ರಾಜ್ಯ

ಬೈಕ್‌ಗಳ ನಡುವೆ ಭೀಕರ ಅಪಘಾತ: ಯುವಕ ಮೃತ್ಯು

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಎರಡು ಬೈಕುಗಳ ‌ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ‌ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದ ಶಂಭೂರು ನಿವಾಸಿ ರಕ್ಷಿತ್ ‌ಶೆಟ್ಟಿ(43) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಕ್ಷಿತ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉತ್ತಮ ವಿಡಿಯೋಗ್ರಾಫರ್ ಆಗಿದ್ದ ಅವರು ಬಂಟ್ವಾಳ ವಲಯ ಛಾಯಾಗ್ರಾಹಕ ಸಂಘದ ಸಕ್ರಿಯ ಸದಸ್ಯರಾಗಿದ್ದರು. ಅವರ ಮನೆಯಲ್ಲಿ ತಮ್ಮ ಮಗಳ 10 ನೇ ಹುಟ್ಟುಹಬ್ಬಕ್ಕೆ ‌ಸಿದ್ಧತೆ ಸಹ ನಡೆಸಿದ್ದರು. […]

ಬೈಕ್‌ಗಳ ನಡುವೆ ಭೀಕರ ಅಪಘಾತ: ಯುವಕ ಮೃತ್ಯು Read More »

ಗೆಳತಿಯನ್ನು ಕೊಲೆಗೈದ ಲಿವ್ ಇನ್ ಟುಗೆದರ್ ಪಾರ್ಟ್ನರ್

ಬೆಂಗಳೂರು: ಲಿವ್ ಇನ್ ಟುಗೆದರ್‌ನಲ್ಲಿದ್ದ ಗೆಳತಿಯನ್ನು ವೈರ್ ಬಳಸಿ ಕತ್ತು ಬಿಗಿದು ಹತ್ಯೆ ಮಾಡಿದ ಘಟನೆ ವರ್ತೂರಿನಲ್ಲಿ ನಡೆದಿದೆ. ಮೃತಳನ್ನು ‌ಕೊಡಗು ಮೂಲದ ರಂಜಿತಾ ಎಂದು ಗುರುತಿಸಲಾಗಿದೆ.‌ ಅಯ್ಯಪ್ಪ ಎಂಬವನೇ ಕೊಲೆ ಮಾಡಿರುವ ಆರೋಪಿ. ಆರೋಪಿ ಮತ್ತು ಕೊಲೆಯಾದ ರಂಜಿತಾ ಲಿವಿನ್ ಟುಗೆದರ್ ಸಂಬಂಧದಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಆರೋಪಿ ಅಯ್ಯಪ್ಪ‌ನಿಗೆ ಈ ಮೊದಲೇ ವಿವಾಹವಾಗಿದ್ದು, ಈ ಸಂಗತಿ ರಂಜಿತಾ‌ಗೆ ಗೊತ್ತಿರಲಿಲ್ಲ. ಆದರೆ ಸತ್ಯ ಗೊತ್ತಾದ ಬಳಿಕ ಇವರಿಬ್ಬರ ನಡುವೆ ಜಗಳ ನಡೆದಿತ್ತು. ಗಲಾಟೆ ತಾರಕಕ್ಕೇರಿದಾಗ

ಗೆಳತಿಯನ್ನು ಕೊಲೆಗೈದ ಲಿವ್ ಇನ್ ಟುಗೆದರ್ ಪಾರ್ಟ್ನರ್ Read More »

