ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ ಹಾಲಶ್ರೀ | ಚೈತ್ರಾ ಕುಂದಾಪುರ ಬಂಧನದ ಬಳಿಕ ನಾಪತ್ತೆಯಾಗಿರುವ ಶ್ರೀ | ಅರ್ಜಿ ತಿರಸ್ಕೃತಗೊಂಡರೆ ಸ್ವಾಮೀಜಿಯ ಮುಂದಿನ ಹಾದಿಯೇನು? ಸಿಸಿಬಿ ಕಾರ್ಯವೈಖರಿ ಹೇಗಿರಲಿದೆ?
ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗಿನ ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಸಿಸಿಬಿ ಬಂಧನದಿಂದ ತಪ್ಪಿಸಿಕೊಳ್ಳಲು ಜಾಮೀನಿಗೆ ಅರ್ಜಿ ಹಾಕಿದ್ದಾರೆ. ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಸಂಸ್ಥಾನದ ಹಾಲಿ ಸ್ವಾಮೀಜಿಗಳಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಅವರು ನಿರೀಕ್ಷಣಾ ಜಾಮೀನು ಕೋರಿ 57ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಾಲ ಶ್ರೀಗಳು ಈ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದ ಬೆನ್ನಲ್ಲೇ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಲ್ಲಿ ಅಡಗಿ ಕುಳಿತಿದ್ದಾರೆ ಎನ್ನಲಾಗಿದೆ. […]










