ರಾಜ್ಯ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ […]

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ Read More »

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ಕೈತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ . ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್ Read More »

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ

ಪ್ರಚಾರದಲ್ಲಿ ಯೋಗಿ ಆದಿತ್ಯನಾಥ್‌ ಭಾಗಿಯಾಗುವ ನಿರೀಕ್ಷೆ ಬೆಂಗಳೂರು : ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಂಗಕ್ಕಿಳಿಯಲಿದ್ದಾರೆ. ಮೇ 6 ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಸಭೆ ನಿಗದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಮಧ್ಯದಲ್ಲಿರುವ ಮೂಲ್ಕಿಯಲ್ಲಿ ಮೋದಿ ಸಭೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ನಿಗದಿಯಾಗಿರುವ ದಿನಾಂಕ. ಬದಲಾಗುವ ಸಾಧ್ಯತೆಯೂ ಇದೆಎಂದು ಪಕ್ಷದ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ Read More »

ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ : ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೆಲವು ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿರಬಹುದು. ಆದರೆ, ಅವರು ನಮ್ಮ ಮತದಾರರನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಬಿ.ಎಸ್. ಯಡಿಯೂರಪ್ಪ ಬಿಜೆಪಿ ಜತೆ ಇರುವವರೆಗೂ ಲಿಂಗಾಯತ ಮತಗಳು ಪಕ್ಷದಲ್ಲೇ ಇರುತ್ತವೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿಗಳಾದ ವೀರೇಂದ್ರ ಪಾಟೀಲ್, ಡಿ. ದೇವರಾಜ್

ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ : ಬೊಮ್ಮಾಯಿ ವಿಶ್ವಾಸ Read More »

ಸಚಿವ ಎನ್. ನಾಗರಾಜ್ ರಾಜ್ಯದ ನಂಬರ್‌ ಒನ್‌ ಒಡೆಯ : ದ್ವಿತೀಯ ಸ್ಥಾನದಲ್ಲಿ ಡಿ. ಕೆ. ಶಿವಕುಮಾರ್‌

ಬೆಂಗಳೂರು: ನಾಮಪತ್ರ ಸಲ್ಲಿಕೆ ಶುರುವಾಗುತ್ತಿದ್ದಂತೆ ಯಾವ ರಾಜಕಾರಣಿ ಎಷ್ಟು ಕೋಟಿಗಳ ಒಡೆಯ ಎಂಬ ಮಾಹಿತಿಯೂ ಬಹಿರಂಗವಾಗುತ್ತಿದೆ. ಇಷ್ಟರ ವರೆಗೆ ಲಭ್ಯವಾಗಿರುವ ಅಫಿಡವಿತ್‌ ಮಾಹಿತಿ ಪ್ರಕಾರ ರಾಜ್ಯದ ಕೋಟಿ ಕುಳಗಳಲ್ಲಿ ಸಚಿವ ಎನ್. ನಾಗರಾಜ್ ಅಲಿಯಾಸ್ ಎಂಟಿಬಿ ನಾಗರಾಜ್ ಅಗ್ರಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ದ್ವಿತೀಯ ಸ್ಥಾನದಲ್ಲಿದ್ದಾರೆ. ಎಂಟಿಬಿ ಬರೋಬ್ಬರಿ 1,609 ಕೋಟಿ ರೂ. ಸಂಪತ್ತಿನ ಒಡೆಯ ಎಂದು ಅವರ ಅಫಿಡವಿತ್‌ ತಿಳಿಸುತ್ತದೆ. ಮೂರು ವರ್ಷಗಳಲ್ಲಿ ಅವರ ಆಸ್ತಿ 400 ಕೋಟಿ ರೂ. ಏರಿಕೆಯಾಗಿದೆ. 2019ರ ಉಪಚುನಾವಣೆಗೆ ಸಲ್ಲಿಸಿದ

ಸಚಿವ ಎನ್. ನಾಗರಾಜ್ ರಾಜ್ಯದ ನಂಬರ್‌ ಒನ್‌ ಒಡೆಯ : ದ್ವಿತೀಯ ಸ್ಥಾನದಲ್ಲಿ ಡಿ. ಕೆ. ಶಿವಕುಮಾರ್‌ Read More »

ರಾಜ್ಯದಲ್ಲಿ ಗುಜರಾತ್‌ ಮೋಡೆಲ್‌ ಅನುಷ್ಠಾನ : ಬಿಜೆಪಿಯಿಂದ 73 ಹೊಸ ಅಭ್ಯರ್ಥಿಗಳು ಕಣಕ್ಕೆ

ಪುತ್ತೂರು : ರಾಜ್ಯ ಬಿಜೆಪಿಯಲ್ಲಿ ಈ ಸಲ ಹೊಸ ಮುಖಗಳಿಗೆ, ಯುವಕರಿಗೆ ಹೆಚ್ಚು ಮನ್ನಣೆ ಸಿಕ್ಕಿದೆ. ಬಿಜೆಪಿ ಬರೋಬ್ಬರಿ 73 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಯೋಗ ಮಾಡಿದೆ. ಇದು ಕಳೆದ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ಪ್ರಯೋಗದ ಫಲ. ಅಲ್ಲಿ ಹಳಬರನ್ನು ಸಾರಾಸಗಟು ಬದಿಗೆ ಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿತ್ತು. ಇದರ ಫಲವಾಗಿ ಗುಜರಾತಿನಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದು ದಾಖಲೆ ಮಾಡಿದೆ. ಈಗ ಕರ್ನಾಟಕದಲ್ಲೂ ಇದೇ ಗುಜರಾತ್‌ ಮೋಡೆಲ್‌ ಅನುಷ್ಠಾನವಾಗುತ್ತಿರುವುದು ನಿಚ್ಚಳವಾಗಿ

ರಾಜ್ಯದಲ್ಲಿ ಗುಜರಾತ್‌ ಮೋಡೆಲ್‌ ಅನುಷ್ಠಾನ : ಬಿಜೆಪಿಯಿಂದ 73 ಹೊಸ ಅಭ್ಯರ್ಥಿಗಳು ಕಣಕ್ಕೆ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ

ದೆಹಲಿ : ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು ಕಳೆದ ತಿಂಗಳು ಮಾರ್ಚ್ ನಲ್ಲಿ 29 ತಿಂಗಳ ಕನಿಷ್ಠ ಮಟ್ಟಕ್ಕೆ ಶೇಕಡಾ 1.34ಕ್ಕೆ ಇಳಿದಿದೆ.ಮೂಲ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳಲ್ಲಿನ ಮಿತವ್ಯಯದಿಂದಾಗಿ ಹಣದುಬ್ಬರ ಇಳಿಕೆಯಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತವೆ. ಇದು ಡಬ್ಲ್ಯುಪಿಐ ಆಧಾರಿತ ಹಣದುಬ್ಬರ ಇಳಿಕೆಯಾದ ಸತತ ಹತ್ತನೇ ತಿಂಗಳು. ಉತ್ಪನ್ನ ವಸ್ತುಗಳು ಮತ್ತು ಇಂಧನ ಮತ್ತು ವಿದ್ಯುತ್ ಬೆಲೆಗಳನ್ನು ಸರಾಗಗೊಳಿಸುವ ಮೂಲಕ ಫೆಬ್ರವರಿ ತಿಂಗಳಲ್ಲಿ ಇದು ಶೇಕಡಾ 3.85ರಷ್ಟಿತ್ತು. ಮಾರ್ಚ್ ತಿಂಗಳಲ್ಲಿ

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ Read More »

error: Content is protected !!
Scroll to Top