ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಟ್ಟಿ ಬಿಡುಗಡೆ | ಆದೇಶ ಹೊರಡಿಸಿದ ರಾಜ್ಯ ಸರಕಾರ | 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನಿಗಮ ಮಂಡಳಿ ಅಧ್ಯಕ್ಷರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿದ್ದು, ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರಿಗೆ […]










