ರಾಜ್ಯ

ದುಬಾರೆ ದುರಂತ : ಇನ್ನು ಆನೆಗಳ ಬಳಿಗೆ ಹೋಗಲು ಇಲ್ಲ ಅವಕಾಶ

ಆನೆಯಡಿಗೆ ಬಿದ್ದು ಮಹಿಳೆ ಮೃತಪಟ್ಟ ಬಳಿಕ ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಅರಣ್ಯ ಇಲಾಖೆ ಬೆಂಗಳೂರು: ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ಎರಡು ಆನೆಗಳ ಕಾದಾಟದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದ ಬಳಿಕ ಎಚ್ಚೆತ್ತಿರುವ ಅರಣ್ಯ ಇಲಾಖೆ ಆನೆ ವೀಕ್ಷಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ. ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ […]

ದುಬಾರೆ ದುರಂತ : ಇನ್ನು ಆನೆಗಳ ಬಳಿಗೆ ಹೋಗಲು ಇಲ್ಲ ಅವಕಾಶ Read More »

ಸಿದ್ದರಾಮಯ್ಯ ಕಿರೀಟಕ್ಕೆ ಇನ್ನೊಂದು ಗರಿ

ಎಂಟು ವರ್ಷ ಆಳ್ವಿಕೆ ಮಾಡಿದ ಮುಖ್ಯಮಂತ್ರಿ ಎಂಬ ದಾಖಲೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ 4 ದಿನ ಮೊದಲೇ ಸಿದ್ದರಾಮಯ್ಯ ಅವರ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ಸಿಎಂ ಆಗಿ ಅವರು ಹೊರಹೊಮ್ಮಿದ್ದಾರೆ. ಮೈಸೂರು ತಾಲೂಕು ಬೋರ್ಡ್ ಚುನಾವಣೆಗೆ ಸ್ಪರ್ಧಿಸುವ ಮೂಲಕ 1977ರಲ್ಲಿ ಸಾರ್ವಜನಿಕ ಸೇವೆಗೆ ಪಾದಾರ್ಪಣೆ ಮಾಡಿದ್ದ ಸಿದ್ದರಾಮಯ್ಯ ತಮ್ಮ ರಾಜಕೀಯ ಬದುಕಿನ

ಸಿದ್ದರಾಮಯ್ಯ ಕಿರೀಟಕ್ಕೆ ಇನ್ನೊಂದು ಗರಿ Read More »

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ದಿಢೀರ್‌ ವಜಾ

​ಕರ್ತವ್ಯ ಲೋಪದ ಕಾರಣಕ್ಕೆ ವಜಾ ಮಾಡಿದ ಹೈಕಮಾಂಡ್‌ ಬೆಂಗಳೂರು : ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ದಿಢೀರ್‌ ವಜಾ Read More »

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ Read More »

ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ : ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಾರಂಭೋತ್ಸವಕ್ಕೆ ಚಾಲನೆ ಬೆಂಗಳೂರು: ಜೂ.1ರಂದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ 46,000 ಸರ್ಕಾರಿ ಶಾಲೆಗಳ

ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ : ಮಧು ಬಂಗಾರಪ್ಪ Read More »

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಂತೆ ನಡೆಯಿತು. ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಟ್ರಸ್ಟಿಗಳಾದ ರಾಮಣ್ಣಗೌಡ, ಉಮೇಶ್ ಗಿರಿಗುಡ್ಡೆ, ವಿಜಯಲಕ್ಷ್ಮಿ ರೈ, ವಿಶ್ವನಾಥ ಗೌಡ ಆಲಡ್ಕ, ಮೋನಪ್ಪ ಗೌಡ ಮತ್ತು ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಸೀಯಾಳ ಅಭಿಷೇಕ ಸಮರ್ಪಿಸಿದರು, ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ್ ಬಾರ್ಯ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ Read More »

ಜೂ.30ರಿಂದ ಕರ್ನಾಟಕದಲ್ಲಿ ಎಸ್‌ಐಆರ್‌ ಶುರು

ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಕಾರ್ಯ ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು. ಈಗಾಗಲೇ ಎಸ್‌ಐಆರ್ ಗಾಗಿ ಮ್ಯಾಪಿಂಗ್‌ ಕಾರ್ಯ ಮಾಡಲಾಗಿದೆ. ಎಸ್‌ಐಆರ್‌ಗೆ ಈಗಾಗಲೇ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.

