ರಾಜ್ಯ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು

ಅರ್ಕಾವತಿ ಲೇಔಟ್‌ನಲ್ಲಿ ಅಕ್ರಮ ಎಸಗಿರುವ ಆರೋಪ ಬೆಂಗಳೂರು : ಹಗರಣಗಳು ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನು ಬಿಡುವಂತೆ ಕಾಣಿಸುತ್ತಿಲ್ಲ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಸುಳಿಯಲ್ಲಿ ಸಿಲುಕಿ ಹೈರಾಣಾಗಿರುವ ಸಿದ್ದರಾಮಯ್ಯ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ್ ಎಂಬವರು ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು ಅಧಿಕಾರ […]

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು Read More »

ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸೆರೆಯಾಗಿರುವ ನಾಗೇಂದ್ರ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಬಂಧನಲ್ಲಿರುವ ಮಾಜಿ ಸಚಿವ ನಾಗೇಂದ್ರಗೆ ನಿನ್ನೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.ಜುಲೈ 12ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ

ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ Read More »

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರಕಾರಕ್ಕೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಎಂದು ಟೀಕೆ ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಸ್‌ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಘಟಕ ನಡೆಸಿದ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಶಾಸಕರಾದ ಎಸ್‌.ಆರ್ ವಿಶ್ವನಾಥ್, ಸಿ.ಕೆ ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಸಂಸದ ಕಾರಜೋಳ, ಎಂಎಲ್‌ಸಿ ರವಿಕುಮಾರ್ ಮೊದಲಾದ ನಾಯಕರು ಪಾಲ್ಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

ಚಾರ್ಮಾಡಿ ಘಾಟಿಗೆ ಕಾದಿದೆ ಅಪಾಯ : ಜಿಯೋಲಾಜಿಕಲ್‌ ಸರ್ವೆ ವರದಿ ಎಚ್ಚರಿಕೆ

ಅವೈಜ್ಞಾನಿಕ ಕಾಮಗಾರಿ, ವಾಹನ ದಟ್ಟಣೆಯಿಂದ ಆಗಾಗ ಭೂ ಕುಸಿತ ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಬೆಟ್ಟ ಪ್ರದೇಶಗಳು ಅಪಾಯವನ್ನು ಎದುರಿಸುತ್ತಿವೆ ಎಂದು ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ವರದಿ ತಿಳಿಸಿದೆ. ಈ ಮಳೆಗಾಲದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಪದೇಪದೆ ಭೂಕುಸಿತ ಸಂಭವಿಸಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಆಗಾಗ ತೊಡಕುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಪಶ್ಚಿಮ ಘಟ್ಟದ ಅಧ್ಯಯನ ನಡೆಸಿ ವರದಿ ನೀಡಿದೆ.

ಚಾರ್ಮಾಡಿ ಘಾಟಿಗೆ ಕಾದಿದೆ ಅಪಾಯ : ಜಿಯೋಲಾಜಿಕಲ್‌ ಸರ್ವೆ ವರದಿ ಎಚ್ಚರಿಕೆ Read More »

ನ.1ರಂದು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ

ಧ್ವಜಗಳಿಗೆ ಈಗಲೇ ಭಾರಿ ಬೇಡಿಕೆ ಬೆಂಗಳೂರು: ಈ ಬಾರಿ ರಾಜ್ಯೋತ್ಸವ ದಿನವಾದ ನವಂಬರ್‌ 1ರಂದು ಎಲ್ಲೆಡೆ ಕಡ್ಡಾಯವಾಗಿ ಕನ್ನಡ ಧ್ವಜ ಹಾರಿಸಬೇಕೆಂದು ಸರಕಾರ ಆದೇಶಿಸಿದೆ. ಇದರಿಂದಾಗಿ ಧ್ವಜ ತಯಾರಿಸುವವರಿಗೆ ಈಗಾಗಲೇ ಭಾರಿ ಬೇಡಿಕೆ ಬರಲಾರಂಭಿಸಿದೆ. ಅಂತೆಯೇ ಧ್ವಜದ ಬೆಲೆಯೂ ತುಸು ಹೆಚ್ಚಾಗಿದೆ. ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳು, ಸರಕಾರಿ, ಖಾಸಗಿ ಸಂಸ್ಥೆಗಳು ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಜೊತೆಗೆ ಈ ಬಾರಿ

ನ.1ರಂದು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ Read More »

ಹುಲಿ ನೃತ್ಯಕ್ಕೆ ಫಿದಾ ಆದ ಮುನ್ನಾಭಾಯಿ

ಕಟೀಲು, ಕುದ್ರೋಳಿ ಕ್ಷೇತ್ರಗಳಿಗೆ ಭೇಟಿ ನೀಡಿದ ಸಂಜಯ್‌ ದತ್‌ ಮಂಗಳೂರು : ಕರಾವಳಿಯ ಹುಲಿ ನೃತ್ಯ ನೋಡಿ ಬಾಲಿವುಡ್‌ ನಟ ಸಂಜಯ್‌ ದತ್‌ ಫಿದಾ ಆಗಿದ್ದಾರೆ. ಶನಿವಾರ ಹುಲಿ ನೃತ್ಯ ಸ್ಪರ್ಧೆಗೆ ಭೇಟಿ ನೀಡಿದ ಸಂಜಯ್‌ ದತ್‌ ಕೆಲ ಹೊತ್ತು ಹುಲಿ ನೃತ್ಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿಗೆ ಬರುವ ಮೊದಲು ಸಂಜಯ್‌ ದತ್‌ ಕಟೀಲು ಕ್ಷೇತ್ರಕ್ಕೆ ಹೋಗಿ ದೇವಿಯ ದರ್ಶನ ಪಡೆದಿದ್ದರು. ಬಳಿಕ ಮಂಗಳೂರು ಕುದ್ರೋಳಿ ದೇವಳಕ್ಕೆ ಬಂದು ದೇವರ ಆಶೀರ್ವಾದ ಪಡೆದರು. ಎರಡೂ ದೇವಳಗಳಲ್ಲಿ

