ರಾಜ್ಯ

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ

ಬೆಂಗಳೂರು: ಮಂಗಳೂರಿನ ಸುರತ್ಕಲಿನಲ್ಲಿ ಬೆಳೆದಿದ್ದ ಕ್ಯಾಪ್ಟನ್ ‍ಪ್ರಾಂಜಲ್ ಅಮರರಾಗಿದ್ದಾರೆ. ಉಗ್ರರೊಂದಿಗೆ ನಡೆದ ಕಾಳಗದಲ್ಲಿ ವೀರ ಮರಣವನ್ನಪ್ಪಿದ್ದಾರೆ. ಅವರ ಪಾರ್ಥಿವ ಶರೀರ ಬೆಂಗಳೂರಿನ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ತಲುಪಿದ್ದು, ಅಂತಿಮ ನಮನ ಸಲ್ಲಿಸಲಾಗುತ್ತಿದೆ. 29 ವರ್ಷದ ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಅಂದರೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅಂತ್ಯಕ್ರಿಯೆಯ ಮುನ್ನ ನಡೆಯುವ ವಿಧಿವಿಧಾನ ನಡೆದು ಬಳಿಕ ಮೆರವಣಿಗೆಯಲ್ಲಿ ವೀರ ಯೋಧನ ಪಾರ್ಥಿವ ಶರೀರವನ್ನು 23 ಕಿಲೋ ಮೀಟರ್ ದೂರದಲ್ಲಿರುವ ಸೋಮಸುಂದರ ಪಾಳ್ಯದ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ. […]

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ Read More »

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಬುಧವಾರ ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್‌ನ 29 ವರ್ಷದ ಯೋಧ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. “ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 8 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಅವರ ಪಾರ್ಥಿವ ಶರೀರವನ್ನು

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು Read More »

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ

ಬೆಂಗಳೂರು: ಡಿ. 6ರ ತನಕ ಏನೂ ಮಾತನಾಡಬೇಡ ಎಂದು ಹೈಕಮಾಂಡ್ ಹೇಳಿದೆ. ಅಲ್ಲಿಯವರೆಗೆ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸಿಗೆ ಹೋಗುವ ವಿಚಾರ ನನ್ನ ತಲೆಯಲ್ಲಿ ಇಲ್ಲ. ಆ ಯೋಚನೆಯೂ ಇಲ್ಲ. ಮತ್ತೆ ಸೋಮನಹಳ್ಳಿ ಮುದುಕಿ ಕಥೆ ಹೇಳಿ, ನನ್ನ ಕೋಳಿಯಿಂದಲೆ ಬೆಳಕಾಗೋದು ಅಂತ ಕೆಲವರು ಎಂದು ಕೊಂಡಿದ್ದಾರೆ. ಆದರೆ ಅದೆಲ್ಲ ನಡೆಯುವುದಿಲ್ಲ. ಮುದುಕಿ ಯಾರು ಕೋಳಿ ಯಾರು ಎಂದು ನೀವೇ ತೀರ್ಮಾನಿಸಿ

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ Read More »

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ ಸುದೀರ್ಘ ಮಾತುಕತೆ ನಡೆಸಿರುವ ಅವರು, ಸಂಘದ ಕಾರ್ಯಚಟುವಟಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ Read More »

ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್!!

ರೌಡಿ ಶೀಟರ್​ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ‌ ಮುಂದಾಗಿದೆ. ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನವೆಂಬರ್ 1ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹೇಳಿದ್ದಾರೆ. ಮೈಸೂರಿನ ಲಷ್ಕರ್ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ಮುಖಂಡ ಡಾ. ಕೆ.ಎಂ.

ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್!! Read More »

ಸಿಲಿಂಡರ್‌ ಸ್ಫೋಟಕ್ಕೆ ಮನೆಯೇ ಛಿದ್ರ; ಒಂದೇ ಕುಟುಂಬದ 7 ಮಂದಿ ಗಂಭೀರ

ಮನೆಯೊಳಗಡೆ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಏಳು ಮಂದಿ ಗಾಯಗೊಂಡ ಘಟನೆ ಬೆಂಗಳೂರಿನ ಅಂಜನಾಪುರ ಸಮೀಪದ ವೀವರ್ಸ್ ಕಾಲೋನಿಯ ಮಾರುತಿ ಲೇಔಟ್‌ನಲ್ಲಿ ನಡೆದಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಐದು ಮಂದಿ ಬಾಡಿಗೆ ಪಡೆದು ವಾಸವಾಗಿದ್ದರು. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (32), ನಾಜಿಯಾ (22) ಹಾಗೂ ಇರ್ಫಾನ್ (21), ಗುಲಾಬ್ (18), ಶಹಜಾದ್ (9) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ಮುಂಜಾನೆ 5:30ರ ಸುಮಾರಿಗೆ ಅಡುಗೆ ಮನೆಯ ಲೈಟ್‌

ಸಿಲಿಂಡರ್‌ ಸ್ಫೋಟಕ್ಕೆ ಮನೆಯೇ ಛಿದ್ರ; ಒಂದೇ ಕುಟುಂಬದ 7 ಮಂದಿ ಗಂಭೀರ Read More »

ಮನೆ ಬಾಗಿಲಿಗೆ ಬರುತ್ತೆ ಮತ್ಸ್ಯ ವಾಹಿನಿ; ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯ!

