ರಾಜ್ಯ

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು

ನನಗೆ ಸಹೋದರಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ ಜೋಶಿ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಜೋಶಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ […]

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು Read More »

ಮುಡಾದ ಪ್ರಮುಖ ದಾಖಲೆಪತ್ರಗಳೇ ನಾಪತ್ತೆ

ಇ.ಡಿ. ಪರಿಶೀಲನೆ ವೇಳೆ ಭೂ ದಾಖಲೆಗಳು ನಾಪತ್ತೆಯಾಗಿರುವುದು ಬಯಲು ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಯೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಬಹುಕೋಟಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ

ಮುಡಾದ ಪ್ರಮುಖ ದಾಖಲೆಪತ್ರಗಳೇ ನಾಪತ್ತೆ Read More »

ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಸಿದ್ದರಾಮಯ್ಯ ಸುತ್ತ ಬಿಗಿಯಾದ ತನಿಖೆಯ ಉರುಳು ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.ಮುಡಾ ಹಗರಣ ಸಂಬಂಧ

ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ Read More »

ಹಾಸನದಲ್ಲಿ ಕಾಂಗ್ರೆಸ್‌ನಿಂದ ಕೋಟಿ ಕೋಟಿ ಹಣ ಹಂಚಿಕೆ?

ಆಡಿಯೋದಲ್ಲಿದೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ವ್ಯವಹಾರದ ಮಾತು ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಕೋಟಿ ಕೋಟಿ ರೂ. ಹಂಚಿಕೆ ಮಾಡಿದ್ದಾರೆ ಎಂದು ಹೇಳುತ್ತಿರುವ ಅರಸೀಕೆರೆ ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ತುಣುಕೊಂದು ವೈರಲ್ ಆಗಿದೆ. ಚುನಾವಣೆ ನಡೆದು ನಾಲ್ಕು ತಿಂಗಳ ಬಳಿಕ ಆಡಿಯೋ ಬಹಿರಂಗವಾಗಿದೆ.ಶಿವಲಿಂಗೇಗೌಡರದ್ದು ಎನ್ನಲಾಗುತ್ತಿರುವ ಆಡಿಯೋದಲ್ಲಿ, ಸಿಎಂ, ಡಿಸಿಎಂ ಸೂಚನೆಯಂತೆ ಹಣ ಹಂಚಬೇಕು ಎಂದು ಹೇಳಲಾಗಿದೆ. ಒಟ್ಟು ಏಳು ಕೋಟಿ ಹಣ ಹಂಚಿಕೆಯ ಬಗ್ಗೆ ಮಾತನಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಐದು

ಹಾಸನದಲ್ಲಿ ಕಾಂಗ್ರೆಸ್‌ನಿಂದ ಕೋಟಿ ಕೋಟಿ ಹಣ ಹಂಚಿಕೆ? Read More »

ಬಿಜೆಪಿಗೆ ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಸದಸ್ಯರ ಸೇರ್ಪಡೆ

ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿ ಎಂದು ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಹೊಸದಾಗಿ 50 ಲಕ್ಷ ಮಂದಿ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ. ಸದಸ್ಯತ್ವ ಅಭಿಯಾನದಲ್ಲಿ 50 ಲಕ್ಷ ಮಂದಿ ಬಿಜೆಪಿಗೆ ನೋಂದಣಿಯಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅಧ್ಯಕ್ಷತೆಯಲ್ಲಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ, ಪದಾಧಿಕಾರಿಗಳ ಸಹಕಾರ ಹಾಗೂ ಶ್ರಮದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಬಿಜೆಪಿಗೆ ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಸದಸ್ಯರ ಸೇರ್ಪಡೆ Read More »

ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಸಚಿವ ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಅರ್ಧ ಪಾಕಿಸ್ಥಾನ ಹೇಳಿಕೆ ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್​ ಅವರ ಪತ್ನಿ ತಬಸ್ಸುಮ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​​ಗೆ ಕೋರ್ಟ್​ ನಿನ್ನೆ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ.ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ್ದಾರೆ.ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌

ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ Read More »

ಮಳೆ ನೀರನ್ನು ವಾಪಸ್‌ ಆಕಾಶಕ್ಕೆ ಕಳಿಸಕ್ಕೆ ಆಗುತ್ತಾ?

ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಪರಮೇಶ್ವರ್‌ ಉಡಾಫೆ ಹೇಳಿಕೆ ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತವಾಗಿ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಬೆಂಗಳೂರಲ್ಲಿ ಕೆಲ ದಿನಗಳಿಂದ ಭೀಕರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮನೆ, ಅಂಗಡಿ, ಮಾಲ್‌ಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಶಾಲೆ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ರಸ್ತೆಗಳು ಹದಗೆಟ್ಟು ಓಡಾಡದ ಪರಿಸ್ಥಿತಿ ಉಂಟಾಗಿದೆ. ಜನರು ಸಮರ್ಪಕ ವ್ಯವಸ್ಥೆ ಮಾಡದ ಸರಕಾರ ಮತ್ತು ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವ

ಮಳೆ ನೀರನ್ನು ವಾಪಸ್‌ ಆಕಾಶಕ್ಕೆ ಕಳಿಸಕ್ಕೆ ಆಗುತ್ತಾ? Read More »

ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. 20ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ಮನೆ ಕಡೆ ತೆರಳಿದರು.ಜೈಲಿನಿಂದ ಮುನಿರತ್ನ ಬಿಡುಗಡೆಯಾದ ಹಿನ್ನೆಲೆಯಲ್ಲಿ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ಮಂಗಳವಾರ ಜಾಮೀನು ನೀಡಿ 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ

ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ Read More »

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು

ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ ಬೆಂಗಳೂರು : ಮಸೀದಿಯೊಳಗೆ ಜೈ ಶ್ರೀ ರಾಮ್ ಎಂದು ಕೂಗುವುದರಿಂದ ಯಾರದ್ದೇ ಧಾರ್ಮಿಕ ಭಾವನೆಗೆ ಅಪಚಾರವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿ ಕಡಬದ ಬಿಳಿನೆಲೆಯ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಕೇಸನ್ನು ವಜಾಗೊಳಿಸಿದೆ. ಕಳೆದ ತಿಂಗಳು ಈ ತೀರ್ಪು ನೀಡಲಾಗಿದ್ದು, ಕೋರ್ಟಿನ ವೆಬ್‌ಸೈಟಿನಲ್ಲಿ ಮಂಗಳವಾರ ಅಪ್‌ಲೋಡ್‌ ಮಾಡಲಾಗಿದೆ.ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ತೀರ್ಪು ನೀಡಿ ಕಡಬ ಬಿಳಿನೆಲೆ ನಿವಾಸಿಗಳಾದ ಕೀರ್ತನ್ ಕುಮಾರ್ ಮತ್ತು ಸಚಿನ್

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು Read More »

ಉಪಚುನಾವಣೆ : ಪ್ರತಿಷ್ಠೆಯೇ ಪಣ

ಗೆದ್ದು ಬೀಗುವ ತವಕದಲ್ಲಿ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಬೆಂಗಳೂರು: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆ ಜೊತೆಗೆ ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೂ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡುವುದರೊಂದಿಗೆ ರಾಜ್ಯದಲ್ಲೂ ಚುನಾವಣಾ ಕಾವು ಶುರುವಾಗಿದೆ.ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಈ ಮೂರು ಕ್ಷೇತ್ರಗಳು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿಯ ಕ್ಷೇತ್ರಗಳು. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ವಿವಿಧ ಹಗರಣಗಳ ಕುರಿತಂತೆ ತೀವ್ರ

ಉಪಚುನಾವಣೆ : ಪ್ರತಿಷ್ಠೆಯೇ ಪಣ Read More »

error: Content is protected !!
Scroll to Top