ರಾಜ್ಯ

ಆಸ್ತಿ ಜಗಳ : ತಂದೆಯಿಂದಲೇ ಮಗಳ ಹತ್ಯೆ

ಮಂಗಳೂರು: ತಂದೆಯೇ 18 ವರ್ಷದ ಮಗಳನ್ನು ಕಡಿದು ಕೊಲೆಗೈದ ದಾರುಣ ಘಟನೆ ಕೇರಳ-ಕರ್ನಾಟಕ ಗಡಿಭಾಗದ ತಲಪಾಡಿ ಸಮೀಪ ತೂಮಿನಾಡು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ತಂದೆ ಉಮ್ಮರ್ ಫಾರೂಕ್‌ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎನ್ನಲಾಗಿದೆ. ಉಮರ್ […]

ಆಸ್ತಿ ಜಗಳ : ತಂದೆಯಿಂದಲೇ ಮಗಳ ಹತ್ಯೆ Read More »

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಅಪರಿಚಿತನಿಂದ ಮಹಿಳೆಯ ಕರಿಮಣಿ ಎಗರಿಸಿ ಪರಾರಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪದಲ್ಲಿ ಬಂದು ಮಹಿಳೆಯ ಕತ್ತಿನಿಂದ ಕರಿಮಣಿ ಸರ ಎಗರಿಸಿದ ಘಟನೆ ಕಾವಳಪಡೂರಿನ ರಾಜಪಲ್ಕೆಯಲ್ಲಿ ನಡೆದಿದೆ. ಡೋಗ್ರ ಮೂಲ್ಯ ಎಂಬವರ ಪತ್ನಿ ಉಷಾಲಕ್ಷ್ಮಿ ಅವರ ಕತ್ತಿನಿಂದ ‌ಎರಡೂವರೆ ಪವನಿನ ಕರಿಮಣಿ ಎಗರಿಸಿರುವುದಾಗಿದೆ. ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಪರಿಚಿತನೊಬ್ಬ ಬಂದು ಜಗಲಿಯಲ್ಲಿ ಕುಳಿತು ನೀರು ಕೇಳಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದು ಮಹಿಳೆಯೇ ನೀರು ತರಲು ಒಳ ಹೋಗಿದ್ದಾರೆ. ಈ ವೇಳೆ ಅಪರಿಚಿತ ಮಹಿಳೆಯನ್ನು ಹಿಂಬಾಲಿಸಿ ಹೋಗಿ, ಕೈ ಕಾಲು ಕಟ್ಟಿ

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಅಪರಿಚಿತನಿಂದ ಮಹಿಳೆಯ ಕರಿಮಣಿ ಎಗರಿಸಿ ಪರಾರಿ Read More »

ಉದ್ಯಮಿ ಸಿ.ಜೆ. ರಾಯ್‌ ಆತ್ಮಹತ್ಯೆ ಕೇಸ್‌ : ಡೈರಿಯಲ್ಲಿದೆ ಸ್ಫೊಟಕ ಮಾಹಿತಿ

ಇಡೀ ತನಿಖೆಯ ದಿಕ್ಕನ್ನೇ ಬದಲಿಸುವ ಮಾಹಿತಿ ಡೈರಿಯಲ್ಲಿ ಪತ್ತೆ ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ನಿರ್ಧರಿಸಿದ್ದರೇ? ಅವರ ಡೈರಿಯಲ್ಲಿರುವ ಕೆಲವೊಂದು ಮಾಹಿತಿ ಸಿ.ಜೆ.ರಾಯ್‌ ಆತ್ಮಹತ್ಯೆ ಆ ಕ್ಷಣದ ನಿರ್ಧಾರವಲ್ಲ, ಬದಲಾಗಿ ಅವರು ಮೊದಲೇ ಆತ್ಮಹತ್ಯೆಗೆ ತಯಾರಿ ಮಾಡಿಕೊಂಡಿದ್ದರು ಎಂಬ ಸುಳಿವು ನೀಡುತ್ತಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಆದಾಯಕರ ಇಲಾಖೆಯ ಕಿರುಕುಳದಿಂದ ಐಟಿ ದಾಳಿ ನಡೆಯುತ್ತಿರುವಾಗಲೇ ಸಿ.ಜೆ.ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಡೈರಿಯಲ್ಲಿ ಅವರು ಬರೆದಿಟ್ಟಿರುವ ಕೆಲವು ವಿಚಾರಗಳು ತನಿಖೆಯ

ಉದ್ಯಮಿ ಸಿ.ಜೆ. ರಾಯ್‌ ಆತ್ಮಹತ್ಯೆ ಕೇಸ್‌ : ಡೈರಿಯಲ್ಲಿದೆ ಸ್ಫೊಟಕ ಮಾಹಿತಿ Read More »

ವರನಿಗೆ ಚಾಕು ಇರಿತ ಪ್ರಕರಣ : ವಧುವೇ ಹತ್ಯಾಯತ್ನದ ಸೂತ್ರಧಾರಿ!

