ರಾಜ್ಯ

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಸಂಭವಿಸಿದ ದುರ್ಘಟನೆ ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶು ವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10.30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11.45ರ ಸುಮಾರಿಗೆ ಗರ್ಭಿಣಿ […]

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು Read More »

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಒಂದು ತಿಂಗಳು ರದ್ದು

ತುರ್ತು ರೈಲು ಹಳಿ ಕಾಮಗಾರಿಗೆ ಹಲವು ರೈಲುಗಳ ಸಂಚಾರ ವ್ಯತ್ಯಯ ಮಂಗಳೂರು: ತುರ್ತು ಹಳಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಒಂದು ತಿಂಗಳು ರದ್ದು Read More »

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಯುವತಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಈ ಕೃತ್ಯ ಎಸಗಿದ್ದಾನೆ. ಕೋಲಾರ ಮೂಲದ ಅಪ್ರಾಪ್ತೆ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸೈಯದ್ ಆಕೆ ಜೊತೆ ಸುತ್ತಾಡಿಕೊಂಡಿದ್ದನು. ಈ ವಿಷಯ ತಿಳಿದು ಪೋಷಕರು ಇಬ್ಬರಿಗೂ 2025 ಜೂನ್‌ನಲ್ಲಿ ಎಂಗೇಜ್ಮೆಂಟ್ ಮಾಡಿದ್ದರು. ನಿಶ್ಚಿತಾರ್ಥವಾದ ನಂತರ ಸೈಯದ್‌ಗೆ ಭಾವಿಪತ್ನಿ ಮೇಲೆ

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ Read More »

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು

ಏ.9ರಂದು ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು Read More »

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ Read More »

ನದಿಯಲ್ಲಿ ಮುಳುಗಿ ಬಾಲಕ ಸಾವು

ಮುಂಡಾಜೆ: ದ್ವಿತೀಯ ಪಿಯುಸಿಯ ವಿದ್ಯಾರ್ಥಿಯೊಬ್ಬ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಸಮಜಲು ಎಂಬಲ್ಲಿ ನಡೆದಿದೆ. ಮೃತನನ್ನು ನಿಶಾಂತ್ ಎಂದು ಗುರುತಿಸಲಾಗಿದೆ. ಈತ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ. ಮಾ. 18 ರ ಮಧ್ಯಾಹ್ನ ಆತ ಈಜಾಟಕ್ಕೆಂದು ನದಿಗೆ ತೆರಳಿದ್ದು, ಈ ವೇಳೆ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆತನ ಜೊತೆಗಿದ್ದವರು ಅವನನ್ನು ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ಆತ ಸಾವನ್ನಪ್ಪಿದ್ದಾನೆ.

ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಬ್ಯಾಂಕ್ ಲಾಕರಿನಲ್ಲಿರಿಸಿದ್ದ ಚಿನ್ನಾಭರಣ ಮಾಯ: ದೂರು ದಾಖಲು

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಲಾಕರಿನಲ್ಲಿ ಇರಿಸಲಾಗಿದ್ದ ಸುಮಾರು 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಬೆಂಗಳೂರಿನ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ 57 ವರ್ಷದ ಮಹಿಳೆ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಮಗನ ಮದುವೆ ಪ್ರಯುಕ್ತ ಲಾಕರಿನಲ್ಲಿ ಇರಿಸಿದ್ದ ಒಡವೆಗಳನ್ನು ತೆಗೆದುಕೊಂಡು ಹೋಗಿದ್ದ ಅವರು, ಆ ಬಳಿಕ ಅದನ್ನು ಮತ್ತೆ ಬ್ಯಾಂಕ್ ಲಾಕರಿನಲ್ಲಿ ಇರಿಸಿದ್ದರು. ಮತ್ತೆ ಕೆಲವು ಆಭರಣಗಳನ್ನು ಲಾಕರಿನಲ್ಲಿಡಲು ಕೆಲ ದಿನಗಳ ಬಳಿಕ ಅವರು

