ಬೀದಿ ನಾಯಿಗಳ ನಿಯಂತ್ರಣಕ್ಕೂ ಶಿಕ್ಷಕ ನೇಮಕ: ರಾಜ್ಯ ಸರ್ಕಾರದ ಕ್ರಮಕ್ಕೆ ಹೊರಟ್ಟಿ ಆಕ್ರೋಶ
ಬೆಂಗಳೂರು: ಶಿಕ್ಷಕರನ್ನು ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ನೊಡೆಲ್ ಅಧಿಕಾರಿಗಳನ್ನಾಗಿ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಶಿಕ್ಷಕರಿಗೆ ಈಗಾಗಲೇ ಅನೇಕ ಬೋಧಕೇತರ ಜವಾಬ್ದಾರಿಗಳು ನೀಡಲಾಗಿರುವ ಸಂದರ್ಭದಲ್ಲಿ ಇಂತಹ ಕೆಲಸಗಳನ್ನು ನೀಡುವುದು ಹಾಸ್ಯಾಸ್ಪದ ಹಾಗೂ ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದಿದ್ದಾರೆ. ರಾಜ್ಯದ ಶಿಕ್ಷಕರು ಈಗಾಗಲೇ ಮತದಾನ ಕಾರ್ಯಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ […]
ಬೀದಿ ನಾಯಿಗಳ ನಿಯಂತ್ರಣಕ್ಕೂ ಶಿಕ್ಷಕ ನೇಮಕ: ರಾಜ್ಯ ಸರ್ಕಾರದ ಕ್ರಮಕ್ಕೆ ಹೊರಟ್ಟಿ ಆಕ್ರೋಶ Read More »










