ರಾಜ್ಯ

ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಮೃತ್ಯು

ಒಂದೇ ಕುಟುಂಬದ 6 ಮಂದಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಗುಜರಾತ್​ನ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ […]

ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಮೃತ್ಯು Read More »

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ

ಮೈಸೂರು ಮೂಲದ ಸಾಫ್ಟ್‌ವೇರ್‌ ಕಂಪನಿ ಮಾಲೀಕನಿಂದ ಘೋರ ಕೃತ್ಯ ಮೈಸೂರು:‌ ಮೈಸೂರು ಮೂಲದ ಅಮೆರಿಕದ ಉದ್ಯಮಿಯೊಬ್ಬರು ಹೆಂಡತಿ ಮತ್ತು ಮಗನನ್ನು ಗುಂಡಿಕ್ಕಿ ಸಾಯಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಇನ್ನೋರ್ವ ಮಗ ಹೊರಗಿದ್ದ ಕಾರಣ ಬದುಕುಳಿದಿದ್ದಾನೆ. ಹರ್ಷವರ್ಧನ ಕಿಕ್ಕೇರಿ ಈ ಕೃತ್ಯವೆಸಗಿದ ಉದ್ಯಮಿ. ಅಮೆರಿಕದ ವಾಷಿಂಗ್ಟನ್ ಬಳಿಯ ನ್ಯೂಕ್ಯಾಸಲ್‌ನಲ್ಲಿ ಪತ್ನಿ ಶ್ವೇತಾ ಮತ್ತು 14 ವರ್ಷದ ಮಗನನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏ.24ರಂದು ನಡೆದಿದೆ. ದಂಪತಿಯ ಕಿರಿಯ ಮಗ

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ Read More »

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌

ಕಾಂಗ್ರೆಸ್‌ ಸಭೆಯೊಳಗೆ ಬಂದು ಸಿಎಂಗೆ ಕಪ್ಪು ಬಾವುಟ ತೋರಿಸಿ ಗೋ ಗೋ ಪಾಕಿಸ್ಥಾನ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕಾಂಗ್ರೆಸ್‌ನ ಪ್ರತಿಭಟನಾ ಸಭೆ ಗೊಂದಲದ ಗೂಡಾಯಿತು. ಬಿಜೆಪಿಯ ಮಹಿಳಾ ಕಾರ್ಯಕರ್ತರು ಸಭೆಯೊಳಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ಇದರಿಂದ ಕೆರಳಿ ಕೆಂಡವಾದ ಸಿದ್ದರಾಮಯ್ಯನವರು ಬೆಳಗಾವಿ ಎಸ್‌ಪಿಯನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಸಿದ್ದರಾಮಯ್ಯನವರ ಸಾರ್ವಜನಿಕ

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌ Read More »

ಡೆಲ್ಲಿ ವಿರುದ್ದ ಭರ್ಜರಿ ಗೆಲುವು ಕಂಡ ಆರ್‌ಸಿಬಿ

ಬೆಂಗಳೂರು : ಆಕರ್ಷಕ ಪಂದ್ಯವಾದ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವಿನ ಕದನವು ನಿನ್ನೆ (ಏ.27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು. ರಜತ್ ಪಡೆ ಡೆಲ್ಲಿ ತಂಡವನ್ನು ಮಣಿಸುವ ಯತ್ನದಲ್ಲಿ ರಾಯಲ್ ಚಾಲೆಂಜರ್ಸ್ ತಂಡ ಯಶಸ್ಸನ್ನು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 162 ರನ್ ಪಡೆದಿತ್ತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ (RCB) ಕೇವಲ 4 ವಿಕೆಟ್ ಕಳೆದುಕೊಂಡು ಇನ್ನು 9 ಎಸೆತಗಳು ಬಾಕಿ ಇರುವಂತೆಯೇ

ಡೆಲ್ಲಿ ವಿರುದ್ದ ಭರ್ಜರಿ ಗೆಲುವು ಕಂಡ ಆರ್‌ಸಿಬಿ Read More »

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಜನಿವಾರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಮನವಿಗೆ ಸ್ಪಂದಿಸಿ ಕ್ಷಿಪ್ರ ನಿರ್ಧಾರ ಕೈಗೊಂಡ ಸಚಿವರು ಮಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಕ್ಷಿಣ ಕನ್ನಡ ಬಿಜೆಪಿ

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಜನಿವಾರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ Read More »

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡ ಜನಿವಾರ ವಿವಾದ

ಜನಿವಾರ, ಮಂಗಳಸೂತ್ರ ತೆಗೆಯಬೇಕೆಂಬ ಮಾರ್ಗಸೂಚಿಗೆ ವಿರೋಧ ಮಂಗಳೂರು: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ವೇಳೆ ಸೃಷ್ಟಿಯಾದ ಜನಿವಾರ ವಿವಾದ ಈಗ ಕೇಂದ್ರ ಸರಕಾರ ನಡೆಸುವ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡಿದೆ. ಮಂಡಳಿಯ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ ಮತ್ತು ಜನಿವಾರ ಕಳಚಿಟ್ಟು ಪರೀಕ್ಷೆ ಬರೆಯಬೇಕೆಂದು ಹೇಳಿರುವುದು ಆಕ್ರೋಶಕ್ಕೆ ಗುರಿಯಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏ.29ರಂದು ಶುರುವಾಗಲಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡ ಜನಿವಾರ ವಿವಾದ Read More »

