ರಾಜ್ಯ

ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು

ಮೂಡುಬಿದ್ರೆ: ಸಿಎಂ ‌ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಮೂಡುಬಿದ್ರೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ರಾಷ್ಟ್ರ ಭಕ್ತ ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ. ಮಹೇಶ್ ವಿಕ್ರಂ ಹೆಗ್ಡೆ ಅವರ ಪರ ವಾದಿಸಿದ್ದ ‌ವಕೀಲ ಶರತ್ ಶೆಟ್ಟಿ ವಾದಿಸಿದ್ದು, ಜಾಮೀನು ಅರ್ಜಿಯ ವಿಚಾರಣೆ ಸಹ ನಡೆಸಿತ್ತು. ಸದ್ಯ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು Read More »

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು

ಬೆಂಗಳೂರು: ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ ನಡೆದ ಗಣೇಶೋತ್ಸವದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಮದ್ದೂರಿನಲ್ಲಿಯೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅವರು ತುಮಕೂರಿನಲ್ಲಿ ಶನಿವಾರ ನಡೆದ ಗಣೇಶ ವಿಸರ್ಜನಾ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅನ್ಯ ಕೋಮಿನ ಜನರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡಿದ್ದಾಗಿ ಪೊಲೀಸ್ ಸಿಬ್ಬಂದಿ ರಘುನಾಥ್ ದೂರು ನೀಡಿರುವುದಾಗಿದೆ. ಈ

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು Read More »

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ

ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಮಾಹಿತಿ ಸಂಗ್ರಹ ನೆಪದಲ್ಲಿ ಸಿದ್ದರಾಮಯ್ಯ ಹೊಸ ಕುತಂತ್ರ ಬೆಂಗಳೂರು: ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ ‘ಕ್ರಿಶ್ಚಿಯನ್’ ಸೇರಿಸಿರುವ ಸರ್ಕಾರದ ಕ್ರಮ ಹೊಸ ವಿವಾದವನ್ನು ಸೃಷ್ಟಿ ಮಾಡಿದೆ. ಕ್ರಿಶ್ಚಿಯನ್‌ ಸೇರ್ಪಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪಪ್ರಚಾರ ನಡೆಸುವಂತೆ ಕುಮ್ಮಕ್ಕು ನೀಡುತ್ತಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ Read More »

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿ ಸುರೇಶ್ ಗೌಡ ಮಾತನಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಮಾತನಾಡಿ ಯೋಜನೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಷ್ಣುಮೂರ್ತಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ Read More »

ಡ್ರಗ್ಸ್‌ ಮಾರಾಟಗಾರರ ಜೊತೆ ಕೈಜೋಡಿಸಿದ್ದ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರ ಅಮಾನತು

ತಿಂಗಳಿಗೆ 1ರಿಂದ 1.5 ಲ.ರೂ. ಕಮಿಷನ್‌ ಪಡೆಯುತ್ತಿದ್ದ ಪೊಲೀಸರು ಬೆಂಗಳೂರು: ಪೊಲೀಸರೇ ಡ್ರಗ್‌ ಪೆಡ್ಲರ್​ಗಳೊಂದಿಗೆ ಕೈಜೋಡಿಸಿರುವ ಆಘಾತಕಾರಿ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಓರ್ವ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. ಆರೋಪಿಗಳ ಜೊತೆ ಸೇರಿ ಡ್ರಗ್ಸ್​ ಮಾಫಿಯಾದಲ್ಲಿ ಭಾಗಿಯಾಗಿದ್ದ, ಡ್ರಗ್‌ ಪೆಡ್ಲರ್ಸ್ ಜೊತೆಗೆ ನಂಟು ಆರೋಪದ ಮೇಲೆ ಬೆಂಗಳೂರಿನ ಚಾಮರಾಜಪೇಟೆ ಠಾಣೆಯ ಇನ್‌ಸ್ಪೆಕ್ಟರ್‌ ಟಿ.ಮಂಜಣ್ಣ ಸೇರಿ ಚಾಮರಾಜಪೇಟೆ ಮತ್ತು ಜೆಜೆ ನಗರ ಠಾಣೆಯ 10 ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಡ್ರಗ್ಸ್‌ ಮಾರಾಟಗಾರರ ಜೊತೆ ಕೈಜೋಡಿಸಿದ್ದ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರ ಅಮಾನತು Read More »

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಸಾರ್ವಜನಿಕವಾಗಿ ಆಚರಣೆ ಮಾಡುವ ಯಾವುದೇ ಹಬ್ಬಗಳಿಗೆ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆ ಅಡ್ಡಿ ಮಾಡಿಲ್ಲ. ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ‘ಶಬ್ದದ ಮಿತಿ’ ನಿಗದಿ ಮಾಡಲಾಗಿದ್ದು, ಅದನ್ನು ಅನುಸರಿಸಿಕೊಂಡು ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಗಣೇಶೋತ್ಸವ ಮೆರವಣಿಗೆಗಳು ತಂಡ ರಾತ್ರಿಯ ವರೆಗೆ ನಡೆದಿದ್ದು, ಅಲ್ಲಿ ಯಾವ ಸಮಸ್ಯೆಯೂ ಆಗಿಲ್ಲ. ಪೊಲೀಸರು ಸಮಸ್ಯೆ ಮಾಡಿಲ್ಲ. ಆದರೆ ಶಬ್ದ ಮಿತಿಯನ್ನು ಮಾತ್ರ ಹಾಕಲಾಗಿತ್ತು ಎಂದು ತಿಳಿಸಿದ್ದಾರೆ.