ಹುಲಿ ನೃತ್ಯಕ್ಕೆ ಫಿದಾ ಆದ ಮುನ್ನಾಭಾಯಿ Read More »

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ವಹಿವಾಟು ಮಾಡಬೇಡಿ | ಪ್ರಕಟಣೆ ಹೊರಡಿಸಿದ ಶಾಸಕ ಬಸನಗೌಡ ಪಾಟೀಲ್

ವಿಜಯಪುರ:- ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ. ಹೀಗೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ ಬುತ್ತಿಯಲ್ಲಿ ಮಾಂಸಾಹಾರ ತಂದು

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ವಹಿವಾಟು ಮಾಡಬೇಡಿ | ಪ್ರಕಟಣೆ ಹೊರಡಿಸಿದ ಶಾಸಕ ಬಸನಗೌಡ ಪಾಟೀಲ್ Read More »

ಇಂದು ಆಕರ್ಷಕ ಜಂಬೂ ಸವಾರಿ

ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ಬಂಬೂ ಸವಾರಿ ಇಂದು ನಡೆಯಲಿದೆ. ನವರಾತ್ರಿಯ 9 ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳು ಜನಮನ ಸೂರೆಗೊಂಡಿದ್ದು, ೧೦ನೇ ದಿನವಾದ ಶನಿವಾರ ವಿಜಯ ದಶಮಿ ಜಂಬೂಸವಾರಿ ನಡೆಯಲಿದೆ. ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಸಾಗಲಿದ್ದು, ಮೈಸೂರು ಜಂಬೂಸವಾರಿಗೆ ಸಿಂಗರಿಸಿಕೊಂಡು ಸಜ್ಜಾಗಿದೆ. ದೇಶ ವಿದೇಶಗಳಿಂದ ಉತ್ಸವ ವೀಕ್ಷಿಸಲು ಜನರು ಬಂದಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ

ಇಂದು ಆಕರ್ಷಕ ಜಂಬೂ ಸವಾರಿ Read More »

ಕೋವಿಡ್‌ ಹಗರಣ ತನಿಖೆ ದ್ವೇಷದ ರಾಜಕಾರಣ : ಬಿಜೆಪಿ ಆರೋಪ

ಮುಡಾ, ವಾಲ್ಮೀಕಿ ನಿಗಮ ಹಗರಣದ ಹೋರಾಟ ಮಾಡಿದ್ದಕ್ಕೆ ಕಾಂಗ್ರೆಸ್‌ ಸೇಡು ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಗೆ ತಿರುಗೇಟು ಕೊಡುವ ಸಲುವಾಗಿ ಸರಕಾರ ಕೋವಿಡ್​ ಹಗರಣಗಳ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿರುವುದನ್ನು ಬಿಜೆಪಿ ಸೇಡಿನ ರಾಜಕೀಯ ಎಂದು ಹೇಳಿದೆ. ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್‌ ಸಬ್‌ಕಮಿಟಿ ಸಭೆಯಲ್ಲಿ ಎಸ್‌ಐಟಿ ರಚನೆಗೆ ನಿರ್ಧರಿಸಲಾಗಿದ್ದು, ಇದರ ವಿರುದ್ಧ ಕಿಡಿಕಾರಿದೆ.ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್‌ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಬಿಜೆಪಿ

ಕೋವಿಡ್‌ ಹಗರಣ ತನಿಖೆ ದ್ವೇಷದ ರಾಜಕಾರಣ : ಬಿಜೆಪಿ ಆರೋಪ Read More »

ಮತ್ತೆ 14 ಪಾಕಿಸ್ಥಾನೀಯರ ಬಂಧನ

ಪಾಕಿಗಳನ್ನು ಕರೆತಂದು ನೆಲೆಗೊಳಿಸುವ ಜಾಲ ಸಕ್ರಿಯ ಬೆಂಗಳೂರು: ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ಥಾನದ 14 ಮಂದಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಸೆರೆಯಾದ ಪಾಕಿಗಳ ಸಂಖ್ಯೆ 22ಕ್ಕೇರಿದೆ. ಪ್ರಕರಣದ ಕಿಂಗ್‌ಪಿನ್ ಪರ್ವೇಜ್ ಬಂಧನವಾದ ಬೆನ್ನಲ್ಲೇ ಮತ್ತಷ್ಟು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 22 ಮಂದಿ ಪಾಕ್‌ ಪ್ರಜೆಗಳನ್ನು ಬಂಧಿಸಿದ್ದು ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಪಾಕ್ ಪ್ರಜೆಗಳ ಬಂಧನಕ್ಕೆ ಚೆನ್ನೈ, ದಿಲ್ಲಿ, ಹೈದರಾಬಾದ್‌ಗೆ ಪೊಲೀಸರ ತಂಡ ತೆರಳಿತ್ತು. ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ 22 ಮಂದಿ

ಮತ್ತೆ 14 ಪಾಕಿಸ್ಥಾನೀಯರ ಬಂಧನ Read More »

error: Content is protected !!
Scroll to Top