ಬರಗಾಲ ಸಿದ್ಧನಾಥ ಆಶ್ರಮದ ಶ್ರೀ ಮಾಧವಾನಂದ ಮಹಾರಾಜರು ಲಿಂಗೈಕ್ಯ

ಪುತ್ತೂರು: ಬರಗಾಲ ಸಿದ್ಧನಾಥ ಆಶ್ರಮ ಬ್ರಹ್ಮಗಡ್ಡಿ ಮಠ, ಮುಸ್ಟೂರು, ಕಾರಟಗಿ ತಾ. ಕೊಪ್ಪಳ ಜಿಲ್ಲೆಯ ಶ್ರೀ ಮಾಧವಾನಂದ ಮಹಾರಾಜರು ಇಂದು ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಬಳ್ಪ ಗ್ರಾಮದ ಎಣ್ಣೆಮಜಲು ಮನೆಯವರಾಗಿದ್ದು, ಸುಮಾರು 45  ವರ್ಷಗಳ ಹಿಂದೆ ಕುಟುಂಬ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಪ್ರಸ್ತುತ ಬರಗಾಲ ಸಿದ್ಧನಾಥ ಆಶ್ರಮ ಬ್ರಹ್ಮಗಡ್ಡಿ ಮಠ, ಮುಸ್ಟೂರು, ಕಾರಟಗಿ ತಾ. ಕೊಪ್ಪಳ ಜಿಲ್ಲೆ ಇಲ್ಲಿ ಸ್ವಾಮೀಜಿ ಯಾಗಿ, ಮಠದ ಮಹಾರಾಜರಾಗಿ ಸಾವಿರಾರು ಭಕ್ತರನ್ನು ಹೊಂದಿದ್ದರು. ಅವರ ಅಂತ್ಯಕ್ರಿಯೆ ನಾಳೆ (ಏ.28) ಮಧ್ಯಾಹ್ನ 11.20 ಕ್ಕೆ

ಬರಗಾಲ ಸಿದ್ಧನಾಥ ಆಶ್ರಮದ ಶ್ರೀ ಮಾಧವಾನಂದ ಮಹಾರಾಜರು ಲಿಂಗೈಕ್ಯ Read More »

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ

ನಿಶಾನ್-ಎ-ಪಾಕಿಸ್ಥಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ ಆರ್‌.ಅಶೋಕ್‌ ಬೆಂಗಳೂರು: ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ಥಾನದ ಮಾಧ್ಯಮಗಳು ಪ್ರಮುಖ ಸುದ್ದಿಯಾಗಿ ಪ್ರಕಟಿಸಿವೆ. ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದಾಗ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ನಡೆಸಿದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು, ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದರೆ ಸಾಕು. ಉಗ್ರರ ದಾಳಿಗೆ ಕೇಂದ್ರ ಸರಕಾರದ ವೈಫಲ್ಯ ಕಾರಣ ಎಂದು ಹೇಳಿದ್ದರು.

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ Read More »

ರಾಜ್ಯದಲ್ಲಿ ಇನ್ನು ಇರಲ್ಲ ಬೈಕ್‌ ಟ್ಯಾಕ್ಸಿ ಸೇವೆ

ರ‍್ಯಾಪಿಡೊ, ಉಬರ್​ ಬೈಕ್​ ಟ್ಯಾಕ್ಸಿ ಸೇವೆ ರದ್ದುಪಡಿಸಲು ಸರಕಾರ ಆದೇಶ ಬೆಂಗಳೂರು: ಹೈಕೋರ್ಟ್‌ ಆದೇಶವನ್ನು ಅನುಸರಿಸಿ ರಾಜ್ಯದಲ್ಲಿ ಕರ್ನಾಟಕದಲ್ಲಿ ರ‍್ಯಾಪಿಡೊ, ಉಬರ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಮೋಟಾರ್

ರಾಜ್ಯದಲ್ಲಿ ಇನ್ನು ಇರಲ್ಲ ಬೈಕ್‌ ಟ್ಯಾಕ್ಸಿ ಸೇವೆ Read More »

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮನೆಯಲ್ಲಿ ಇ.ಡಿ.ಶೋಧ

ಚಿನ್ನ ವಂಚನೆ ಪ್ರಕರಣದಲ್ಲಿ ಶಾಮೀಲಾಗಿರುವ ಅನುಮಾನ ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮನೆಯಲ್ಲಿ ಇ.ಡಿ.ಶೋಧ Read More »

error: Content is protected !!
Scroll to Top