ರಾಜ್ಯ

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ: ಸಿ ಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವರೆಗೂ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ದಿನದ ಹಿನ್ನೆಲೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ವಿರೋಧಿಗಳಿಗೆ ಹೆದರಿ ರಣರಂಗ ಬಿಟ್ಟು ಓಡಿ ಹೋಗುವ ಹೇಡಿ ತಾನಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್‌:ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು […]

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ: ಸಿ ಎಂ ಸಿದ್ದರಾಮಯ್ಯ Read More »

ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಮಗಳೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿ ಹೆತ್ತವರು, ಸಹೋದರಿಯನ್ನು ಕಳೆದುಕೊಂಡಿದ್ದ ಯುವಕನೊಬ್ಬ ಪೊಲೀಸ್ ಸ್ಟೇಷನ್ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ಯುವಕನನ್ನು ‌ಪುನೀತ್ ಎಂದು ಗುರುತಿಸಲಾಗಿದೆ. ಈತ ತನ್ನ ಹೆತ್ತವರು ಬಿಟ್ಟು ಹೋಗಿದ್ದ ಎರಡು ಸಣ್ಣ ಮನೆಗಳ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದನು. ಆತನ ಅತ್ತೆಯೇ ಆತನ ಹಾದಿಗೆ ಅಡ್ಡಗಾಲು ಹಾಕುತ್ತಿದ್ದರು ಎಂದು ತಿಳಿದು ಬಂದಿದೆ. ಪುನೀತ್ ಪೋಷಕರು ತನ್ನ ಬಳಿ ಹಣ ಪಡೆದಿದ್ದಾಗಿ ಹೇಳಿ ಮನೆಯ ಹಕ್ಕನ್ನು ಆತನಿಗೆ ನೀಡಲು ನಿರಾಕರಿಸಿದ್ದರು. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್

ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ Read More »

ಮೂವರು ಅಪ್ರಾಪ್ತ ಬಾಲಕಿಯರಿಗೆ ‌ಲೈಂಗಿಕ ಕಿರುಕುಳ ನೀಡಿದ ಕಾಮುಕ ವೃದ್ಧ ಅರೆಸ್ಟ್

ಬೆಂಗಳೂರು: ಮೂವರು ಅಪ್ರಾಪ್ತೆಯರಿಗೆ ಸಿಹಿ ತಿನಿಸಿನ ಆಸೆ ಹುಟ್ಟಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿ 64 ವರ್ಷದ ವೃದ್ಧನನ್ನು ಅನೇಕಲ್ ಪೊಲೀಸರು ಬಂಧಿಸಿದ್ದಾರೆ. ಮಕ್ಕಳನ್ನು ಬೆಳಗ್ಗೆ ಸುಮಾರು 8.30 ರ ಹೊತ್ತಿಗೆ ಪೋಷಕರು ಶಾಲೆಗೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಶಾಲೆ ಆರಂಭ ಹತ್ತು ಗಂಟೆಗೆ ಆಗುತ್ತಿದ್ದರೂ ಸುಮಾರು ಎರಡು ಗಂಟೆಗಳಿಗೂ ಮೊದಲೇ ಶಾಲೆಗೆ ಬರುತ್ತಿದ್ದ ವಿದ್ಯಾರ್ಥಿಗಳನ್ನು ಕಾಮುಕ ‌ವೃದ್ಧ ಗಮನಿಸಿದ್ದ. ಆ ಬಳಿಕ ಮಕ್ಕಳಿಗೆ ಚಾಕಲೇಟ್ ನೀಡುವುದಾಗಿ ಆಸೆ ಹುಟ್ಟಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು

ಮೂವರು ಅಪ್ರಾಪ್ತ ಬಾಲಕಿಯರಿಗೆ ‌ಲೈಂಗಿಕ ಕಿರುಕುಳ ನೀಡಿದ ಕಾಮುಕ ವೃದ್ಧ ಅರೆಸ್ಟ್ Read More »

