ರಾಜ್ಯ

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ

ಮಂಗಳೂರು : ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ. ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ […]

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ Read More »

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದೆ. ಈ ಕಟ್ಟಡದಲ್ಲಿ ನಂದಿನಿ ಐಸ್‌ ಕ್ರೀಂ ಉತ್ಪನ್ನಗಳನ್ನು ಇಡಲಾಗಿದೆ. ಇದರ ಜೊತೆ ಐಸ್‌ ಕ್ರೀಂ ತಯಾರಿಕಾ ಘಟಕಕ್ಕೂ ಬೆಂಕಿ ಹಬ್ಬಿದೆ. ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ Read More »

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ

ಕೋಲಾರದಿಂದಲೇ ಅನರ್ಹತೆಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್‌ ಪ್ಲಾನಿಂಗ್‌ ಕೋಲಾರ : ಕೋಲಾರದಲ್ಲಿ 2019ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಸಮುದಾಯದ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​ ಗಾಂಧಿ ಕೋಲಾರದಿಂದಲೇ ಪ್ರತ್ಯುತ್ತರ ನೀಡಲು ನಿರ್ಧರಿಸಿದ್ದಾರೆ. ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಕೋಲಾರಕ್ಕೆ ಆಗಮಿಸಲಿದ್ದಾರೆ. ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ Read More »

ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ

ಕಾಂತಾರ ಸಿನಿಮಾದ ಪ್ರಭಾವದಿಂದಲೇ ಇಷ್ಟೆಲ್ಲ ಅಪಸವ್ಯ ಅಗುತ್ತಿರುವುದು ಎಂದು ಆಕ್ರೋಶ ಮಂಗಳೂರು : ಕರಾವಳಿ ಹೊರತುಪಡಿಸಿ ಬೇರೆ ಎಲ್ಲೂ ದೈವಾರಾಧನೆಯ ಸಂಪ್ರದಾಯವಿಲ್ಲ. ಆದರೆ ಕಾಂತಾರ ಸಿನೆಮಾದ ಪ್ರಭಾವದಿಂದಾಗಿ ವಿವಿಧೆಡೆಯಲ್ಲಿ ದೈವರಾಧನೆ ಅಥವಾ ಅದನ್ನು ಹೋಲುವಂಥ ಆರಾಧನೆ ಮಾಡಿ ಜನರಿಗೆ ಮಂಕುಬುದ್ದಿ ಎರಚಲು ಯತ್ನಿಸುತ್ತಿರುವ ಘಟನೆಗಳು ಸಂಭವಿಸುತ್ತಿದ್ದು, ಇದನ್ನು ತುಳುನಾಡಿನವರು ಬಲವಾಗಿ ವಿರೋಧಿಸುತ್ತಿದ್ದಾರೆ.‘ಕಾಂತಾರ’ ಸಿನಿಮಾ ಬಿಡುಗಡೆ ಆದ ನಂತರ ಬಹಳಷ್ಟು ಜನರಿಗೆ ಕರಾವಳಿ ಸಂಸ್ಕೃತಿ, ಪಂಜುರ್ಲಿ ದೈವದ ಪರಿಚಯ ಆಯ್ತು. ಆದರೆ ಕೆಲವೆಡೆ ಇದಕ್ಕೆ ತದ್ವಿರುದ್ಧವಾಗಿ ಪಂಜುರ್ಲಿ ದೈವದ

ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ

ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮಾ.27 ರಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಯನ್ನು ಜಪ್ತಿ ಮಾಡಿದೆ. ಸುಳ್ಯ ತಾಲೂಕು ಗಾಂಧಿನಗರ ಅಲೆಟ್ಟಿ ರಸ್ತೆ, ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ.ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ Read More »

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಇಂದು ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ Read More »

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು

ಮಂಗಳೂರು : ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾ.27 ರಂದು ಪೊಲೀಸರು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ ತಲೆಮರೆಸಿಕೊಂಡಿದ್ದ. ಇನ್ನು

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು Read More »

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

ಮಂಗಳೂರು : ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ

ಡಿ.ಕೆ.ಬ್ರದರ್ಸ್‌ ಹೇಳಿಕೆಗೆ ತಿರುಗೇಟು ಬೆಂಗಳೂರು : ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್‌ನಲ್ಲಿ ಬಾಂಬ್‌ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್‌ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು,

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ Read More »

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಬೇಕು ಎಂದು ಪ್ರತಿಪಾದನೆ ಬೆಂಗಳೂರು : ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರನ್ನು ಒಲೈಸಿಕೊಳ್ಳುವ ಪ್ರಯತ್ನದಲ್ಲಿ ಒಬಿಸಿ ಕೋಟಾದಡಿಯಲ್ಲಿ ಶೇಕಡಾ 4 ರಷ್ಟು ಮೀಸಲಾತಿ ಪಡೆಯುತ್ತಿದ್ದ ಮುಸ್ಲಿಮರ ಮೀಸಲಾತಿ ರದ್ದುಗೊಳಿದ್ದಾರೆ. ಅದನ್ನು

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ Read More »

error: Content is protected !!
Scroll to Top