ಮಗನ ಸಾವಿನ ನೋವಿನಲ್ಲಿ ‌ದಂಪತಿ ಆತ್ಮಹತ್ಯೆ

ಪೊಯಿನಾಚಿ: ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮೇಲ್ಪರಂಬ ಠಾಣಾ ‌ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಪೊಯಿನಾಚಿ ಪರಂಬದ ‌ವೇಣುಗೋಪಾಲನ್(55) ಮತ್ತು ಅವರ ಹೆಂಡತಿ ಸ್ಮಿತಾ(45) ಎಂದು ಗುರುತಿಸಲಾಗಿದೆ. ದಂಪತಿಯ ಪುತ್ರ ಶಿವಾನಂದ್(19) ಎಂಬಾತ ಕಳೆದ ಡಿ. 29 ರಂದು ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದರು. ಆ ಬಳಿಕ ದಂಪತಿ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಎಷ್ಟೇ ಹೊತ್ತಾದರೂ ವೇಣುಗೋಪಾಲನ್ ಅವರ ಮನೆಯ ಬಾಗಿಲು ತೆರೆಯದೇ ಇದ್ದು, ಸಂದೇಹದಿಂದ ನೆರೆಹೊರೆಯವರು ಇಣುಕಿ ನೋಡಿದ್ದು,

ಮಗನ ಸಾವಿನ ನೋವಿನಲ್ಲಿ ‌ದಂಪತಿ ಆತ್ಮಹತ್ಯೆ Read More »

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು

ಬಂಟ್ವಾಳ: ವಂಚನೆ, ನಕಲಿ ದಾಖಲೆ ಸೃಷ್ಟಿ ಸೇರಿದಂತೆ ಇನ್ನೂ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದಿದ್ದಾರೆ. ಕೇರಳದ ಎರ್ನಾಕುಲಂ‌ನ ಕುಟ್ಟಿಂಚಾಲ್ ತರಂಪಳ್ಳಿ ನಿವಾಸಿ ಪ್ರಿನ್ಸ್ ಟಿ. ಜೆ. ಜೋಶ್ ಬಂಧಿತ ಆರೋಪಿ‌‌. ಈತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ.90/2016ರಲ್ಲಿ ಐಪಿಸಿ ៩០ 465, 468, 471, 420, 379 8 3408 ದಾಖಲಾಗಿದ್ದು, ನಂತರ ನ್ಯಾಯಾಲಯದಲ್ಲಿ 2.2. ನಂ.1060/2019

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು Read More »

ಕೊನೆಗೂ ಸೆರೆಯಾಯ್ತು ನರಹಂತಕ ಕಾಡಾನೆ

ಮಡಿಕೇರಿ: ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ 34 ವರ್ಷದ ನರಹಂತಕ ಕಾಡಾನೆಯನ್ನು ಪಾಲಿಬೆಟ್ಟ ‌ಸಮೀಪದ ಚೆನ್ನಯ್ಯನಕೋಟೆಯ ಬಾಡಗ ಬಾಣಂಗಾಲ ಎಂಬಲ್ಲಿಯ ಕಾಫಿ ತೋಟದಲ್ಲಿ ಸೆರೆ ಹಿಡಿಯಲಾಗಿದೆ. ಈ ಆನೆ ಹಾಡುಹಗಲೇ ಕಾಫಿ ಬೆಳೆಗಾರರೊಬ್ಬರನ್ನು ಬಲಿ ಪಡೆದಿತ್ತು. ನರಹಂತಕ ಆನೆಯ ಸೆರೆಗೆ ಅರಣ್ಯ ಇಲಾಖೆಯು ಸಾಕಾನೆಗಳಾದ ಕಂಜನ್, ಸುಗ್ರೀವ, ಧನಂಜಯ, ಪ್ರಶಾಂತ್, ಹರ್ಷ, ಅಯ್ಯಪ್ಪನನ್ನು ಬಳಕೆ ಮಾಡಿಕೊಂಡಿದ್ದರು. ಪಶುವೈದ್ಯರು ಕಾಡಾನೆಗೆ ಅರಿವಳಿಕೆ ಔಷಧ ನೀಡಿದ್ದು, ಬಳಿಕ ಸಾಕಾನೆಗಳು ಕಾಡಾನೆಯನ್ನು ಸುತ್ತುವರಿದು ಯಶಸ್ವಿಯಾಗಿ ಬಂಧಿಸಲಾಗಿದೆ.

