ರಾಜ್ಯ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ […]

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ Read More »

ನದಿಯಲ್ಲಿ ಮುಳುಗಿ ಬಾಲಕ ಸಾವು

ಮುಂಡಾಜೆ: ದ್ವಿತೀಯ ಪಿಯುಸಿಯ ವಿದ್ಯಾರ್ಥಿಯೊಬ್ಬ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಸಮಜಲು ಎಂಬಲ್ಲಿ ನಡೆದಿದೆ. ಮೃತನನ್ನು ನಿಶಾಂತ್ ಎಂದು ಗುರುತಿಸಲಾಗಿದೆ. ಈತ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ. ಮಾ. 18 ರ ಮಧ್ಯಾಹ್ನ ಆತ ಈಜಾಟಕ್ಕೆಂದು ನದಿಗೆ ತೆರಳಿದ್ದು, ಈ ವೇಳೆ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆತನ ಜೊತೆಗಿದ್ದವರು ಅವನನ್ನು ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ಆತ ಸಾವನ್ನಪ್ಪಿದ್ದಾನೆ.

ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಬ್ಯಾಂಕ್ ಲಾಕರಿನಲ್ಲಿರಿಸಿದ್ದ ಚಿನ್ನಾಭರಣ ಮಾಯ: ದೂರು ದಾಖಲು

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಲಾಕರಿನಲ್ಲಿ ಇರಿಸಲಾಗಿದ್ದ ಸುಮಾರು 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಬೆಂಗಳೂರಿನ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ 57 ವರ್ಷದ ಮಹಿಳೆ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಮಗನ ಮದುವೆ ಪ್ರಯುಕ್ತ ಲಾಕರಿನಲ್ಲಿ ಇರಿಸಿದ್ದ ಒಡವೆಗಳನ್ನು ತೆಗೆದುಕೊಂಡು ಹೋಗಿದ್ದ ಅವರು, ಆ ಬಳಿಕ ಅದನ್ನು ಮತ್ತೆ ಬ್ಯಾಂಕ್ ಲಾಕರಿನಲ್ಲಿ ಇರಿಸಿದ್ದರು. ಮತ್ತೆ ಕೆಲವು ಆಭರಣಗಳನ್ನು ಲಾಕರಿನಲ್ಲಿಡಲು ಕೆಲ ದಿನಗಳ ಬಳಿಕ ಅವರು

ಬ್ಯಾಂಕ್ ಲಾಕರಿನಲ್ಲಿರಿಸಿದ್ದ ಚಿನ್ನಾಭರಣ ಮಾಯ: ದೂರು ದಾಖಲು Read More »

ಹದಿನೈದು ದಿನದ ಹಸುಗೂಸು ಅನುಮಾನಾಸ್ಪದ ಸಾವು: ತಂದೆಯೇ ‌ಕೊಲೆಗೈದಿರುವ ಸಂದೇಹ

ಬೆಳಗಾವಿ: ಹದಿನೈದು ದಿನಗಳ ಹೆಣ್ಣುಗೂಸು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಮಗುವಿನ ತಂದೆಯೇ ವಿಷವುಣಿಸಿ ಕೊಲೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಮಗುವನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಹೆರಿಗೆಯ ಬಳಿ ಶೀಲಾ ಅವರು ತವರು ಮನೆಯಲ್ಲಿದ್ದರು. ಈ ಸಂದರ್ಭದಲ್ಲಿ ಶೀಲಾ ಪತಿ ಭೀಮರಾಯ ಹೆಂಡತಿ ಮತ್ತು ಮಗುವನ್ನು ನೋಡಲು ಅಲ್ಲಿಗೆ ಆಗಮಿಸಿದ್ದಾನೆ. ಆತ ಬಂದು ಹೋದ ಕೆಲ ಹೊತ್ತಿನಲ್ಲೇ ಆರೋಗ್ಯವಾಗಿದ್ದ ಮಗು ಏಕಾಏಕಿ ಮೃತಪಟ್ಟಿದೆ. ಈ ಸಾವು ಮನೆಯವರನ್ನು ಬೆಚ್ಚಿ ಬೀಳಿಸಿದೆ. ಈ ವೇಳೆ

ಹದಿನೈದು ದಿನದ ಹಸುಗೂಸು ಅನುಮಾನಾಸ್ಪದ ಸಾವು: ತಂದೆಯೇ ‌ಕೊಲೆಗೈದಿರುವ ಸಂದೇಹ Read More »

ಕತ್ತು ಸೀಳಿ ಅಪ್ರಾಪ್ತ ಯುವತಿಯ ಹತ್ಯೆ

ಬೆಂಗಳೂರು: ಹದಿನೇಳು ವರ್ಷದ ಬಾಲಕಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸಕ್ಕರೆ ಮಂಡಿ ಸಮೀಪದ ಪಾಳು ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮುಂಜಾನೆ ಸುಮಾರು 6.30 ರ ಹೊತ್ತಿಗೆ ಹತ್ಯೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಬಾಲಕಿಯರ ರಕ್ತಸಿಕ್ತ ದೇಹ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಎಫ್‌ ಎಸ್‌ ಎಲ್‌ ತಂಡ ಸ್ಥಳಕ್ಕೆ ಬಂದು ಪರಿಶೀಲನೆ

ಕತ್ತು ಸೀಳಿ ಅಪ್ರಾಪ್ತ ಯುವತಿಯ ಹತ್ಯೆ Read More »

ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!

