ರಾಜ್ಯ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ […]

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ

ಕೊಚ್ಚಿ: ಇಲ್ಲಿನ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತರಬೇತಿ ನಿರತವಾಗಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.55ಕ್ಕೆ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗುತ್ತಿದ್ದಂತೆ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ ಪ್ರಾಥಮಿಕ ವರದಿಗಳ ಪ್ರಕಾರ, ಒಬ್ಬ ವ್ಯಕ್ತಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.ಈಮಧ್ಯೆ, ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ Read More »

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್ Read More »

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಬಿ ಸಿ ಚಂದ್ರಶೇಖರ್‌ ಅವರು ಐಪಿಸಿ ಸೆಕ್ಷನ್‌ 500ರ ಅಡಿ ಕ್ರಿಮಿನಲ್‌

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ

ಮಗನಿಂದ ಕ್ಷೇತ್ರ ಕಸಿದುಕೊಂಡ ಅಪವಾದದಿಂದ ಪಾರಾಗಲು ತಂತ್ರ ಬೆಂಗಳೂರು : ಈಗಾಗಲೇ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಪಡೆದುಕೊಂಡಿರುವ ಸಿದ್ದರಾಮಯ್ಯ ಇದೀಗ ಇನ್ನೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರು ಈ ಹಿಂದೆ 2008 ಮತ್ತು 2013ರಲ್ಲಿ ವರುಣಾದಿಂದ ಎರಡು ಬಾರಿ ಗೆದ್ದಿದ್ದರು ಮತ್ತು 2013ರಲ್ಲಿ ಇಲ್ಲಿಂದ ಗೆದ್ದು ಮುಖ್ಯಮಂತ್ರಿಯಾಗಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದು ತನ್ನ ಪಾಲಿಗೆ ಲಕ್ಕಿ ಕ್ಷೇತ್ರ ಎಂದು ಸಿದ್ದರಾಮಯ್ಯ ಪರಿಗಣಿಸಿದ್ದಾರೆ. ಅದರೆ ಮಗನ

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ Read More »

error: Content is protected !!
Scroll to Top