ಮಕ್ಕಳ ಮೊಬೈಲ್ ಫೋನ್ ಅಡಿಕ್ಷನ್ ಬಿಡಿಸಲು ರಾಜ್ಯದ ಶಾಲೆಗಳಲ್ಲಿ ‘ಫೋನ್ ಬಿಡಿ-ಪುಸ್ತಕ ಹಿಡಿ’ ಅಭಿಯಾನ

ಬೆಂಗಳೂರು: ಮಕ್ಕಳ ಮೊಬೈಲ್ ಫೋನ್ ಅಡಿಕ್ಷನ್ ಬಿಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಫೋನ್ ಬಿಡಿ, ಪುಸ್ತಕ ಹಿಡಿ’ ಅಭಿಯಾನ ನಡೆಸಲು ಆರಂಭಿಸಿದೆ. ಮಕ್ಕಳು ಶಾಲೆಯಲ್ಲಿ ಇದ್ದಷ್ಟು ಸಮಯ ಫೋನ್‌ನಿಂದ ದೂರವಿರುತ್ತಾರೆ. ಆದರೆ ಮನೆಗೆ ಹೋದ ತಕ್ಷಣ ಫೋನಿನ ದಾಸರಾಗುವ ಮಕ್ಕಳೇ ಹೆಚ್ಚು. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಓದಿನ ಬಗ್ಗೆ ಆಸಕ್ತಿ ಮೂಡಿಸಲು ಈ ಹೊಸ ಕ್ರಮಕ್ಕೆ ಮುಂದಾಗಿದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸಿ, ಮೊಬೈಲ್ ಬಳಕೆ ನಿಯಂತ್ರಣಕ್ಕೆ ತರುವ

ಮಕ್ಕಳ ಮೊಬೈಲ್ ಫೋನ್ ಅಡಿಕ್ಷನ್ ಬಿಡಿಸಲು ರಾಜ್ಯದ ಶಾಲೆಗಳಲ್ಲಿ ‘ಫೋನ್ ಬಿಡಿ-ಪುಸ್ತಕ ಹಿಡಿ’ ಅಭಿಯಾನ Read More »

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ದೂರು ದಾಖಲಾದ ಮರುಕ್ಷಣವೇ ಬಂಧಿಸಿ, ಮನೆಗೆ ದಾಳಿ ಮಾಡಿರುವ ಪೊಲೀಸರು ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಸೈಟ್‌ ಕಬಳಿಕೆ ಪ್ರಕರಣದ ಮುಖ್ಯ ದೂರುದಾರರಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ದೂರು ನೀಡಿದ ಮರುಕ್ಷಣವೇ ಬಂಧಿಸಿದ್ದಲ್ಲದೆ ಅವರ ಮನೆಗೆ ದಾಳಿ ಮಾಡಿ ಶೋಧ ಕಾರ್ಯ ಮಾಡಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಹಿಂದೆ ಯಾರ ಕೈವಾಡ ಇದೆ ಎಂದು ಅನುಮಾನ ಈಗ ಉಂಟಾಗಿದೆ.

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ Read More »

ದೇವಸ್ಥಾನಗಳಲ್ಲಿ ರೀಲ್ಸ್‌ ಶೂಟಿಂಗ್‌ ಮಾಡಲು ತೆರಬೇಕು ಶುಲ್ಕ!