ಬಸ್‌ ಟಿಕೆಟ್‌ ದರ ಹೆಚ್ಚಾಗಿದೆ ಎಂದು ಕೊರಿಯರ್‌ ಮೂಲಕ ಕಳುಹಿಸುವ ಐಡಿಯಾ ಬೆಂಗಳೂರು: ರೀಲ್ಸ್‌ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್‌ ಮಾಡಲು ಬಂದ ಕೊರಿಯರ್‌ ಆಫೀಸ್‌ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್‌ನಲ್ಲಿರುವ ಕೊರಿಯರ್‌ ಆಫೀಸ್‌ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ

ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ! Read More »

ಅಡಿಕೆಯಲ್ಲಿಲ್ಲ ಹಾನಿಕಾರಕ ಅಂಶ : ಸರ್ಕಾರದ ಹೇಳಿಕೆ

ಅಡಿಕೆ ಹಾನಿಕಾರಕ ಅಲ್ಲ ಎಂದು ತಿಳಿಸಿದ ಸಂಶೋಧನಾ ಮಧ್ಯಂತರ ವರದಿ ಬೆಂಗಳೂರು: ಅಡಿಕೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವ ಅಪಾಯಕಾರಿ ಅಂಶ ಇಲ್ಲ ಎಂದು ಸರ್ಕಾರ ಹೇಳಿದೆ. ಈ ಕುರಿತು ಕಲಾಪದಲ್ಲಿ ಹೇಳಿಕೆ ನೀಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕವಾದ ಅಂಶಗಳು ಇಲ್ಲ ಎಂಬುದು ಸಂಶೋಧನಾ ಮಧ್ಯಂತರ ವರದಿಯಲ್ಲಿ ತಿಳಿದುಬಂದಿದೆ ಎಂದಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ, ಅಡಿಕೆ ಹಾನಿಕಾರಕವಲ್ಲ ಮತ್ತು ಅದರಿಂದ ಕ್ಯಾನ್ಸರ್‌ ಬರುವುದಿಲ್ಲ ಎಂಬುದನ್ನು ನಿರೂಪಿಸಲು ಸಂಶೋಧನೆಗಳು

ಅಡಿಕೆಯಲ್ಲಿಲ್ಲ ಹಾನಿಕಾರಕ ಅಂಶ : ಸರ್ಕಾರದ ಹೇಳಿಕೆ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸರ್ವ ಸಿದ್ಧತೆ

ಪರೀಕ್ಷೆ ಬರೆಯಲಿದ್ದಾರೆ 9 ಲಕ್ಷ ವಿದ್ಯಾರ್ಥಿಗಳು ಬೆಂಗಳೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ರಾಜ್ಯದಾದ್ಯಂತ ಆರಂಭವಾಗಲಿದೆ. ಶಿಕ್ಷಣ ಇಲಾಖೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಲ್ಲಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಜೆರಾಕ್ಸ್, ಸೈಬರ್/ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆಯನ್ನು

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸರ್ವ ಸಿದ್ಧತೆ Read More »

ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ತರಬೇತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂಬುದಾಗಿ ಸರ್ಕಾರದ ಗಮನಕ್ಕೆ ತಂದಿದ್ದರು. ಈ ಬಗ್ಗೆ

ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ Read More »

ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಮಗುವಿನ ರಕ್ಷಣೆ

ಕಾರವಾರ: ಆಟವಾಡುತ್ತಿದ್ದ ಎರಡು ವರ್ಷದ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಆ ಮಗುವನ್ನು ವ್ಯಕ್ತಿಯೊಬ್ಬ ರಕ್ಷಣೆ ಮಾಡಿದ ಘಟನೆ ಶಿರಸಿಯ ಕಸ್ತೂರ್ಬಾ ‌ನಗರದಲ್ಲಿ ನಡೆದಿದೆ. ಬಾವಿಗೆ ಬಿದ್ದ ಮಗುವನ್ನು ಭುವಿ(2) ಎಂದು ಗುರುತಿಸಲಾಗಿದೆ. ಮಗು ಮನೆಯಲ್ಲಿ ಕಾಣದೇ ಇದ್ದಾಗ ಗಾಬರಿಯಾದ ಅಜ್ಜಿ ಹುಡುಕಾಡಲು ಆರಂಭಿಸಿದ್ದಾರೆ. ಹುಡುಕುತ್ತಾ ಬಾವಿಯ ಹತ್ತಿರ ಹೋದಾಗ ಬಾವಿಯಿಂದ ಮಗು ಅಳುವ ಶಬ್ಧ ಕೇಳಿಸಿದೆ. ಇಣುಕಿದಾಗ ಮಗು ಬಾವಿಗೆ ಇಳಿಸಲಾಗಿದ್ದ ಪಂಪ್‌ನ ‌ಹಗ್ಗದಲ್ಲಿ ನೇತಾಡುತ್ತಾ ಅಳುವುದು ಕಂಡು ಬಂದಿದೆ. ತಕ್ಷಣವೇ ಸಮೀಪದ ಫಯಾಜ್ ಚೌಟಿ

ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಮಗುವಿನ ರಕ್ಷಣೆ Read More »

error: Content is protected !!
Scroll to Top