ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ
ಪುತ್ತೂರು : ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿಎಸ್.ಯು) ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ […]










