ರಾಜ್ಯ

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾ.20ರಂದು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾ.16ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ […]

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ Read More »

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

ಬೆಂಗಳೂರು : ಮೊದಲ ಸಲ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ–2022 ಅತ್ಯುತ್ತಮ ಸಂಸದ ಪ್ರಶಸ್ತಿಗೆ (ಮೊದಲ ಸಲ ಸಂಸದರಾದವರಿಗೆ ನೀಡುವ ಪ್ರಶಸ್ತಿ) ಭಾಜನರಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ತೇಜಸ್ವಿ ಸೂರ್ಯ ಸ್ವೀಕರಿಸಿದ್ದಾರೆ. 17ನೇ ಲೋಕಸಭೆಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಅವರು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ Read More »

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ

ಬೆಂಗಳೂರು: ಎಲ್ಲ ಶಾಸಕರಿಗೆ ಟಿಕೆಟ್‌ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ನಾಯಕ ಯಡಿಯೂರಪ್ಪ ಖಡಕ್‌ ಅಗಿ ಹೇಳಿದ ಬಳಿಕ ಬಿಜೆಪಿಯ ಹಲವು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ ಎದುರಾಗಿದೆ. ಕರಾವಳಿಯಲ್ಲೂ ಕೆಲವು ಶಾಸಕರಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿಲ್ಲ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತಿದೆ.ಬಿಜೆಪಿ ಕರ್ನಾಟಕದಲ್ಲೂ ಉತ್ತರ ಪ್ರದೇಶ ಮತ್ತು ಗುಜರಾತ್‌ ಮಾದರಿಯ ಪ್ರಯೋಗಕ್ಕೆ ಮುಂದಾದರೆ ಹಾಲಿ ಇರುವ ಹಲವು ಶಾಸಕರು ಟಿಕೆಟ್‌ ಕಳೆದುಕೊಳ್ಳುವುದು ಖಚಿತ. ಉತ್ತರ ಪ್ರದೇಶ ಮತ್ತು ಗುಜರಾತಿನಲ್ಲಿ ನಿಷ್ಕ್ರಿಯ, ಹಿರಿಯ ಮತ್ತು

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ Read More »

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು, ಬಿಜೆಪಿ ಮಾತ್ರವಲ್ಲ ಪ್ರಧಾನಿ ಮೇಲೂ ವಾಗ್ದಾಳಿ ನಡೆಸುತ್ತಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಪ್ರಧಾನಿ ಅವರನ್ನು ಸ್ವಾಗತಿಸಲು ರೌಡಿ ಶೀಟರ್‌ಗೆ ಅವಕಾಶ ನೀಡಿದ್ದಕ್ಕಾಗಿ ಕರ್ನಾಟಕ ಕಾಂಗ್ರೆಸ್

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ, ಈ ಕುರಿತು ಆತಂಕಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಚುನಾವಣೆ ವೇಳೆ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಇಧರಿಂದ ಪರೀಕ್ಷೆಗಳಿಗೆ ಸಮಸ್ಯೆಗಳಾಗುತ್ತವೆ ಎಂಬ ಆತಂಕಗಳು ಶುರುವಾಗಿದೆ.ಡಿಸೆಂಬರ್ 2022 ರಲ್ಲಿ ಕೊನೆಯ ಬಾರಿಗೆ ಬೂತ್ ಮಟ್ಟದ ಅಧಿಕಾರಿಗಳಂತೆ 60,000 ಶಿಕ್ಷಕರನ್ನು ಚುನಾವಣಾ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ Read More »

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಮಾ. 13 ರ ರಾತ್ರಿ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಎರಡು ತಿಂಗಳಲ್ಲಿ ಪತ್ತೆಯಾದ ಈ ಮಾದರಿಯ ಮೂರನೇ ಪ್ರಕರಣ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರನ್ನು ಹತ್ತ್ಯೆ ಮಾಡುವ ಸೀರಿಯಲ್‌ ಕಿಲ್ಲರ್‌ ಇದ್ದಾನೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಬಳಿ ಡ್ರಮ್‌ ಹಾಗೂ ಚೀಲಗಳಲ್ಲಿ ಮಹಿಳೆಯರ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ

ಜನಸಾಮಾನ್ಯರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟನೆ ಮಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಜಾನ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಸಾಮಾನ್ಯ ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಜಾನ್ ಕೇಳಿದಾಗ ತೊಂದರೆಯಾಗುತ್ತದೆ. ಯಾವುದೇ ಧರ್ಮವನ್ನು ಖಂಡಿಸುವ ಉದ್ದೇಶವಿಲ್ಲ. ಆದರೆ ಯಾರಾದರೂ ಸಾಮಾನ್ಯ ಜನರ ಭಾವನೆಗಳಿಗೆ ಧ್ವನಿ ನೀಡಬೇಕು. ಇದು ಧರ್ಮವನ್ನು ಖಂಡಿಸುವುದಲ್ಲ ಎಂದು ಹೇಳಿದ್ದಾರೆ.ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಸಮಾವೇಶದ ವೇಳೆ ಆಝಾನ್‌ ಮೊಳಗಿದಾಗ

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ Read More »

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ

ಮಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆ ಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಶನಿವಾರ ಸಂಜೆ ವೇಳೆ ಕಂಕನಾಡಿ ರೈಲ್ವೆ ಸ್ಟೇಷನ್‌ನ ಅಳಪೆ ಪರಿಸರದಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಪಾಣೆಮಂಗಳೂರಿನ ಅಬ್ದುಲ್ ಸಾಧಿಕ್ (35), ಮತ್ತು

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ Read More »

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ

ಬೆಂಗಳೂರು : ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (PPP) ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ ರಾಜ್ಯದಲ್ಲಿ 11 ಮೆಡಿಕಲ್​ ಕಾಲೇಜುಸ್ಥಾಪನೆಗೆ ಸರಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಉಡುಪಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರದಲ್ಲಿ ಪ್ರಾರಂಭವಾಗಲಿವೆ. ರಾಜ್ಯ ಸರ್ಕಾರ ಈಗಾಗಲೆ ಎರಡು ವೈದ್ಯಕೀಯ ಕಾಲೇಜುಗಳಿಗಾಗಿ ನಿವೇಶನ ಹಂಚಿಕೆ ಮತ್ತು ಇತರ ಪ್ರಕ್ರಿಯೆಗಳನ್ನು ಮುಗಿಸಿದೆ. ಈ ಎರಡು ವೈದ್ಯಕೀಯ ಕಾಲೇಜುಗಳು 2024-25ರ ವೇಳೆಗೆ ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆಯಲ್ಲಿ

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ Read More »

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ನನ್ನ ಮೇಲೆ ಐಟಿ, ಇ.ಡಿ. ದಾಳಿ ನಡೆಯಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾರಣ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಡಿಕೆಶಿ, ದೇವೇಗೌಡ ಮತ್ತು ಕುಮಾರಸ್ವಾಮಿ ಹಣ, ಆಸ್ತಿ ಮಾಡಿಲ್ವಾ? ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಇವೆಲ್ಲಾ ಅವರಿಗೆ ನೆನಪಾಗುತ್ತಿಲ್ಲ. ಧರ್ಮಸಿಂಗ್‌ ಮುಖ್ಯಮಂತ್ರಿ ಆಗಿದ್ದಾಗ ನನ್ನನ್ನು ಸಂಪುಟದಿಂದ ಹೊರಗಿಡಲು ಜೆಡಿಎಸ್‌ ವರಿಷ್ಠರೇ ಕಾರಣ. ದೇವೇಗೌಡರು ಪ್ರಧಾನಿಯಾದ ವೇಳೆ ಜೆಡಿಎಸ್‌ ಪಕ್ಷದಿಂದ

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ Read More »

error: Content is protected !!
Scroll to Top