ಬೆಂಗಳೂರು: ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರನ್ನು ಆರ್ಥಿಕವಾಗಿ ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಿದೆ. ಮಂಗಳವಾರ (ನ. 22) ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ದಿನದಂದು ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳ ಸೇವೆಗೆ ಚಾಲನೆ ದೊರೆತಿದೆ. ಈ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಮೂಲಕ ತಾಜಾ ಮೀನುಗಳು ಇನ್ನು ಬೆಂಗಳೂರಿನ ಮನೆ ಮನೆ ತಲುಪಲಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕಾರ್ಯಕ್ರಮವನ್ನು ರೂಪಿಸಿದೆ. ಇದರ ಹಿಂದೆ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಕೊಡಿಸುವ ಆಶಯವನ್ನು

ಮನೆ ಬಾಗಿಲಿಗೆ ಬರುತ್ತೆ ಮತ್ಸ್ಯ ವಾಹಿನಿ; ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯ! Read More »

ಬೆಂಗಳೂರಿನ ಕೊಡಗು ಮತ್ತು ದ.ಕ. ಗೌಡ ಸಮಾಜದ ನೂತನ ಆಡಳಿತ ಮಂಡಳಿ ಪುನರ್ ರಚನೆ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ 2023 -25ನೇ ಸಾಲಿನ ನೂತನ ಆಡಳಿತ ಮಂಡಳಿಯ ಪುನರ್ ರಚನೆ ನ. 19ರಂದು ಬೆಂಗಳೂರಿನ ಲಗ್ಗೆರೆಯಲ್ಲಿರುವ ನಮ್ಮನೆ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. ನಿರ್ದೇಶಕರುಗಳ ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸಮಾಜದ ನೂತನ ಅಧ್ಯಕ್ಷರಾಗಿ ಪಳಂಗಪ್ಪ ಪಾಣತ್ತಲೆ, ಉಪಾಧ್ಯಕ್ಷರಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಗೌರವ ಕಾರ್ಯದರ್ಶಿಯಾಗಿ ಸೋಮಣ್ಣ ಕುಂಭಗೌಡನ, ಖಜಾಂಜಿಯಾಗಿ ರಾಧಾಕೃಷ್ಣ ಗುತ್ತಿಗಾರುಮೂಲೆ, ಜಂಟಿ ಕಾರ್ಯದರ್ಶಿಗಳಾಗಿ ನಾಗೇಶ್ ಉಳುವಾರು ಬಂಟೋಡಿ

ಬೆಂಗಳೂರಿನ ಕೊಡಗು ಮತ್ತು ದ.ಕ. ಗೌಡ ಸಮಾಜದ ನೂತನ ಆಡಳಿತ ಮಂಡಳಿ ಪುನರ್ ರಚನೆ Read More »

ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?!

ಬೆಂಗಳೂರು: 2ನೇ ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಬಂಧನಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ ಮಧ್ಯಾಹ್ನ ಬಂಧನವಾದ ಬೆನ್ನಲ್ಲೇ, ಹೈಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ. ಜಾಮೀನು ಮಂಜೂರು ಮಾಡಿರುವ ಕೋರ್ಟ್, ಬಂಧನ ಮಾಡದಂತೆ ಚಿತ್ರದುರ್ಗ ಕಾರಾಗೃಹಕ್ಕೆ ಆದೇಶಿಸಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಮಾಹಿತಿಯನ್ನು ಇಮೇಲ್ ಮೂಲಕ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?! Read More »

ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ!!

ಚಿತ್ರದುರ್ಗ: ಮುರುಘಾ ಮಠದ ಡಾ. ಶ್ರೀ. ಶಿವಮೂರ್ತಿ ಮುರುಘಾ ಶರಣರಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ನ್ಯಾಯಾಲಯದ ಆದೇಶ ಹೊರಬಿದ್ದ ಬೆನ್ನಲ್ಲೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಶ್ರೀಗಳನ್ನು ವಶಕ್ಕೆ ಪಡೆದು, ಜಿಲ್ಲಾ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು. ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ

ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ!! Read More »

error: Content is protected !!
Scroll to Top