ರಾಜ್ಯ

ಬೆಂಗಳೂರು: ‘ರಾಜ – ಮಹಾರಾಜ’ ಜೋಡುಕರೆ ಕಂಬಳಕ್ಕೆ ಸಂಭ್ರಮದ ತೆರೆ | ಫಲಿತಾಂಶ, ಬಹುಮಾನದ ವಿವರ ಇಲ್ಲಿದೆ

ರಾಜಧಾನಿಯ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಸಮಿತಿ ನೇತೃತ್ವದಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ ‘ರಾಜ – ಮಹಾರಾಜ’ ಜೋಡುಕರೆ ಕಂಬಳ ಕೂಟ ಸೋಮವಾರ ಮುಂಜಾನೆ ಹೊತ್ತಿಗೆ ವಿದ್ಯುಕ್ತವಾಗಿ ತೆರೆ ಕಂಡಿದೆ. ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 7 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 6 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 21 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 32 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 31 ಜೊತೆ ಹಾಗೂ ನೇಗಿಲು […]

ಬೆಂಗಳೂರು: ‘ರಾಜ – ಮಹಾರಾಜ’ ಜೋಡುಕರೆ ಕಂಬಳಕ್ಕೆ ಸಂಭ್ರಮದ ತೆರೆ | ಫಲಿತಾಂಶ, ಬಹುಮಾನದ ವಿವರ ಇಲ್ಲಿದೆ Read More »

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ವೀಕ್ಷಿಸಿ ಊರಿಗೆ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬಜಪೆ ಮೂಲದ ಕಿಶಾನ್‍ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ಫಿಲೀಪ್‍ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ನಿತೀಶ್‍ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು Read More »

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ!

ಬೆಂಗಳೂರು : ವಿವಿಧ ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಹಳೆಯ ಪ್ರಸ್ತಾವನೆಗೆ ಮತ್ತೆ ಚಾಲನೆ ನೀಡಲಾಗಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯು ಚರ್ಚೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಕುರಿತು ನವೆಂಬರ್‌ 8ರಂದು ಹೊರಡಿಸಲಾಗಿರುವ ಅರೆ ಸರ್ಕಾರಿ ಪತ್ರದಲ್ಲಿ ಈ ಕುರಿತು ಕೂಡಲೇ

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ! Read More »

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು. ಮಧ್ಯಾಹ್ನ ಏಕಾಏಕಿ ಸುರಿದ ಗಾಳಿ ಮಳೆಗೆ ಬಯಲ️ಲ್ಲಿ ನಿಂತಿದ್ದ ಜನತೆ ರಕ್ಷಣೆಗೆ ಓಡಿದರು. ಮಳೆ ಬಂದರೂ ಕಂಬಳ ಕೂಟ ಮಾತ್ರ ಸರಾಗವಾಗಿ ನಡೆಯುತ್ತಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು,

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ! Read More »

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ

ಬೆಂಗಳೂರು: ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಕರಾವಳಿಯ ಗ್ರಾಮೀಣ ಸೊಗಡು ಕಂಬಳ ರಾಜಧಾನಿಗೆ ತಲುಪಿದೆ. ಬೆಂಗಳೂರಿನಲ್ಲಿರುವ ಕರಾವಳಿಗರು ಹಾಗೂ ಕಂಬಳವನ್ನು ಮೊದಲ ಬಾರಿಗೆ ನೋಡುತ್ತಿರುವ ಹೊರ ಊರಿಗರಿಗೆ ಬೆಂಗಳೂರು ಕಂಬಳ ಹಬ್ಬವಾಗಿ ಮೂಡಿಬರುತ್ತಿದೆ. ಬೆಳಿಗ್ಗೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ರಾಜ ಮಹರಾಜ ಹೆಸರಿನ ಕಂಬಳ ಕರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸದ ಸದಾನಂದ

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ Read More »

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ

ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನಡೆಯಿತು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್​,

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ Read More »

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ

ಬೆಂಗಳೂರು: ಮಂಗಳೂರಿನ ಸುರತ್ಕಲಿನಲ್ಲಿ ಬೆಳೆದಿದ್ದ ಕ್ಯಾಪ್ಟನ್ ‍ಪ್ರಾಂಜಲ್ ಅಮರರಾಗಿದ್ದಾರೆ. ಉಗ್ರರೊಂದಿಗೆ ನಡೆದ ಕಾಳಗದಲ್ಲಿ ವೀರ ಮರಣವನ್ನಪ್ಪಿದ್ದಾರೆ. ಅವರ ಪಾರ್ಥಿವ ಶರೀರ ಬೆಂಗಳೂರಿನ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ತಲುಪಿದ್ದು, ಅಂತಿಮ ನಮನ ಸಲ್ಲಿಸಲಾಗುತ್ತಿದೆ. 29 ವರ್ಷದ ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಅಂದರೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅಂತ್ಯಕ್ರಿಯೆಯ ಮುನ್ನ ನಡೆಯುವ ವಿಧಿವಿಧಾನ ನಡೆದು ಬಳಿಕ ಮೆರವಣಿಗೆಯಲ್ಲಿ ವೀರ ಯೋಧನ ಪಾರ್ಥಿವ ಶರೀರವನ್ನು 23 ಕಿಲೋ ಮೀಟರ್ ದೂರದಲ್ಲಿರುವ ಸೋಮಸುಂದರ ಪಾಳ್ಯದ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ Read More »

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಬುಧವಾರ ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್‌ನ 29 ವರ್ಷದ ಯೋಧ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. “ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 8 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಅವರ ಪಾರ್ಥಿವ ಶರೀರವನ್ನು

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು Read More »

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ

ಬೆಂಗಳೂರು: ಡಿ. 6ರ ತನಕ ಏನೂ ಮಾತನಾಡಬೇಡ ಎಂದು ಹೈಕಮಾಂಡ್ ಹೇಳಿದೆ. ಅಲ್ಲಿಯವರೆಗೆ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸಿಗೆ ಹೋಗುವ ವಿಚಾರ ನನ್ನ ತಲೆಯಲ್ಲಿ ಇಲ್ಲ. ಆ ಯೋಚನೆಯೂ ಇಲ್ಲ. ಮತ್ತೆ ಸೋಮನಹಳ್ಳಿ ಮುದುಕಿ ಕಥೆ ಹೇಳಿ, ನನ್ನ ಕೋಳಿಯಿಂದಲೆ ಬೆಳಕಾಗೋದು ಅಂತ ಕೆಲವರು ಎಂದು ಕೊಂಡಿದ್ದಾರೆ. ಆದರೆ ಅದೆಲ್ಲ ನಡೆಯುವುದಿಲ್ಲ. ಮುದುಕಿ ಯಾರು ಕೋಳಿ ಯಾರು ಎಂದು ನೀವೇ ತೀರ್ಮಾನಿಸಿ

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ Read More »

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ ಸುದೀರ್ಘ ಮಾತುಕತೆ ನಡೆಸಿರುವ ಅವರು, ಸಂಘದ ಕಾರ್ಯಚಟುವಟಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ Read More »

error: Content is protected !!
Scroll to Top