ರಾಜ್ಯ

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ನೆಲೆಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೀವ ಮಠಂದೂರು ಅಭಿಮಾನಿ ಬಳಗದ ವತಿಯಿಂದ ‘ಬನ್ನಿ, ರಾಜಧಾನಿಯಲ್ಲಿ ನಾವೆಲ್ಲರೂ ಸೇರಿ ಒಗ್ಗಟ್ಟಾಗೋಣ’ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ Read More »

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ವಿಶ್ವಸಂಸ್ಥೆಯಲ್ಲಿ ಯಾವುದೇ ಭಾಷೆಯಲ್ಲಿ ಭಾಷಣ ಮಾಡುವ ಅವಕಾಶವಿದೆ. ವಿಶ್ವಸಂಸ್ಥೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ರಿಷಬ್ ಪರಿಸರ ಸಂರಕ್ಷಣೆ ವಿಷಯದಲ್ಲಿ ಭಾಷಣ ಮಾಡಲು ತಯಾರಿ ನಡೆಸಿಕೊಂಡು ಹೋಗಿದ್ದರು. ಅಲ್ಲಿ ಕನ್ನಡದಲ್ಲಿ ರಿಷಬ್ ಶೆಟ್ಟಿ ಭಾಷಣ ಆರಂಭಿಸಿದ್ದರು. ತಾಂತ್ರಿಕ ಸಮಸ್ಯೆಯಿಂದಾಗಿ ಇಂಗ್ಲಿಷ್ ಅಥವಾ ಬೇರೆ ಭಾಷೆಗಳಿಗೆ ಅನುವಾದ ಪ್ರಸಾರ ಆಗದ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು Read More »

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬೆಳಗಾವಿ: ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬೆಳಗಾವಿ ಶಾಸಕ ಅಭಯ ಪಾಟೀಲ ಅವರು ಇಲ್ಲಿನ ಶಿವಾಜಿ ಗಾರ್ಡನ್‌ನಲ್ಲಿ ‘ಶಿವಚರಿತ್ರೆ’ ಶೀರ್ಷಿಕೆಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಮದರಸಾ ಶಿಕ್ಷಣಕ್ಕೆ ಬ್ರೇಕ್‌ ಹಾಕಲು ಅಸ್ಸಾಂ ಸರ್ಕಾರ ಮುಂದಾಗಿದೆ ಎಂದು ಹೇಳಿದರು. ನಮ್ಮ ಸರ್ಕಾರವು ಈಗಾಗಲೇ ಅಸ್ಸಾಂನಲ್ಲಿ 600 ಮದರಸಾಗಳನ್ನು ಮುಚ್ಚಿದೆ. ಶೀಘ್ರದಲ್ಲೇ ಉಳಿದ ಮದರಸಾಗಳನ್ನೂ ಮುಚ್ಚುವ

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ Read More »

ಶೇ.15 ವೇತನ ಹೆಚ್ಚಳವನ್ನು ತಿರಸ್ಕರಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು : ವೇತನವನ್ನು ಶೇ.15ರಷ್ಟು ಹೆಚ್ಚು ಮಾಡುವ ಮುಖ್ಯಮಂತ್ರಿಗಳ ಕೊಡುಗೆಯನ್ನು ತಿರಸ್ಕರಿಸಿರುವ ಸಾರಿಗೆ ನೌಕರರ ಸಂಘ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ. ನಿಗದಿಯಂತೆ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಎಚ್‌.ವಿ.ಅನಂತ ಸುಬ್ಬರಾವ್‌ ಸ್ಪಷ್ಟಪಡಿಸಿದ್ದಾರೆ.ಸಾರಿಗೆ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕೂ ನಿಗಮಗಳ

ಶೇ.15 ವೇತನ ಹೆಚ್ಚಳವನ್ನು ತಿರಸ್ಕರಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ

ಬೆಂಗಳೂರು: ಬೆಂಗಳೂರಿಗೆ ಬೇಸಿಗೆಯ ಮೊದಲ ಮಳೆಯ ಸ್ಪರ್ಶವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆಯಿಂದಲೇ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.ಸಂಜೆಯ ವೇಳೆಗೆ ಗಾಳಿಯಿಂದಾಗಿ ಮೋಡಗಳು ನಗರ ಪ್ರದೇಶದಿಂದ ಸ್ವಲ್ಪ ದೂರಕ್ಕೆ

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ

ಮಡಿದವರಲ್ಲಿ ಐವರು ಮಹಿಳೆಯರು ಹೈದರಾಬಾದ್‌ : ಹೈದರಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರ ಸಹಿತ ಆರು ಮಂದಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 7.30ರ ವೇಳೆಗೆ ಸ್ವಪ್ನಲೋಕ್‌ ಕಾಂಪ್ಲೆಕ್ಸ್‌ ಎಂಬ ವಾಣಿಜ್ಯ ಸಂಕೀರ್ಣದ 5ನೆ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಕಟ್ಟಡದ ಒಳಗೆ 13 ಮಂದಿ ಸಿಕ್ಕಿಬಿದ್ದಿದ್ದರು. ಏಳು ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ದಟ್ಟ ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ Read More »

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ 865 ಗಡಿ ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಕ್ಷಮಿಸಲಾರದ ಅಪರಾಧವಾಗಿದ್ದು, ಈ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ಸಲ್ಲಿಸಲಾಗುವುದು ಎಂದಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದಾಗ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿ ಸಭೆ ಕರೆದು, ಸುಪ್ರೀಂಕೋರ್ಟ್ ಆದೇಶ ನೀಡುವವರೆಗೂ ಗಡಿ ವಿಚಾರ ಕುರಿತಂತೆಯೂ ಯಾರೊಬ್ಬರೂ

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ Read More »

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ

ಶಿವಮೊಗ್ಗ : ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ಟೀಕೆ ಮಾಡುವವರು ಯಾರು? ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ Read More »

ಅರುಣಾಚಲ ಪ್ರದೇಶ: ಸೇನಾ ಹೆಲಿಕಾಪ್ಟರ್ ಪತನ

ಪೈಲಟ್‌ಗಳಿಗಾಗಿ ಶೋಧ ಕಾರ್ಯ ಅರುಣಾಚಲ ಪ್ರದೇಶ : ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ಮಾ. 16ರ ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್‌ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ಎಟಿಸಿಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. 2022ರಲ್ಲಿ ತವಾಂಗ್‌ನಲ್ಲಿ ಹೆಲಿಕಾಪ್ಟರ್ ಒಂದು

ಅರುಣಾಚಲ ಪ್ರದೇಶ: ಸೇನಾ ಹೆಲಿಕಾಪ್ಟರ್ ಪತನ Read More »

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್

ಮಂಗಳೂರು : ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ನಿರ್ದೇಶನದ ಯಶಸ್ವಿ ತುಳು ನಾಟಕ ಶಿವದೂತೆ ಗುಳಿಗೆ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ ಎನ್ನಲಾಗಿರುವ ವ್ಯಂಗ್ಯ ಮಾತೊಂದು ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ತುಳುವರ ಗುಳಿಗ ದೈವಕ್ಕೆ ಅಪಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರಗ ಜ್ಞಾನೇಂದ್ರ ಅವರ ವ್ಯಂಗ್ಯ ಭಾಷಣದ ತುಣುಕನ್ನು ವೈರಲ್‌ಮಾಡಲಾಗಿದೆ. ಮಾ.14ರಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಶಿವದೂತೆ ಗುಳಿಗೆ ನಾಟಕ ಆಯೋಜಿಸಿದ್ದರು. ಈ ನಾಟಕ ಪ್ರದರ್ಶನ ಕುರಿತು ಎಲ್ಲೆಡೆ ಪೋಸ್ಟರ್‌ ಅಂಟಿಸಲಾಗಿತ್ತು. ಈ ಬಗ್ಗೆ

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್ Read More »

error: Content is protected !!
Scroll to Top