ರಾಜ್ಯ

ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ

ಚಿಕ್ಕಮಗಳೂರು: ಹಣಕ್ಕಾಗಿ ತಂದೆಯೇ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಘಟನೆ ಬಿರೂರು ಹೋಬಳಿಯ ಗ್ರಾಮವೊಂದರಲ್ಲಿ ‌ನಡೆದಿದೆ. ಆರೋಪಿ ತಂದೆ ಗಿರೀಶ್ ಮತ್ತು ಆರೋಪಿ ಅಜ್ಜಿ ನಾಗರತ್ನ ‌ಸೇರಿ ತಾಯಿ ಇಲ್ಲದ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಿರುವುದಾಗಿದೆ. ಆರೋಪಿಗಳು ಭರತ್ ಎಂಬಾತನ ಜೊತೆ ಸೇರಿ 16 ವರ್ಷದ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು ಸುಮಾರು ಆರು ದಿನಗಳ ಕಾಲ 10 ಕ್ಕೂ ಹೆಚ್ಚು ಕಾಮಾಂಧರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾರೆ. ಆಕೆ ಋತುಮತಿ ಎಂಬುದನ್ನೂ ಪರಿಗಣಿಸದೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ […]

ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ Read More »

ಬಿಜೆಪಿ ಕಾರ್ಯಕರ್ತೆಯನ್ನು ‌ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್

ಈ ಬಗ್ಗೆ ಮಹಾನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಹೇಳಿದ್ದೇನು ಗೊತ್ತಾ? ಹುಬ್ಬಳ್ಳಿ: ಪೊಲೀಸರು ಬಂಧಿಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಬಗ್ಗೆ ಮಾತನಾಡಿರುವ ಮಹಾನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪೊಲೀಸರು ಬಂಧಿತ ಬಿಜೆಪಿ ಕಾರ್ಯಕರ್ತೆ ಸುಜಾತಾ ಹುಂಡಿ ಅವರ ಬಟ್ಟೆ ಬಿಚ್ಚಿಸಿ, ಹಲ್ಲೆ ನಡೆಸಿಲ್ಲ. ಬದಲಾಗಿ ಪೊಲೀಸ್ ವ್ಯಾನಿನಲ್ಲಿ ಬಂಧಿಸಿ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೇ ಮಹಿಳಾ ಪೊಲೀಸ್ ಸಿಬ್ಬಂದಿ ಒಬ್ಬರ ಹೊಟ್ಟೆಗೆ ಕಚ್ಚಿ ಗಾಯಗೊಳಿಸಿದ್ದು

ಬಿಜೆಪಿ ಕಾರ್ಯಕರ್ತೆಯನ್ನು ‌ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ

ಇನ್ನೋರ್ವ ಉನ್ನತ ಪೊಲೀಸ್‌ ಅಧಿಕಾರಿಯ ತಲೆದಂಡ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ.‌ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಹರ್ಷ ಗುಪ್ತಾ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್

ಬಳ್ಳಾರಿ ಬ್ಯಾನರ್‌ ಗಲಾಟೆ : ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ Read More »

ಪಲ್ಟಿಯಾಗಿ ಕಂದಕಕ್ಕೆ ಉರುಳಿ ಹೊತ್ತಿ ಉರಿದ ಕಾರು : ಇಬ್ಬರು ಸಜೀವ ದಹನ

ಗುರುತೇ ಸಿಗದಂತೆ ಸುಟ್ಟು ಕರಲಾಗಿರುವ ಇಬ್ಬರು ಪ್ರಯಾಣಿಕರು ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಇಬ್ಬರು ಸಜೀವ ದಹನಗೊಂಡ ಭೀಕರ ಅಪಘಾತ ನಿನ್ನೆ ರಾತ್ರಿ ಸಂಭವಿಸಿದೆ. ಕಾರಿನ ನಂಬರ್‌ ಸಮೇತ ಸುಟ್ಟುಹೋಗಿದ್ದು, ಕಾರಿನಲ್ಲಿದ್ದ ಇಬ್ಬರು ಗುರುತೇ ಸಿಗದಷ್ಟು ಸುಟ್ಟು ಕರಕಲಾಗಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿದೆ. ನಂತರ ಕಂದಕಕ್ಕೆ ಉರುಳಿರುವ ಅನುಮಾನ

ಪಲ್ಟಿಯಾಗಿ ಕಂದಕಕ್ಕೆ ಉರುಳಿ ಹೊತ್ತಿ ಉರಿದ ಕಾರು : ಇಬ್ಬರು ಸಜೀವ ದಹನ Read More »

