ರಾಜ್ಯ

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!

2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್ […]

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ! Read More »

ಹೆತ್ತ ಮಗುವನ್ನೇ ಹತ್ಯೆಗೈದು, ಬ್ಯಾಗಿನಲ್ಲಿ ತುಂಬಿಸಿದ ಸ್ಟಾರ್ಟಪ್ ಕಂಪೆನಿ ಸಿಇಓ!!

ಬೆಂಗಳೂರಿನ ಎ.ಐ. ಸ್ಟಾರ್ಟಪ್ ಕಂಪನಿಯೊಂದರ ಸಿಇಒ ಒಬ್ಬಾಕೆ ತನ್ನ ಮಗನನ್ನೇ ಕೊಂದು ಗೋವಾದಿಂದ ಬ್ಯಾಗ್‌ನಲ್ಲಿ ತುಂಬಿಸಿಕೊಂಡು ಬರುತ್ತಿದ್ದಾಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾಳೆ. 39 ವರ್ಷದ ಈಕೆಯ ಹೆಸರು ಸುಚನಾ ಸೇಠ್. ಬೆಂಗಳೂರಿನಲ್ಲಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್ ಮೈಂಡ್‌ಫುಲ್ ಎ.ಐ. ಲ್ಯಾಬ್ಸ್‌ನ ಸಹ-ಸ್ಥಾಪಕಿ ಹಾಗೂ ಸಿಇಒ. ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆಗೈದಿದ್ದಾಳೆ ಎಂಬುದು ಈಕೆಯ ಮೇಲಿರುವ ಆರೋಪ. ಮಗನ ಶವವನ್ನು ಬ್ಯಾಗ್‌ನಲ್ಲಿ ತುಂಬಿ ಟ್ಯಾಕ್ಸಿಯಲ್ಲಿ ಕರ್ನಾಟಕಕ್ಕೆ ಪ್ರಯಾಣಿಸುತ್ತಿರುವಾಗ ಸಿಕ್ಕಿಬಿದ್ದಿದ್ದಾಳೆ. ಸುಚನಾ ಸೇಠ್ ಅವರನ್ನು ಸೋಮವಾರ ಕರ್ನಾಟಕದ ಚಿತ್ರದುರ್ಗದಲ್ಲಿ

ಹೆತ್ತ ಮಗುವನ್ನೇ ಹತ್ಯೆಗೈದು, ಬ್ಯಾಗಿನಲ್ಲಿ ತುಂಬಿಸಿದ ಸ್ಟಾರ್ಟಪ್ ಕಂಪೆನಿ ಸಿಇಓ!! Read More »

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ!

ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ನಡೆಯನ್ನು ಟೀಕಿಸುತ್ತಲೇ ಬರುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿದೆ. ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸದ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿರುವುದಲ್ಲದೇ, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದೂ ಹೇಳಿಕೊಂಡಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ “ಬಿಜೆಪಿಗೆ ಸನ್ಮತಿ ದೇ

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ! Read More »

ಮನೆಗಳಲ್ಲಿರುವ ಅಂಗಡಿಗಳು ಕೂಡ ತೆರಿಗೆ ಪಾವತಿಸಬೇಕು!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 6 ಲಕ್ಷಕ್ಕೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೊಟೀಸ್ ಕಳುಹಿಸುತ್ತಿದೆ. ಇದರ ಜೊತೆಗೆ ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳಿಗೂ ತೆರಿಗೆ ಪಾವತಿಸುವಂತೆ ನೋಟಿಸ್ ಕಳುಹಿಸುತ್ತಿದೆ. ನಿಯಮದ ಪ್ರಕಾರ, ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಅಂಗಡಿಗಳು ಮತ್ತು ಸಣ್ಣ ಹೋಟೆಲ್‌ಗಳನ್ನು ‘ವಾಣಿಜ್ಯ’ ಎಂದು ವರ್ಗೀಕರಿಸಬೇಕು, ಅವುಗಳಿಗೆ ವಾಣಿಜ್ಯ ಘಟಕವಾಗಿ ತೆರಿಗೆ ಪಾವತಿಸಬೇಕು ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ತಿ ತೆರಿಗೆ ಸಂಗ್ರಹವನ್ನು ಸುಧಾರಿಸಲು ನಾಗರಿಕ ಸಂಸ್ಥೆ ಎಲ್ಲಾ ಆಯ್ಕೆಗಳನ್ನು ಪ್ರಯತ್ನಿಸುತ್ತಿದೆ. ಇದಲ್ಲದೆ,

ಮನೆಗಳಲ್ಲಿರುವ ಅಂಗಡಿಗಳು ಕೂಡ ತೆರಿಗೆ ಪಾವತಿಸಬೇಕು! Read More »

ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!!

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಸಾಮೂಹಿಕ ಅಂತ್ಯಸಂಸ್ಕಾರ:  ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು.  ಪರಿಹಾರ:  ಮೃತ ಯುವಕರ ಕುಟುಂಬದವರು

ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!! Read More »

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!!

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ವರ್ಷ ಬಳಿಕ ಕೆಎಫ್ ಡಿ ಮತ್ತೆ ಬಲಿ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!! Read More »

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಭಾನುವಾರ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗು, ದ.ಕ. ಗೌಡ ಸಮಾಜ ಇಡೀ ಸಮುದಾಯ, ರಾಜ್ಯ ಒಂದು ಅದ್ಭುತ ಕಾರ್ಯಕ್ರಮ ಸಂಘಟನೆ ಮಾಡುತ್ತಿದೆ. ವಿಶೇಷವಾಗಿ ದ.ಕ., ಕೊಡಗು ಗೌಡ ಸಮಾಜ ಇಡೀ ಸಮುದಾಯ ರಾಜ್ಯಕ್ಕೆ, ದೇಶಕ್ಕೆ ಅಭೂತಪೂರ್ವ

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ Read More »

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜ.7 ಭಾನುವಾರ ಲಗ್ಗೆರೆ ‘ನಮ್ಮನೆ’ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಬೆಳಿಗ್ಗೆ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಉದ್ಘಾಟಿಸಲಿದ್ದು, ಬೆಂಗಳೂರು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ, ಶಾಸಕ ಮುನಿರತ್ನ, ಮಡಿಕೇರಿ

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ Read More »

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ | ಜ. 15ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ನಗರದಾದ್ಯಂತ ಇರುವ ಕನ್ನಡ ನಾಮಫಲಕಗಳ ಸ್ಥಿತಿಗತಿ ಕುರಿತು ಜನವರಿ 15 ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುರುವಾರ ಸೂಚನೆ ನೀಡಿದೆ. ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ | ಜ. 15ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ Read More »

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!!

ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಮತ್ತಾವರದಲ್ಲಿ ಗುರುವಾರ ಸಂಜೆ ನಡೆದಿದೆ. ಮತ್ತಾವರ ಗ್ರಾಮದ ವಸಂತ (43) ಮೃತಪಟ್ಟವರು. ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವಸಂತ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆನೆ ದಾಳಿಗೆ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!! Read More »

error: Content is protected !!
Scroll to Top