ರಾಜ್ಯ

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ

ಪುತ್ತೂರು: ಬಳ್ಳಾರಿಯಿಂದ ಆಗಮಿಸಿದ ಹಿಂದೂ ಕಾರ್ಯಕರ್ತನೋರ್ವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹಾಕಿ, ಭಗವದ್ಗೀತೆಯ ಪುಸ್ತಕ ನೀಡಿ ಗೌರವಿಸಿದರು. ಅರುಣ್ ಪುತ್ತಿಲ ಅವರ ಕಚೇರಿಗೆ ಆಗಮಿಸಿದ ಬಳ್ಳಾರಿಯ ತೇಜ ಎನ್ನುವ ಯುವಕ, ಅಭಿಮಾನ ಮೆರೆದದ್ದು ಹೀಗೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತ‌ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ‌.

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ Read More »

ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ ಖಾದರ್

ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ Read More »

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು  ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ. ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಝಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ Read More »

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ

ಬೆಂಗಳೂರು : ರಾಜ್ಯದ 16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಮೇ 24ರಿಂದ ರಾಜ್ಯದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದ್ದು, 3 ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಜೊತೆಗೆ ಸಭಾಪತಿ ಅವರ ಆಯ್ಕೆಯೂ ಇದರಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರು ಬೆಂಗಳೂರಿನಲ್ಲಿ ನಡೆದ ಮೊದಲ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ Read More »

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಬೆಂಗಳೂರು: ಕರ್ನಾಟಕದ ಮುರ್ಮು ಖ್ಯಾತಿಯ ಭಾಗೀರಥಿ ಮುರುಳ್ಯ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು. ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದರ್ಶವನ್ನು ಅನುಕರಣೆ ಮಾಡಿರುವುದನ್ನು ಇಲ್ಲಿ ಗಮನಿಸಬಹುದು.

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ

ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ, ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆರ್​.ವಿ. ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಸದಸ್ಯರ ಪ್ರಮಾಣ ವಚನ ಸ್ವೀಕಾರದ ಜತೆಗೆ

ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ Read More »

ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು

ಹೊಸದಿಲ್ಲಿ: ಬೀಡಿ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅದರ ಮೇಲೆ ಇನ್ನಷ್ಟು ತೆರಿಗೆ ಹಾಕಬೇಕೆಂದು ಶಿಫಾರಸು ಮಾಡಲಾಗಿದೆ. ತಂಬಾಕು ಉತ್ಪನ್ನಗಳಿಂದ ಹರಡುವ ಕ್ಯಾನ್ಸರ್‌ ಬಗ್ಗೆ ಅಧ್ಯಯನ ನಡೆಸಿರುವ ಜೋಧ್‌ಪುರದ ಏಮ್ಸ್‌ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ ಮತ್ತು ಇಂಟರ್‌ನ್ಯಾಷನಲ್‌ ಯೂನಿಯನ್‌ ಅಗೈನ್‌ಸ್ಟ್‌ ಟ್ಯುಬರ್‌ಕ್ಯುಲೋಸಿಸ್‌ ಆ್ಯಂಡ್‌ ಲಂಗ್‌ ಡಿಸೀಸ್‌ ಜಂಟಿಯಾಗಿ ನಡೆಸಿ ಸಲ್ಲಿಸಿದ ಅಧ್ಯಯನ ವರದಿ ಈ ಶಿಫಾರಸು ಮಾಡಿದೆ. ಸಿಗರೇಟ್‌ ಸೇರಿದಂತೆ ಇತರ ತಂಬಾಕು ಉತ್ಪನ್ನಗಳ ಮೇಲೆ ಹೇರಿರುವ ತೆರಿಗೆ ಮಾದರಿಯಲ್ಲೇ ಬೀಡಿ ಮೇಲೂ ಮೇಲೆ ತೆರಿಗೆ

ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು Read More »

ನೂತನ ಅಡ್ವೊಕೇಟ್  ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು : ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ   ಇತ್ತೀಚೆಗೆ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬೀಳಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರರಾಗಿರುವ ಶಶಿಕಿರಣ್ ಶೆಟ್ಟಿ ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.

ನೂತನ ಅಡ್ವೊಕೇಟ್  ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ Read More »

ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು : ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬೀಳಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರನೂ ಆಗಿರುವ ಶಶಿಕಿರಣ್ ಶೆಟ್ಟಿ ಅವರು ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.

ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ Read More »

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೇ 22 ರಿಂದ 24 ರವರೆಗೆ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರದಿಂದ ಒಟ್ಟು ಮೂರು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು. ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ Read More »

error: Content is protected !!
Scroll to Top