ರಾಜ್ಯ

ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶ್ರೀ!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾ ಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆ. 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಕಾರಾಗೃಹ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರಕಾರ ಮುರುಘಾ ಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು […]

ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶ್ರೀ! Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಅಂಬಾರಿ ಹೊತ್ತಿದ್ದ ಅರ್ಜುನನ ಸಾವು: ಸಂಪೂರ್ಣ ತನಿಖೆಗೆ ಸೂಚನೆ

ಬೆಂಗಳೂರು: ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವಿಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ: ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನ ಕೋಟೆಯಲ್ಲೂ ಸ್ಮಾರಕವಾಗಬೇಕೆಂದು ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ

ಅಂಬಾರಿ ಹೊತ್ತಿದ್ದ ಅರ್ಜುನನ ಸಾವು: ಸಂಪೂರ್ಣ ತನಿಖೆಗೆ ಸೂಚನೆ Read More »

ಹೈಕೋರ್ಟ್‌ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ!! | ಕೋರ್ಟ್‌ಗಳ ವಿಡಿಯೊ ಕಾನ್ಫರೆನ್ಸ್‌, ಲೈವ್‌ ಸ್ಟ್ರೀಮಿಂಗಿಗೆ ನಿರ್ಬಂಧ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ವಿವಿಧ ಕೋರ್ಟ್‌ ಹಾಲ್ ಗಳ ವೀಡಿಯೊ ಕಾನ್ಫರೆನ್ಸ್‌ ವಿಚಾರಣೆ ವೇಳೆ ಅಶ್ಲೀಲ ಚಿತ್ರ ಪ್ರದರ್ಶಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕರ ವಿರುದ್ಧ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ. ಹೈಕೋರ್ಟ್‌ ಕಂಪ್ಯೂಟರ್ಸ್‌ ರಿಜಿಸ್ಟ್ರಾರ್‌ ಕಚೇರಿಯ ಎನ್‌. ಸುರೇಶ್‌ ಅವರು ನೀಡಿದ ದೂರಿನ ಅನ್ವಯ ಅನಾಮಿಕರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ಗಳಾದ 67 ಮತ್ತು 67(ಎ) ಅಡಿ ಕೇಂದ್ರೀಯ ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ಸಾರಾಂಶ: ಕರ್ನಾಟಕ ಹೈಕೋರ್ಟ್‌ನ 6, 12, 18,

ಹೈಕೋರ್ಟ್‌ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ!! | ಕೋರ್ಟ್‌ಗಳ ವಿಡಿಯೊ ಕಾನ್ಫರೆನ್ಸ್‌, ಲೈವ್‌ ಸ್ಟ್ರೀಮಿಂಗಿಗೆ ನಿರ್ಬಂಧ Read More »

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸ್ಪೀಕರ್ ಯು. ಟಿ. ಖಾದರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಶಾಸಕ ಅಶೋಕ್ ರೈಯವರು ಕಳೆದ ಬಾರಿ ಚೊಚ್ಚಲ ಅದಿವೇಶನದಲ್ಲಿ ಭಾಗವಹಿಸಿದ್ದರು. ಸದನಕ್ಕೆ ಸಮಯಕ್ಕೆ ಸರಿಯಗಿ ಹಾಜರಾಗುವ ಸದಸ್ಯರಿಗೆ ಬಹುಮಾ ನೀಡಿ ಗೌರವಿಸಲಾಗುವುದು ಎಂದು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಘೋಷಣೆ

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್ Read More »

ಯಸಳೂರಿನ ನೆಡುತೋಪಿನಲ್ಲಿ ಅರ್ಜುನನ ಅಂತ್ಯಸಂಸ್ಕಾರ!

8 ಬಾರಿ ಅಂಬಾರಿ ಹೊತ್ತು ನಾಡಿನ ಪ್ರೀತಿ ಗಳಿಸಿದ್ದ ಅರ್ಜುನನ ಅಂತ್ಯಸಂಸ್ಕಾರ ಸಕಲೇಶಪುರ ಹಾಸನದ ಯಸಲೂರಿನ ನೆಡುತೋಪಿನಲ್ಲಿ ನಡೆಯಿತು. ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಅರ್ಜುನನಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಜೆಸಿಬಿ ಸಹಾಯದಿಂದ ಅಂತ್ಯಸಂಸ್ಕಾರ ಮಾಡಲಾಯಿತು. ಅಂತ್ಯಸಂಸ್ಕಾರದ ವೇಳೆ ಮಾವುತನ ರೋಧನ ಮುಗಿಲುಮುಟ್ಟಿತ್ತು. ಎಂತಾ ರಾಜನನ್ನು ಮಿಸ್ ಮಾಡಿಕೊಂಡೆ. ನನ್ನ ಆನೆಯನ್ನು ಬದುಕಿಸಿ ಕೊಡಿ ಎಂಬ ರೋಧನ ಕಣ್ಣೀರು ಬರಿಸುವಂತಿತ್ತು.

