ಸಿಎಂ ಪುತ್ರನ ಆಡಳಿತ ದರ್ಬಾರ್!? | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಮೊಬೈಲ್’ನಲ್ಲಿ ಮಾತನಾಡಿರುವ ವೀಡಿಯೋ ಒಂದು ಇದೀಗ ಮಾಧ‍್ಯಮಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಸಭೆಯಲ್ಲಿದ್ದ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡುತ್ತಾ, “ಅಪ್ಪ ಹೇಳಿ” ಎಂದು ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಆ ಕಡೆಯಿಂದ ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಪ್ರಶ್ನೆ ಮಾಡುತ್ತಾರೆ. ಅಲ್ಲದೆ, ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, […]