ಬ್ಯಾಂಕ್ ಲಾಕರಿನಲ್ಲಿರಿಸಿದ್ದ ಚಿನ್ನಾಭರಣ ಮಾಯ: ದೂರು ದಾಖಲು Read More »

ಹದಿನೈದು ದಿನದ ಹಸುಗೂಸು ಅನುಮಾನಾಸ್ಪದ ಸಾವು: ತಂದೆಯೇ ‌ಕೊಲೆಗೈದಿರುವ ಸಂದೇಹ

ಬೆಳಗಾವಿ: ಹದಿನೈದು ದಿನಗಳ ಹೆಣ್ಣುಗೂಸು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಮಗುವಿನ ತಂದೆಯೇ ವಿಷವುಣಿಸಿ ಕೊಲೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಮಗುವನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಹೆರಿಗೆಯ ಬಳಿ ಶೀಲಾ ಅವರು ತವರು ಮನೆಯಲ್ಲಿದ್ದರು. ಈ ಸಂದರ್ಭದಲ್ಲಿ ಶೀಲಾ ಪತಿ ಭೀಮರಾಯ ಹೆಂಡತಿ ಮತ್ತು ಮಗುವನ್ನು ನೋಡಲು ಅಲ್ಲಿಗೆ ಆಗಮಿಸಿದ್ದಾನೆ. ಆತ ಬಂದು ಹೋದ ಕೆಲ ಹೊತ್ತಿನಲ್ಲೇ ಆರೋಗ್ಯವಾಗಿದ್ದ ಮಗು ಏಕಾಏಕಿ ಮೃತಪಟ್ಟಿದೆ. ಈ ಸಾವು ಮನೆಯವರನ್ನು ಬೆಚ್ಚಿ ಬೀಳಿಸಿದೆ. ಈ ವೇಳೆ

ಹದಿನೈದು ದಿನದ ಹಸುಗೂಸು ಅನುಮಾನಾಸ್ಪದ ಸಾವು: ತಂದೆಯೇ ‌ಕೊಲೆಗೈದಿರುವ ಸಂದೇಹ Read More »

ಕತ್ತು ಸೀಳಿ ಅಪ್ರಾಪ್ತ ಯುವತಿಯ ಹತ್ಯೆ

ಬೆಂಗಳೂರು: ಹದಿನೇಳು ವರ್ಷದ ಬಾಲಕಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸಕ್ಕರೆ ಮಂಡಿ ಸಮೀಪದ ಪಾಳು ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮುಂಜಾನೆ ಸುಮಾರು 6.30 ರ ಹೊತ್ತಿಗೆ ಹತ್ಯೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಬಾಲಕಿಯರ ರಕ್ತಸಿಕ್ತ ದೇಹ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಎಫ್‌ ಎಸ್‌ ಎಲ್‌ ತಂಡ ಸ್ಥಳಕ್ಕೆ ಬಂದು ಪರಿಶೀಲನೆ

ಕತ್ತು ಸೀಳಿ ಅಪ್ರಾಪ್ತ ಯುವತಿಯ ಹತ್ಯೆ Read More »

ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!

ಬಸ್‌ ಟಿಕೆಟ್‌ ದರ ಹೆಚ್ಚಾಗಿದೆ ಎಂದು ಕೊರಿಯರ್‌ ಮೂಲಕ ಕಳುಹಿಸುವ ಐಡಿಯಾ ಬೆಂಗಳೂರು: ರೀಲ್ಸ್‌ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್‌ ಮಾಡಲು ಬಂದ ಕೊರಿಯರ್‌ ಆಫೀಸ್‌ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್‌ನಲ್ಲಿರುವ ಕೊರಿಯರ್‌ ಆಫೀಸ್‌ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ

ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ! Read More »

error: Content is protected !!
Scroll to Top