ರಾಜ್ಯ

ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೇನೆಪೊಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯು ವಿವಿಧ ಯುವತಿಯರೊಂದಿಗೆ ಚಕ್ಕಂದವಾಡಿ ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. […]

ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ Read More »

ಬೃಹತ್‌ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : 10 ಮಂದಿ ಬಂಧನ

ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರುತ್ತಿದ್ದ ಆರೋಪಿಗಳು ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿ ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್,

ಬೃಹತ್‌ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : 10 ಮಂದಿ ಬಂಧನ Read More »

ಪಾನಮತ್ತ ನಟನಿಂದ ಸರಣಿ ಅಪಘಾತ

ಯದ್ವಾತದ್ವಾ ಕಾರು ಓಡಿಸಿ ಹಲವು ವಾಹನಗಳಿಗೆ ಗುದ್ದಿದ ನಟ ಬೆಂಗಳೂರು: ಕನ್ನಡದ ನಟನೊಬ್ಬ ಪಾನಮತ್ತನಾಗಿ ಯದ್ವಾತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಕೆಲವು ಚಿತ್ರಗಳಲ್ಲಿ ಹೀರೊ ಆಗಿ ನಟಿಸಿದ್ದ ಮಯೂರ್ ಪಟೇಲ್​ ಎಂಬಾತ ಶರಾಬಿನ ಮತ್ತಿನಲ್ಲಿ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ.

ಪಾನಮತ್ತ ನಟನಿಂದ ಸರಣಿ ಅಪಘಾತ Read More »

ಸಾಲಗಾರರ ಕಾಟ: ವ್ಯಕ್ತಿ ಆತ್ಮಹತ್ಯೆ

ಹಾಸನ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ದೊಡ್ಡಪುರ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮೂಲದ ಕೃಷ್ಣಪ್ಪ ಎಂಬವರೇ ಮೃತ ದುರ್ದೈವಿ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೆಲ್ಫಿ ‌ವಿಡಿಯೋ ಮಾಡಿರುವ ಅವರು, ಒಂದು ಲಕ್ಷ ರೂ. ಸಾಲಕ್ಕೆ ಬರೋಬ್ಬರಿ 40 ಲಕ್ಷ ರೂಪಾಯಿಯ ಕೇಸ್. ಈ ಕಿರುಕುಳವನ್ನು ‌ನಾನು ಇನ್ಯಾವ ಕಾಲಕ್ಕೆ ತಡೆದುಕೊಳ್ಳಲಿ ಎಂದು ಕಣ್ಣೀರಿಟ್ಟಿದ್ದಾರೆ. ನೆಲಮಂಗಲದ ರಮೇಶ್ ಮತ್ತು ಮಂಜು ಎಂಬವರ ಹೆಸರನ್ನು ಉಲ್ಲೇಖ ಮಾಡಿದ್ದು, ನಾನು

ಸಾಲಗಾರರ ಕಾಟ: ವ್ಯಕ್ತಿ ಆತ್ಮಹತ್ಯೆ Read More »

ನಾಳೆಯಿಂದ ಕೆಎಸ್‌ಆರ್‌ಟಿಸಿ ನೌಕರರ ಹೋರಾಟ : ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿರುವ ನೌಕರರು ಬೆಂಗಳೂರು: ಸಾರಿಗೆ ನೌಕರರು ತಮ್ಮ ದೀರ್ಘಾಕಾಲದ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜ.29ರಿಂದ ನಿರ್ಣಾಯಕ ಹೋರಾಟಕ್ಕೆ ಮುಂದಾಗಿದ್ದಾರೆ. ಎಲ್ಲ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಹೀಗಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಸಂಘಟನೆಗಳು ನಾಳೆ ತನಕ ಸರ್ಕಾರಕ್ಕೆ ಡೆಡ್‌ಲೈನ್ ನೀಡಿವೆ. ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ದರೆ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ ನೀಡಿವೆ. ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ

ನಾಳೆಯಿಂದ ಕೆಎಸ್‌ಆರ್‌ಟಿಸಿ ನೌಕರರ ಹೋರಾಟ : ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ Read More »

ರಾಜೀವ್‌ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಆರೋಪಿಗೆ ಅಡಗಿಕೊಳ್ಳಲು ಮಂಗಳೂರಿನಲ್ಲಿ ಆಶ್ರಯ ನೀಡಿದ ಉದ್ಯಮಿ ಮಂಗಳೂರು : ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಮಂಗಳೂರಿನ ಉದ್ಯಮಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಮಂಗಳವಾರ ರಾಜೀವ್‌ ಗೌಡನ ಜೊತೆಗೆ ಉದ್ಯಮಿಯನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ರಾಜೀವ್‌ ಗೌಡನಿಗೆ 14 ದಿನಗಳ ಕಸ್ಟಡಿ ವಿಧಿಸಿದೆ. ಉದ್ಯಮಿ ಮೈಕಲ್ ಜೋಸೇಫ್ ರೆಗೋಗೆ ಜಾಮೀನು ನೀಡಿದೆ. ಮೈಕಲ್ ಜೋಸೇಫ್ ರೆಗೋಗೆ ಸೇರಿದ್ದ ಪಚ್ಚನಾಡಿಯ

ರಾಜೀವ್‌ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ Read More »