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ Read More »

ಹಾಸನ ದುರಂತ : ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ

ಸಾವಿನ ಸಂಖ್ಯೆ 9ಕ್ಕೇರಿಕೆ : ಮೃತರಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಅಧಿಕ ಹಾಸನ : ಗಣೇಶ ಮೆರವಣಿಗೆ ವೇಳೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. 17ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಮೃತರ ಪೈಕಿ ಬಹುತೇಕರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾಗಿದ್ದಾರೆ.

ಹಾಸನ ದುರಂತ : ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ Read More »

ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್‌; ಮೃತರ ಸಂಖ್ಯೆ 8ಕ್ಕೇರಿಕೆ

ಮೃತರ ಕುಟುಂಬಗಳಿಗೆ ಸರ್ಕಾರದಿಂದ 5 ಲ.ರೂ. ಪರಿಹಾರ; ಗಾಯಾಳುಗಳಿಗೆ ಚಿಕಿತ್ಸೆ ವೆಚ್ಚ ಹಾಸನ : ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಸಂಭವಿಸದ ಭೀಕರ ದುರಂತದಲ್ಲಿ ಮೃತಪಟ್ರ ಸಂಖ್ಯ 8ಕ್ಕೇರಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಹೋಗುತ್ತಿದ್ದ ಜನರ ಮೇಲೆ ಟ್ರಕ್‌ ಹರಿದು ಈ ದುರಂತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಸನ ತಾಲೂಕಿನ

ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್‌; ಮೃತರ ಸಂಖ್ಯೆ 8ಕ್ಕೇರಿಕೆ Read More »

ಆನೆ ಮಾವುತನ ಕೊಲೆ ಪ್ರಕರಣ ಮರು ತನಿಖೆ ಆಗ್ರಹಿಸಿ ಎಸ್‌ಐಟಿಗೆ ದೂರು

2012ರಲ್ಲಿ ಧರ್ಮಸ್ಥಳ ಸಮೀಪ ಬೂರ್ಜೆಯಲ್ಲಿ ನಡೆದ ಅವಳಿ ಕೊಲೆ ಪ್ರಕರಣ ಧರ್ಮಸ್ಥಳ : ಧರ್ಮಸ್ಥಳದ ಆನೆ ಮಾವುತ ನಾರಾಯಣ ಹಾಗೂ ತಂಗಿ ಯಮುನಾ ಕೊಲೆ ಕೇಸ್ ಸಂಬಂಧ ಕೊಲೆಯಾಗಿರುವ ನಾರಾಯಣ ಅವರ ಪುತ್ರ ಗಣೇಶ ಹಾಗೂ ಪುತ್ರಿ ಭಾರತಿ ಎಸ್‌ಐಟಿಗೆ ಮತ್ತೆ ದೂರು ನೀಡಿದ್ದಾರೆ. ಹೈಕೋರ್ಟ್‌ನಲ್ಲಿ‌ ಕೇಸ್ ಇದ್ದ ಹಿನ್ನೆಲೆಯಲ್ಲಿ ದೂರು ತೆಗೆದುಕೊಳ್ಳಲು ಆಗವುದಿಲ್ಲ ಅಂತ ಎಸ್​ಐಟಿ ಈ ಮೊದಲು ದೂರು ನೀಡಲು ಬಂದಾಗ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಿಂದ ದೂರು ಹಿಂಪಡೆದು ಮತ್ತೆ ಎಸ್‌ಐಟಿಗೆ ದೂರು

ಆನೆ ಮಾವುತನ ಕೊಲೆ ಪ್ರಕರಣ ಮರು ತನಿಖೆ ಆಗ್ರಹಿಸಿ ಎಸ್‌ಐಟಿಗೆ ದೂರು Read More »

ನಿರ್ದೇಶಕ, ನಟ ಎಸ್‌.ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು

ಸೊಸೆಗೆ ವರದಕ್ಷಿಣೆ ತರಲು ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ ಆರೋಪ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಮತ್ತು ನಟ ಎಸ್​. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ದಾಖಲಾಗಿದೆ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ನೀಡಿದ್ದು, ಇದರನ್ವಯ ಎಫ್​ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಅವರ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ನಡೆದಿತ್ತು. ನಾಲ್ಕು ವರ್ಷ ಕಳೆಯುವುದರೊಳಗೆ ಸಂಸಾರ ಹಳಿತಪ್ಪದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ನಿರ್ದೇಶಕ, ನಟ ಎಸ್‌.ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು Read More »

error: Content is protected !!
Scroll to Top