ಯಸಳೂರಿನ ನೆಡುತೋಪಿನಲ್ಲಿ ಅರ್ಜುನನ ಅಂತ್ಯಸಂಸ್ಕಾರ! Read More »

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’!

ಸಕಲೇಶಪುರ: ಈ ಬಾರಿ ನಾಡಹಬ್ಬ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಅಸುನೀಗಿದೆ. ಸಕಲೇಶಪುರದಲ್ಲಿ ನಡೆದ ಕಾಡಾನೆ ಸೆರೆ ವೇಳೆ ಘಟನೆ ಸಂಭವಿಸಿದೆ. ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ, ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಗಂಭೀರ ಗಾಯಗೊಂಡ ಅರ್ಜುನ ಅಸುನೀಗಿದೆ ಎಂದು ಹೇಳಲಾಗಿದೆ. ಸಕಲೇಶಪುರದ ಯಸಲೂರಿನಲ್ಲಿ ಘಟನೆ ನಡೆದಿದೆ. ದಾಳಿ ಸಂದರ್ಭ ಮಾವುತರು ಓಡಿ ಹೋಗಿದ್ದಾರೆ. ಈ ಸಂದರ್ಭ ಹಲವರ ಪ್ರಾಣ ಉಳಿಸಲು, ಅರ್ಜುನ ತನ್ನ ಪ್ರಾಣ ಪಣವಾಗಿ ಇಟ್ಟಿದ್ದ. ಇದರಿಂದ ಅರ್ಜುನ

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’! Read More »

ಸಿ.ಪಿ. ಯೋಗೇಶ್ವರ್ ಭಾವ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆ!!

ಬೆಂಗಳೂರು: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವನ ಮೃತದೇಹ ಪತ್ತೆಯಾಗಿದೆ. ರಾಮಾಪುರದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಕೊಲೆಯಾದ ಸ್ಥಿತಿಯಲ್ಲಿದೆ ಎಂದು ಹೇಳಲಾಗಿದೆ. ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ಮನೆಯಿಂದ ಶನಿವಾರ ನಾಪತ್ತೆಯಾಗಿದ್ದರು. ಅಪಹರಣದ ಶಂಕೆಯೂ ವ್ಯಕ್ತವಾಗಿತ್ತು. 62ರ ಹರೆಯದ ಮಹದೇವಯ್ಯ ಅವರು ಯೋಗೇಶ್ವರ ಸಹೋದರಿಯ ಪತಿ. ಮಹದೇವಯ್ಯ ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ ಮನೆಯಲ್ಲಿ ಅವರೊಬ್ಬರೇ ಇದ್ದರು. ಶನಿವಾರ ಬೆಳಗ್ಗೆ ಮಹದೇಶ್ವರ

ಸಿ.ಪಿ. ಯೋಗೇಶ್ವರ್ ಭಾವ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆ!! Read More »

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

ಬೆಂಗಳೂರು: ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾಳೆ. ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಆಕೆ ಬಹಿರಂಗಪಡಿಸಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್! Read More »

ನಕಲಿ ಮತದಾರರಿಗೆ ಚುನಾವಣಾ ಆಯೋಗ ಶಾಕ್!! | ರಾಜ್ಯದಲ್ಲಿ 36 ಲಕ್ಷ ನಕಲಿ ಮತದಾರರು ಪತ್ತೆ!!

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪೀಡ್ ಪೋಸ್ಟ್ ಮೂಲಕ 40 ಲಕ್ಷ ಚುನಾವಣಾ ಫೋಟೋ ಗುರುತಿನ ಚೀಟಿಗಳನ್ನು (ಇಪಿಐಸಿ) ರವಾನಿಸುತ್ತಿದೆ. ಇಪಿಐಸಿಗಳು ಮತ್ತು ನೋಟಿಸ್‌ಗಳ ಬುಕಿಂಗ್ ಮತ್ತು ವಿತರಣೆಗಾಗಿ ಅಂಚೆ ಇಲಾಖೆ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಡುವೆ ಈ ಹಿಂದೆ ಸಹಿ ಮಾಡಿದ ತಿಳುವಳಿಕಾ ಒಪ್ಪಂದವನ್ನು ಅನುಸರಿಸುತ್ತಿದೆ.

ನಕಲಿ ಮತದಾರರಿಗೆ ಚುನಾವಣಾ ಆಯೋಗ ಶಾಕ್!! | ರಾಜ್ಯದಲ್ಲಿ 36 ಲಕ್ಷ ನಕಲಿ ಮತದಾರರು ಪತ್ತೆ!! Read More »

error: Content is protected !!
Scroll to Top