ಪತ್ನಿ ಮತ್ತೊಬ್ಬನ ಜೊತೆ ಪರಾರಿ: ಪತಿ ನೇಣಿಗೆ ‌ಶರಣು

ದಾವಣಗೆರೆ: ವಿವಾಹವಾದ ಎರಡೇ ತಿಂಗಳಿಗೆ ಪತ್ನಿ ಮತ್ತೊಬ್ಬನ ಜೊತೆ ಪರಾರಿಯಾಗಿದ್ದು, ಘಟನೆಯಿಂದ ಮನನೊಂದ ಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್ (32) ಮೃತ ದುರ್ದೈವಿ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹರೀಶ್ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಪತ್ನಿ ಮತ್ತೊಬ್ಬನ ಜೊತೆಗೆ ಓಡಿ ಹೋಗಿರುವುದನ್ನು ಉಲ್ಲೇಖ ಮಾಡಿದ್ದಾರೆ. ಹಾಗೆಯೇ ತನ್ನ ಸಾವಿಗೆ ಪತ್ನಿ, ಅತ್ತೆ, ಮಾವ ಮತ್ತು ಅವಳನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಹೇಳಿದ್ದಾರೆ. ಹರೀಶ್ ಮೇಲೆ ಪತ್ನಿ

ಪತ್ನಿ ಮತ್ತೊಬ್ಬನ ಜೊತೆ ಪರಾರಿ: ಪತಿ ನೇಣಿಗೆ ‌ಶರಣು Read More »

ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ: ಡಿ. ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯತ್‌ಗಳಿಗೆ ಗಾಂಧೀಜಿ ಅವರ ಹೆಸರನ್ನು ಮರು ನಾಮಕರಣ ಮಾಡುವ ಮೂಲಕ ಅವರ ತತ್ವಗಳನ್ನು ಶಾಶ್ವತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿ ಸಿ ಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಅವರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಮನ್‌ರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲು ಪ್ರಯತ್ನ ನಡೆಸುತ್ತಿದೆ. ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಇದರ

ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ: ಡಿ. ಕೆ. ಶಿವಕುಮಾರ್ Read More »

ಆಸ್ತಿಗಾಗಿ ಹೆತ್ತ ತಾಯಿಗೆ ಚಟ್ಟ ‌ಕಟ್ಟಿದ ನೀಚ ಪುತ್ರ

ಲಿಂಗಸೂಗೂರು: ಮೂರು ಎಕರೆ ಜಮೀನಿಗಾಗಿ ಮಗನೇ ಹೆತ್ತಮ್ಮನನ್ನು ಕಲ್ಲು ಎತ್ತಿ ಹಾಕಿ ಕೊಂದ ಘಟನೆ ಜಕ್ಕೇರುಮಡು ಗ್ರಾಮದಲ್ಲಿ ನಡೆದಿದೆ. ಕುಮಾರ ಎಂಬಾತನೇ ಆರೋಪಿ. ಚಂದವ್ವ (55) ಎಂಬವರೇ ‌ಮೃತ ದುರ್ದೈವಿ. ಕುಮಾರ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿ ಬಂದಿದ್ದ. ಈತನಿಗೆ ತನ್ನ ತಾಯಿಯ ಹೆಸರಿನಲ್ಲಿದ್ದ ಆಸ್ತಿಯ ಮೇಲೆ ಕಣ್ಣಿತ್ತು. ಆ ಜಮೀನನ್ನು ತನಗೆ ಮತ್ತು ಅಣ್ಣನಿಗೆ ಭಾಗ ಮಾಡಿ ಕೊಡುವಂತೆ ಆಗಾಗ್ಗೆ ಜಗಳ ಮಾಡುತ್ತಿದ್ದ. ಆದರೆ ಇದಕ್ಕೆ ತಾಯಿ ಒಪ್ಪುತ್ತಿರಲಿಲ್ಲ. ತಾಯಿಯನ್ನು ಕೊಲ್ಲುವ ದಿನ

ಆಸ್ತಿಗಾಗಿ ಹೆತ್ತ ತಾಯಿಗೆ ಚಟ್ಟ ‌ಕಟ್ಟಿದ ನೀಚ ಪುತ್ರ Read More »

ಎಟಿಎಂಗೆ ಹಣ ತುಂಬುವ ಸಿಬ್ಬಂದಿಯೇ ಕೋಟಿಗಟ್ಟಲೆ ರೂಪಾಯಿಯೊಂದಿಗೆ ಎಸ್ಕೇಪ್‌

ಎರಡು ತಂಡವಾಗಿ ಹಣ ಎಗರಿಸಿಕೊಂಡು ಪಲಾಯನ ಮಾಡಿದ ಸಿಬ್ಬಂದಿ ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ನಡೆಸಿದ್ದ ಎಟಿಎಂ ದರೋಡೆ ಪ್ರಕರಣಮಾದರಿಯಲ್ಲೇ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿ ಎಟಿಎಂಗೆ ತುಂಬಲು ಕೊಟ್ಟಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು ಎಸ್ಕೇಪ್ ಆಗಿದ್ದಾರೆ.

ಎಟಿಎಂಗೆ ಹಣ ತುಂಬುವ ಸಿಬ್ಬಂದಿಯೇ ಕೋಟಿಗಟ್ಟಲೆ ರೂಪಾಯಿಯೊಂದಿಗೆ ಎಸ್ಕೇಪ್‌ Read More »

error: Content is protected !!
Scroll to Top