ಯೂಟ್ಯೂಬರ್ಸ್‌, ರೀಲ್ಸ್‌ ಮಾಡುವವರ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಮ ಬೆಂಗಳೂರು : ಇನ್ನು ಮುಂದೆ ದೇವಸ್ಥಾನಗಳಲ್ಲಿ ರೀಲ್ಸ್‌ ಮತ್ತಿತರ ಉದ್ದೇಗಳಿಗೆ ಶೂಟಿಂಗ್‌ ಮಾಡಬೇಕಾದರೆ ಶುಲ್ಕ ಪಾವತಿಸಬೇಕು. ರಾಜ್ಯದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ರೀಲ್ಸ್ ಮತ್ತು ವೀಡಿಯೋ ಶೂಟಿಂಗ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ನಿಯಮಗಳನ್ನು ಜಾರಿಗೆ ತರುವ ನಿರ್ಧಾರ ಮಾಡಿದೆ. ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕಾದರೆ ಆಯ್ಕೆ ಮಾಡಿದ ಸ್ಥಳಗಳಲ್ಲಿ ಮಾತ್ರ ಅವಕಾಶ ದೊರೆಯಲಿದೆ ಮತ್ತು ಅದಕ್ಕಾಗಿ ಶುಲ್ಕ ಕಡ್ಡಾಯವಾಗಲಿದೆ. ರಾಜ್ಯದ ಎಲ್ಲ ಎ ಮತ್ತು ಬಿ

ದೇವಸ್ಥಾನಗಳಲ್ಲಿ ರೀಲ್ಸ್‌ ಶೂಟಿಂಗ್‌ ಮಾಡಲು ತೆರಬೇಕು ಶುಲ್ಕ! Read More »

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌

ದೂರು ಕೊಟ್ಟ ಮರುಕ್ಷಣದಲ್ಲೇ ಬಂಧಿಸಿ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮುಂಬಡ್ತಿಗಾಗಿ ನಟೇಶ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.ಇದರ ಬೆನ್ನಲ್ಲೇ ನಿನ್ನೆ

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌ Read More »

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ

ಶಾಂತಿ ಸಭೆ ವಿಫಲ; ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ಬಾಗಲಕೋಟೆ : ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಜಯಪುರ ಜೈಲಿಗೆ ಅಟ್ಟಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ Read More »

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

ವಿಜಯಪುರ: ವೈದ್ಯರು ಮತ್ತು ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಮಗು ಮೃತಪಟ್ಟ ಘಟನೆ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಢಳವಾರ ಗ್ರಾಮದ ಮೈತ್ರಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಸಿಂದಗಿಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೇ ಇದ್ದ ಕಾರಣ ನರ್ಸ್ ಮತ್ತು ಇನ್ನಿಬ್ಬರು ಸಿಬ್ಬಂದಿ ಸೇರಿ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಗು ಮೃತಪಟ್ಟಿದ್ದು, ಮೈತ್ರಾಗೆ ತೀವ್ರ ಪ್ರಮಾಣದಲ್ಲಿ ರಕ್ತಸ್ರಾವ ಆಗಿದೆ. ಭಯಗೊಂಡ ಸಿಬ್ಬಂದಿ ತಕ್ಷಣವೇ ಆಕೆಯನ್ನು

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು Read More »

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ

ಮಸೀದಿಯಿಂದಲೇ ಕಲ್ಲು, ಚಪ್ಪಲಿ ತೂರಿದ್ದಾರೆ ಎಂದು ದೃಢಪಡಿಸಿದ ಎಸ್‌ಪಿ ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ತನ್ವೀರ್ (28) , ಮುಜ್ಜು (23), ಸದ್ದಾಂ(22), ಫಯಾಜ್(24), ಸರ್ಫರಾಜ್(33), ರಿಯಾನ್(21), ಅಯಾನ್(19), ವಸೀಮ್(22) ಬಂಧನಕ್ಕೆ ಒಳಗಾದ ಆರೋಪಿಗಳು. ವಿಡಿಯೋ ದೃಶ್ಯಗಳನ್ನು ಆಧಾರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಾವು ಆರೋಪಿಗಳನ್ನು ಬಂಧಿಸಿದ್ದೇವೆ. ರಾತ್ರಿ 10.06ಕ್ಕೆ ಕಲ್ಲು ಎಸೆಯಲಾಗಿದೆ. ನಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕೆ 7 ಮಂದಿ ಮೇಲೆ ಕೇಸ್‌

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ Read More »

error: Content is protected !!
Scroll to Top