ರಾಜ್ಯ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ […]

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್ Read More »

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಬಿ ಸಿ ಚಂದ್ರಶೇಖರ್‌ ಅವರು ಐಪಿಸಿ ಸೆಕ್ಷನ್‌ 500ರ ಅಡಿ ಕ್ರಿಮಿನಲ್‌

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ

ಮಗನಿಂದ ಕ್ಷೇತ್ರ ಕಸಿದುಕೊಂಡ ಅಪವಾದದಿಂದ ಪಾರಾಗಲು ತಂತ್ರ ಬೆಂಗಳೂರು : ಈಗಾಗಲೇ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಪಡೆದುಕೊಂಡಿರುವ ಸಿದ್ದರಾಮಯ್ಯ ಇದೀಗ ಇನ್ನೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರು ಈ ಹಿಂದೆ 2008 ಮತ್ತು 2013ರಲ್ಲಿ ವರುಣಾದಿಂದ ಎರಡು ಬಾರಿ ಗೆದ್ದಿದ್ದರು ಮತ್ತು 2013ರಲ್ಲಿ ಇಲ್ಲಿಂದ ಗೆದ್ದು ಮುಖ್ಯಮಂತ್ರಿಯಾಗಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದು ತನ್ನ ಪಾಲಿಗೆ ಲಕ್ಕಿ ಕ್ಷೇತ್ರ ಎಂದು ಸಿದ್ದರಾಮಯ್ಯ ಪರಿಗಣಿಸಿದ್ದಾರೆ. ಅದರೆ ಮಗನ

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ Read More »

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.ಮಾರ್ಚ್ 25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಅವರು ಶನಿವಾರ ಮಾತನಾಡಿದರು.ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ,

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ. ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೃತ ಕಾರ್ಮಿಕ ದಂಪತಿ ಗದಗ ಜಿಲ್ಲೆಯ ಮುಂಡರಗಿ ನಿವಾಸಿಗಳಾದ ಸೋಮಶೇಖರ ರೆಡ್ಡಿ (45) ಮತ್ತು ಶಾಂತ (40) ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಜೆಸಿಬಿ ಮೂಲಕ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ Read More »

ಪಂಚಮಸಾಲಿ ಹೋರಾಟದಲ್ಲಿ ಒಡಕು: ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ

ಒಪ್ಪದ ವಿಜಯಾನಂದ ಕಾಶಪ್ಪನವರ್’ನಿಂದ ರಾಜೀನಾಮೆ ಸಲ್ಲಿಕೆ ಬೆಂಗಳೂರು: ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ. ಆದರೆ, ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ವಿಜಯಾನಂದ ಕಾಶಪ್ಪನವರ್ ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರ್ಕಾರ ನಿನ್ನೆ ಮೀಸಲಾತಿ ಪ್ರಕಟಿಸಿದ ಹಿನ್ನಲೆಯಲ್ಲಿ ಇಂದು ಫ್ರೀಡಂ ಪಾರ್ಕ್‍ನಲ್ಲಿ ಪಂಚಮಸಾಲಿ ಮುಖಂಡರು ಹಾಗೂ

ಪಂಚಮಸಾಲಿ ಹೋರಾಟದಲ್ಲಿ ಒಡಕು: ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ Read More »

ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು, ನೂತನವಾಗಿ ನಿರ್ಮಿಸಲಾಗಿರುವ ಕೆಆರ್ ಪುರಂ- ಬೈಯ್ಯಪ್ಪನ ಹಳ್ಳಿ ಮೆಟ್ರೋ ರೈಲು ಮಾರ್ಗವನ್ನು (ಮಾ.25 ) ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಇದು ಪ್ರಮುಖವಾದ ಮೆಟ್ರೋ ಮಾರ್ಗವಾಗಿದ್ದು, ಈ ಮಾರ್ಗದಿಂದ 10 ಲಕ್ಷ ಜನರಿಗೆ ಸಹಾಯವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಮೆಟ್ರೋ ಉದ್ಘಾಟಿಸಿದ ನಂತರ ಅವರು ಮೆಟ್ರೋದಲ್ಲಿ ಸುಮಾರು 5 ಕಿ.ಮೀ.ವರೆಗೆ ಪ್ರಯಾಣಿಸಿದರು. ಆ ಸಂದರ್ಭದಲ್ಲಿ ಅವರು ರೈಲಿನಲ್ಲಿದ್ದ ಮೆಟ್ರೋ ರೈಲು ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ

ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಬೆಂಗಳೂರು: ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಮೋದಿಯವರು ಮಾತನಾಡಿದರು.ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿಯವರು, ಕನ್ನಡ ಭಾಷೆ

ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ Read More »

error: Content is protected !!
Scroll to Top