳ ಹೆಸರು ಘೊಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇರಲಿಲ್ಲ. ಆದರೆ ಬುಧವಾರ ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ

ಇಂದು ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮಹತ್ವದ ಸಭೆ | ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

error: Content is protected !!
Scroll to Top