ಮದುವೆ ತಪ್ಪಿಸಲು ಪ್ರಿಯತನೊಡನೆ ಸೇರಿ ಮರ್ಡರ್‌ ಪ್ಲಾನ್‌ ಮಾಡಿದ್ದ ಯುವತಿ ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣ ತಿರುವು ಪಡೆದುಕೊಂಡಿದ್ದು, ಅವನನ್ನು ಮದುವೆಯಾಗಬೇಕಾಗಿದ್ದ ವಧುವೇ ಈ ಹತ್ಯಾಯತ್ನದ ಹಿಂದಿನ ಸೂತ್ರಧಾರಿ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್‌ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್‌ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ

ವರನಿಗೆ ಚಾಕು ಇರಿತ ಪ್ರಕರಣ : ವಧುವೇ ಹತ್ಯಾಯತ್ನದ ಸೂತ್ರಧಾರಿ! Read More »

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭ

ತೆರಿಗೆ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಂಗಳೂರು: ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ತನಿಖೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಭಾನುವಾರ ತಿಳಿಸಿದ್ದಾರೆ. ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆ ನಡೆದ

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭ Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌?

ಗೋವಾ ಮಾದರಿಯಲ್ಲಿ ರಾಜ್ಯದಲ್ಲೂ ನಿಷೇಧ ಜಾರಿಗೆ ತರಲು ಗಂಭೀರ ಚಿಂತನೆ ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌? Read More »

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ

ಪದೇ ಪದೆ ದಾಳಿ ನಡೆಸುತ್ತಿದ್ದ ಕೇರಳದ ಐಟಿ ಅಧಿಕಾರಿಗಳು ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಹಾಗೂ ಒತ್ತಡವೇ ಕಾರಣ ಎಂದು ಸಹೋದರ ಸಿ.ಜೆ.ಬಾಬು ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ಐಟಿ ಅಧಿಕಾರಿಗಳು ಜ.28ರಿಂದಲೂ ನನ್ನ ತಮ್ಮ ಸಿ.ಜೆ.ರಾಯ್ ಅವರನ್ನು ವಿಚಾರಣೆ ಮಾಡುತ್ತಿದ್ದರು. ಶುಕ್ರವಾರವೂ ಕಚೇರಿಗೆ ಬಂದು ವಿಚಾರಣೆ ಮಾಡಿದ್ದಾರೆ. ಐಟಿ ಇಲಾಖೆಯ ಅಡಿಷನಲ್ ಕಮಿಷನರ್ ಕೃಷ್ಣ ಪ್ರಸಾದ್ ಸಹ ಅಧಿಕಾರಿಗಳ ತಂಡದಲ್ಲಿದ್ದರು ಎಂದು ಹೇಳಿದ್ದಾರೆ. ಈ ಐಟಿ ಅಧಿಕಾರಿಗಳು ಜ.27ರಂದು ನನ್ನ ಮನೆಗೆ

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ Read More »

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌

ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್‌ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ.

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌ Read More »

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ?

ಉದ್ಯಮ ವಲಯವನ್ನು ಆಘಾತಕ್ಕೆ ತಳ್ಳಿದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷನ ಆತ್ಮಹತ್ಯೆ ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಕೇರಳ ಮೂಲದ ಸಿ.ಜೆ ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಆದಾಯ ಕರ ಇಲಾಖೆ ಅಧಿಅಕರಿಗಳ ದಾಳಿ ನಡೆಯುತ್ತಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ ರಾಯ್ ಅವರ

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ? Read More »

ಐಟಿ ದಾಳಿ ಬೆನ್ನಲ್ಲೇ ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು: ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ, ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಅವರು ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶವವನ್ನು ಅನೇಕಲ್‌ನ ನಾರಾಯಣ ರಾವ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅವರ ಕಂಪನಿಗೆ ಪದೇ ಪದೇ ಐಟಿ ಅಧಿಕಾರಿಗಳು ದಾಳಿ ಮಾಡುತ್ತಿದ್ದು, ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇಂದು ಕೂಡ ಐಟಿ ದಾಳಿ ನಡೆದಿದ್ದು, ಈ ವೇಳೆ

ಐಟಿ ದಾಳಿ ಬೆನ್ನಲ್ಲೇ ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ. ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

error: Content is protected !!
Scroll to Top