ರಾಜ್ಯ

ಕೊಡುಗು ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | ಕಾರ್ಯಕಾರಿಣಿ ಸಭೆ

ಕೊಡಗು : ಜಿಲ್ಲೆಯ ಸೋಮವಾರಪೇಟೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ  ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮತ್ತು ಕಾರ್ಯಕಾರಿಣಿ ಸಭೆ ಸೋಮವಾರಪೇಟೆ ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸೋಮವಾರಪೇಟೆ ಮಂಡಲ ಅಧ್ಯಕ್ಷ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ಬಳಿಕ ಸದಸ್ಯತ್ವ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಓಬಿಸಿ ಉಪಾಧ್ಯಕ್ಷವಿಠಲ ಪೂಜಾರಿ, ಒಬಿಸಿ ರಾಜ್ಯದ ಕಾರ್ಯದರ್ಶಿ, ಮಂಗಳೂರು ವಿಭಾಗ ಪ್ರಭಾರಿ ಆರ್ ಸಿ ನಾರಾಯಣ್, ಮಾಜಿ ವಿಧಾನ ಪರಿಷತ್ ಸದಸ್ಯ […]

ಕೊಡುಗು ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | ಕಾರ್ಯಕಾರಿಣಿ ಸಭೆ Read More »

ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು

ಅರ್ಕಾವತಿ ಡಿನೋಟಿಫಿಕೇಶನ್‌ನಲ್ಲಿ 8 ಸಾವಿರ ಕೋ. ರೂ. ಹಗರಣದ ಆರೋಪ ಬೆಂಗಳೂರು: ರಾಜ್ಯದಲ್ಲೀಗ ದಿನಕ್ಕೊಂದರಂತೆ ಹಗರಣ ಸುದ್ದಿ ಮಾಡುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಕಿತ್ತಾಟ ಶುರುಮಾಡಿರುವ ಸರಕಾರಕ್ಕೆ ರಾಜ್ಯಪಾಲರೂ ವಿವಿಧ ಪಟ್ಟುಗಳನ್ನು ಹಾಕಿ ಕಾಟ ಕೊಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಡೆದಿದೆ ಎನ್ನಲಾದ ಅರ್ಕಾವತಿ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋಟ್ ಪತ್ರ ಬರೆದಿದ್ದಾರೆ.ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ

ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು Read More »

ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ | ಅರ್ಜುನನ ಲಾರಿ ಪತ್ತೆ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಕೇರಳದ ಅರ್ಜುನನ ಲಾರಿ ಪತ್ತೆಯಾಗಿದೆ. ಮೂರನೇ ಹಂತದ ಕಾರ್ಯಾಚರಣೆ ಇದಾಗಿದ್ದು, ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ. ಜುಲೈ 16ರಂದು ನಡೆದಿದ್ದ ಗುಡ್ಡ ಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು.

ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ | ಅರ್ಜುನನ ಲಾರಿ ಪತ್ತೆ Read More »

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತಿತರ ಪ್ರಾಣಿಜನ್ಯ ಅಂಶಗಳಿರುವುದು ಬಹಿರಂಗವಾಗುತ್ತಿದ್ದಂತೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಆದೇಶ ಹೊರಡಿಸಿದೆ. ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ Read More »

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದೆ. ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಮುಜರಾಯಿ ದೇವಾಲಯಗಳಲ್ಲಿ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ Read More »

ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

ಅತ್ಯಾಚಾರ, ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ ಬಂಧಿಸಿದ ಪೊಲೀಸರು ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​.ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ

ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌ Read More »

ಕಲಾವಿದರ ಮಾಸಾಶನ 3 ಸಾವಿರ ರೂ.ಗೇರಿಕೆ : ಸಿದ್ದರಾಮಯ್ಯ

ಬೆಂಗಳೂರು : ಕಲಾವಿದರ ಮಾಸಾಶನ 3,000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಂದಿನ ವರ್ಷದಿಂದ ಕಲಾವಿದರ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿ ಸಿದ್ದರಾಮಯ್ಯ, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು.

ಕಲಾವಿದರ ಮಾಸಾಶನ 3 ಸಾವಿರ ರೂ.ಗೇರಿಕೆ : ಸಿದ್ದರಾಮಯ್ಯ Read More »

ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ

ದಾವಣಗೆರೆ: ದಾವಣಗೆರೆಯ ಬೇತೂರ ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್‌ಸ್ಟೆಬಲ್‌ ರಘು ಎಂಬವರಿಗೆ ಗಾಯವಾಗಿದೆ. ಕೂಡಲೇ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಸೇರಿದಂತೆ ಪ್ರಮುಖ ಮುಸ್ಲಿಂ‌ ನಾಯಕರು ಯುವಕರನ್ನು ನಿಯಂತ್ರಣ ಮಾಡಲು ಮುಂದಾಗಿದ್ದಾರೆ. ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆ ಕಾರ್ಯ ನಡೆದಿದೆ.

ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ Read More »

40 ಪರ್ಸೆಂಟ್‌ ಆರೋಪದ ಕೆಂಪಣ್ಣ ನಿಧನ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮತ್ತು ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ

40 ಪರ್ಸೆಂಟ್‌ ಆರೋಪದ ಕೆಂಪಣ್ಣ ನಿಧನ Read More »

error: Content is protected !!
Scroll to Top