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪೊಲೀಸರು

ಬಂಧನಕ್ಕೆ ಪ್ರತಿರೋಧ ತೋರಿದಾಗ ಥಳಿಸಿದ ವಿಡಿಯೋ ವೈರಲ್‌ ಬೆಂಗಳೂರು: ಇಲ್ಲಿನ ಕೇಶ್ವಾಪುರ ಠಾಣೆಯ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ಮೇಲೆ ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಪ್ರತಿರೋಧ ತೋರಿದ ಮಹಿಳೆಯ ಬಟ್ಟೆ ಬಿಚ್ಚಿ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪೊಲೀಸರು Read More »

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ

ಶವ ಹೂಳುವ ಸಂಪ್ರದಾಯದವರು ದಹನ ಮಾಡಿದ್ದು ಏಕೆ ಎಂದು ಶ್ರೀರಾಮುಲು ಪ್ರಶ್ನೆ ಬಳ್ಳಾರಿ: ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯ ಸಂಸ್ಕಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ರಾಜಶೇಖರ ಮೃತದೇಹ ಸುಟ್ಟು ಹಾಕಿದ್ದಾರೆ ಎಂದಿರುವ ಶ್ರೀರಾಮುಲು ಹೆಚ್ಚುವರಿ ಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ರೆಡ್ಡಿ ಸಮುದಾಯದಲ್ಲಿ ಮೃತದೇಹ ಸುಡುವುದಿಲ್ಲ ಬದಲಾಗಿ ಹೂಳುವ ಸಂಪ್ರದಾಯವಿದೆ. ಆದರೆ ರಾಜಶೇಖರ್‌ ರೆಡ್ಡಿ ಶವವನ್ನು ಸುಟ್ಟಿರುವುದು ಅನುಮಾನಕ್ಕೆಡೆ ಮಾಡಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ Read More »

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಾರು ಚಾಲಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿ: ಸಚಿವೆ ‌ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಹಾಡು ಹಗಲೇ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಇರಿತಕ್ಕೊಳಗಾದವರನ್ನು ಬೆಳಗುಂದಿ ಗ್ರಾಮದ ಬಸವಂತ ಗಣಪತ ಕಡೋಲಕರ ಎಂದು ಗುರುತಿಸಲಾಗಿದೆ. ಅವರ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಹಲ್ಲೆ

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಾರು ಚಾಲಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು Read More »

ಶಾಲೆಯ ಅಡುಗೆ ಸಿಬ್ಬಂದಿ ಬೆಂಕಿ ತಗುಲಿ‌ ಸಾವು

ಕಾಸರಗೋಡು: ಬಂಗ್ರ ಮಂಜೇಶ್ವರ ಸರ್ಕಾರಿ ಪ್ರೌಢಶಾಲೆಯ ಅಡುಗೆ ಕೆಲಸಗಾರ್ತಿ ಬೆಂಕಿ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಾವರ ಮಾಡ ನಿವಾಸಿ ಜಯಾ (56) ಎಂಬವರೇ ‌ಮೃತ ದುರ್ದೈವಿ. ಶಾಲೆಯಲ್ಲಿ ಮಧ್ಯಾಹ್ನದ ಆಹಾರ ತಯಾರಿಸುವ ವೇಳೆ ಸ್ಟವ್‌ನಿಂದ ಬೆಂಕಿ ತಗುಲಿದೆ. ಅವರ ಚೀರಾಟ ಕೇಳಿ ಅಧ್ಯಾಪಕರುಗಳು ಓಡಿ ಬಂದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ. ಕಳೆದ 20 ವರ್ಷಗಳಿಂದ ಅವರು ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಶಾಲೆಯ ಅಡುಗೆ ಸಿಬ್ಬಂದಿ ಬೆಂಕಿ ತಗುಲಿ‌ ಸಾವು Read More »

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ

ಉಳಿದವರೆಲ್ಲ ಹೊರಗಿನವರು ಎಂದು ವರದಿ ಸಲ್ಲಿಸಿದ ಅಧಿಕಾರಿಗಳು ಬೆಂಗಳೂರು: ನೆಲಸಮ ಕಾರ್ಯಾಚರಣೆಯಿಂದ ದೇಶಾದ್ಯಂತ ಸುದ್ದಿಯಾಗಿರುವ ವಿವಾದಗ್ರಸ್ತ ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಹೊರಗಿನಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಸಂಗ್ರಹಿಸಿದ್ದು, ಅವುಗಳ ನೈಜತೆಯನ್ನು ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ Read More »

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌

ಆರ್‌ಎಸ್‌ಎಸ್‌ನವರು ವಿಷಕಾರಿಗಳು ಎಂದಿ ಅವಹೇಳನ ಮಾಡಿದ್ದ ಪ್ರಿಯಾಂಕ್‌ ಖರ್ಗೆ ಬೆಂಗಳೂರು : ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌ Read More »

error: Content is protected !!
Scroll to Top