ಕೊನೆಗೂ ಸೆರೆಯಾಯ್ತು ನರಹಂತಕ ಕಾಡಾನೆ Read More »

SSLC ಪರೀಕ್ಷಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಬೆಂಗಳೂರು: ಮಾ. 18 ರಿಂದ ರಾಜ್ಯದಲ್ಲಿ ಹತ್ತನೇ ತರಗತಿ ಪರೀಕ್ಷೆ ಆರಂಭವಾಗಲಿದ್ದು, ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 88 2025-26 2 ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ

SSLC ಪರೀಕ್ಷಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ Read More »

ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ: ಕಾರು ಪಲ್ಟಿಯಾದ ಪರಿಣಾಮ ಈರ್ವರು ಸ್ಥಳದಲ್ಲೇ ಮೃತಪಟ್ಚ ಘಟನೆ ಬಸವನ ಬಾಗೇವಾಡಿ ತಾಳೀಕೋಟೆಯ ‌ಬಸವನಹಟ್ಟಿ ಕ್ರಾಸ್ ಬಳಿ ನಡೆದಿದೆ. ಬೆಳಗಾವಿಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಮತ್ತು ಕಾಮಪ್ಪ ಅವರಾದಿ (65) ಎಂಬವರೇ ‌ಮೃತ ದುರ್ದೈವಿಗಳು. ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಶ್ರೀಶೈಲಕ್ಕೆ ಹೋಗುತ್ತಿದ್ದು, ಈ ವೇಳೆ ದುರಂತ ಸಂಭವಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಬಸವನಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು Read More »

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

ಶಿರ್ವ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಂಕರಪುರದ ಸಾಲ್ಮರದ ಕ್ಯಾಟರಿಂಗ್ ಶೆಡ್ ಸಮೀಪ ನಡೆದಿದೆ. ಮೃತನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಕ್ಯಾಟರಿಂಗ್ ಶೆಡ್ ಬಳಿಯ ರೂಮ್‌ನಲ್ಲಿ ಗೌತಮ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾದಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಆದರೂ ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಗೌತಮ್ ಬೈಂದೂರು ಮೂಲದವರಾಗಿದ್ದು, ಅವಿವಾಹಿತರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ವಿವಿಧ

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು Read More »

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉಪ್ಪಳದ ಶೇಖ್ ಅರ್ಜಾಬ್ ಮತ್ತು ಕೊಡಿಬೈಲ್ ಬಾಬಾ ರಸ್ತೆ ನಿವಾಸಿ ರಶೀದ್ ಅಲ್ವಿನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪ ಡ್ರಗ್ಸ್ ಮಾರಾಟ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಗಾಂಜಾ, ನಗದು, ಮೊಬೈಲ್ ಫೋನ್, ಗಾಂಜಾ ಪ್ಯಾಕಿಂಗ್ ಚೀಲಗಳು ಸೇರಿದಂತೆ ಇನ್ನೂ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ದಾಳಿಯ ವೇಳೆ ಮತ್ತೊಬ್ಬ ಆರೋಪಿ ಅಲ್ತಾಫ್ ಪರಾರಿಯಾಗಿದ್ದಾನೆ. ಆತನಿಗಾಗಿ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ Read More »

ಜೈಲಿಗೆ ವಾರ್ಡನ್‌ನಿಂದಲೇ ಡ್ರಗ್ಸ್‌ ಪೂರೈಕೆ

ಮತ್ತೊಮ್ಮೆ ಪರಪ್ಪನ ಅಗ್ರಹಾರ ಕರ್ಮಕಾಂಡ ಬಯಲು ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಮಾರ್ಚ್ 9ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ–2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವನನ್ನು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವನ ಒಳ ಉಡುಪಿನಲ್ಲಿ ಹಣ

ಜೈಲಿಗೆ ವಾರ್ಡನ್‌ನಿಂದಲೇ ಡ್ರಗ್ಸ್‌ ಪೂರೈಕೆ Read More »

error: Content is protected !!
Scroll to Top