ಜೂ.30ರಿಂದ ಕರ್ನಾಟಕದಲ್ಲಿ ಎಸ್‌ಐಆರ್‌ ಶುರು Read More »

4500 ಕೋ. ರೂ. ವಂಚನೆ : ಆರೋಪಿ ಸೆರೆ

ಆನ್‌ಲೈನ್‌ ಮೂಲಕವೇ ಹೂಡಿಕೆ ಮಾಡಿಸಿಕೊಂಡು ಪಂಗನಾಮ ಹಾಕಿದ್ದ ಆರೋಪಿ ಬೆಳಗಾವಿ : 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಶಿವಂ ಅಸೋಸಿಯೇಟ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಚಾರ, ದೊಡ್ಡ ಕಾರ್ಯಕ್ರಮ, ಹೆಚ್ಚಿನ ಬಡ್ಡಿ ದರದ ಭರವಸೆ ಹಾಗೂ ವಿವಾದಾತ್ಮಕ ಭಾಷಣಗಳ ಮೂಲಕ ಶಿವಂ ಅಸೋಸಿಯೇಟ್ ಎಂಬ ಸಂಸ್ಥೆ ಜನರನ್ನು ಆಕರ್ಷಿಸಿತ್ತು. ಶುಕ್ರವಾರ ಬೆಳಗಾವಿಯ ಶಿವಬಸವ ನಗರದಲ್ಲಿರುವ ಕಚೇರಿ ಸೇರಿದಂತೆ ಎರಡು ಕಡೆ ಅಧಿಕಾರಿಗಳು

4500 ಕೋ. ರೂ. ವಂಚನೆ : ಆರೋಪಿ ಸೆರೆ Read More »

ಮೋದಿ ಭೇಟಿ ತಡೆಯಲು ಜಿಲೆಟಿನ್‌ ಕಡ್ಡಿ ಇಟ್ಟಿದ್ದ ದುಷ್ಕರ್ಮಿಗಳು

ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ನಡೆದಿದ್ದ ಸಂಚು ಬಯಲು ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಆರ್ಟ್ ಆಫ್ ಲೀವಿಂಗ್ ಆಶ್ರಮದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದ ಅಸಲಿ ಕಾರಣ ಕೊನೆಗೂ ತನಿಖೆಯಲ್ಲಿ ಬಯಲಾಗಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಈ ಪ್ರಕರಣವು ಯಾವುದೇ ಪ್ರಮುಖ ಉಗ್ರ ಸಂಘಟನೆಯ ಕೃತ್ಯವಲ್ಲ, ಬದಲಿಗೆ ಆಶ್ರಮದ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಂಚು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಮೇ

ಮೋದಿ ಭೇಟಿ ತಡೆಯಲು ಜಿಲೆಟಿನ್‌ ಕಡ್ಡಿ ಇಟ್ಟಿದ್ದ ದುಷ್ಕರ್ಮಿಗಳು Read More »

ದರ್ಶನ್‌ಗೆ ಇನ್ನೂ ಒಂದು ವರ್ಷ ಜೈಲು ವಾಸ

ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌ ಹೊಸದಿಲ್ಲಿ: ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸುಪ್ರೀಂಕೋರ್ಟ್‌ನಲ್ಲಿ ಇಂದು ನಟ ದರ್ಶನ್ ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿ ವಜಾಗೊಳಿಸಲಾಗಿದೆ. ಸಾಕ್ಷಿ ವಿಚಾರಣೆಗೆ 1 ವರ್ಷ ಕಾಲಾವಧಿಯನ್ನು ಸುಪ್ರೀಂ ಕೊರ್ಟ್ ನೀಡಿದೆ. ಹೀಗಾಗಿ 1 ವರ್ಷ ಜೈಲುವಾಸ ಕಾಯಂ ಆದಂತೆ ಆಗಿದೆ. ಇದರ ಬಳಿಕ ಜಾಮೀನು ಅರ್ಜಿ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಕ್ಷಿ ವಿಚಾರಣೆಯಲ್ಲಿ ಪ್ರಗತಿಯಾಗದಿದ್ದರೆ, ವಿಳಂಬವಾದರೆ ಮತ್ತೆ

ದರ್ಶನ್‌ಗೆ ಇನ್ನೂ ಒಂದು ವರ್ಷ ಜೈಲು ವಾಸ Read More »

error: Content is protected !!
Scroll to Top